ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆಯು ಇದೀಗ ಮುನ್ಸುಚನೆ ಯನ್ನು ನೀಡಿದೆ. ಹೌದು ಇಂದಿನಿಂದ ಒಟ್ಟು ಏಳು ದಿನಗಳ ಕಾಲ ಕೆಲವು ಜಿಲ್ಲೆಯಲ್ಲಿ ಮಳೆ ಯಾಗುವ ಸಾಧ್ಯತೆ ಇರಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿದ್ದು ಅಲ್ಲಿ ಈಗಾಗಲೇ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹಾಗಾಗಿ ರಾಜ್ಯದಲ್ಲಿ ಮತ್ತೆ ಏಳು ದಿನ ಮಳೆ ಯಾಗಲಿದ್ದು ಮುಂದಿನ ಏಳು ದಿನಗಳವರೆಗೆ ಭಾರೀ ಮಳೆ (Heavy Rainfall) ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಇದೀಗ ನೀಡಿದೆ.
ಈ ಜಿಲ್ಲೆಯಲ್ಲಿ ಮಳೆಯಾಗಲಿದೆ!
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಮಂಡ್ಯ, ತುಮಕೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ (Heavy Rainfall) ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಹಾಗಾಗಿ ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಈಗಾಗಲೇ ಆಂಧ್ರಪ್ರದೇಶದ ಕರಾವಳಿಯಲ್ಲಿ 5.8 ಕಿ.ಮೀ ಎತ್ತರದವರೆಗೆ ಮಳೆ ಬೀಳ ಲಾರಂಭಿಸಿದ್ದು ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.21ರ ವರೆಗೆ ಹಲವು ಕಡೆ ಮಳೆ ಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಇನ್ನು ದಕ್ಷಿಣ ಒಳನಾಡಿನ ಕರ್ನಾಟಕ ದ ಉಳಿದ ಜಿಲ್ಲೆಗಳಲ್ಲಿಯು ಮಳೆಯಾಗುವ ಸಾಧ್ಯತೆ ಇರಲಿದೆ.ಹಾಗೆಯೇ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಎಚ್ಚರಿಕೆ ನೀಡಲಾಗಿದೆ!
ಚಂಡಮಾರುತದ ಪರಿಣಾಮ ಸಮುದ್ರದಲ್ಲಿ ಭಾರಿ ಪ್ರಮಾಣದ ಅಲೆಗಳು ಬರಲಿದ್ದು ಮೀನು ಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಕೂಡ ನೀಡಲಾಗಿದೆ.ಅ. 23ರಂದು ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಅಕ್ಟೋಬರ್ 24 ಮತ್ತು 25 ರಂದು ಗಂಗಾನದಿ ಪಶ್ಚಿಮ ಬಂಗಾಳದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.