Karnataka Times
Trending Stories, Viral News, Gossips & Everything in Kannada

Hyundai Creta: ಕೇವಲ 11 ಲಕ್ಷಕ್ಕೆ ಸಿಗುವ ಈ ಕಾರಿಗಾಗಿ ಶೋರೂಂ ಮುತ್ತಿಗೆ ಹಾಕಿದ ಗ್ರಾಹಕರು, 21 ಕಿ.ಮೀ ಮೈಲೇಜ್!

advertisement

ಭಾರತದಲ್ಲಿ ಮನಗೆದ್ದ ಹ್ಯುಂಡೈ ಪ್ರಮುಖ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಕಳೆದ ತಿಂಗಳು ಜನಪ್ರಿಯ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು. ಈ ಕಾರು ಹೇರಳವಾದ ಖ್ಯಾತಿಯನ್ನು ಹೊಂದಿದ್ದು, ಇತ್ತೀಚೆಗೆ 50,000 ಯುನಿಟ್ ಬುಕ್ಕಿಂಗ್ ಮೈಲಿಗಲ್ಲನ್ನು ಸಾಧಿಸಿ ದಾಖಲೆಯನ್ನು ನಿರ್ಮಿಸಿತ್ತು.

Hyundai Creta Specification:

 

 

ಸದ್ಯ ಹ್ಯುಂಡೈ ಕ್ರೆಟಾ ಎಸ್‌ಯುವಿಗೆ ಮತ್ತಷ್ಟು ಬೇಡಿಕೆ ಬಂದಿದ್ದು, ಹೆಚ್ಚಿನ ಕಾಯುವಿಕೆ ಅವಧಿಯನ್ನು ಪಡೆದಿದೆ. ಪೆಟ್ರೋಲ್ ಮಾದರಿಗಳು ವಿತರಣೆಯಾಗಲು 5 ರಿಂದ 7 ತಿಂಗಳು ಹಿಡಿಯುತ್ತದೆ. ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ದೊರೆಯುವ ಮಾದರಿಗಳನ್ನು ನೀವು ಇವತ್ತು ಆರ್ಡರ್ ಮಾಡಿದರೂ ಡೆಲಿವರಿ ಮಾಡಲು ಕನಿಷ್ಠವೆಂದರೂ 4 ರಿಂದ 5 ತಿಂಗಳು ಸಮಯಾವಕಾಶ ಬೇಕೆಂದು ವರದಿಯಾಗಿದೆ.

ಇನ್ನು ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಎಸ್‌ಯುವಿ, ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಇ, ಇಎಕ್ಸ್, ಎಸ್, ಎಸ್(ಒ), ಎಸ್ಎಕ್ಸ್ ಟೆಕ್ ಸೇರಿದಂತೆ 7 ರೂಪಾಂತರಗಳ ಆಯ್ಕೆಯಲ್ಲಿ ಸಿಗುತ್ತದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ, ರೇಂಜರ್ ಖಾಕಿ ಒಳಗೊಂಡಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ.

ನೂತನ ಹ್ಯುಂಡೈ ಕ್ರೆಟಾ ಕಾರು ಹೇಗಿದೆ?

 

advertisement

 

ಇನ್ನು ಈ ಕಾರಿನ ಕುರಿತು ಹೇಳೋದಾದ್ರೆ ಪವರ್‌ಟ್ರೇನ್ ಬಗ್ಗೆ ಹೇಳುವುದಾದರೆ, ಇದು 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಜೊತೆಗೆ ರೂಪಾಂತರಗಳ ಅನ್ವಯ 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್, ಸಿವಿಟಿ, 7-ಸ್ವೀಡ್ ಡಿಸಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ.

ಕ್ರೆಟಾದ ಪೆಟ್ರೋಲ್ ಮಾದರಿಗಳು 17.4 ಕೆಎಂಪಿಎಲ್ – 18.4 ಕೆಎಂಪಿಎಲ್, ಡೀಸೆಲ್ ಮಾದರಿಗಳು 19.1 ಕೆಎಂಪಿಎಲ್ – 21.8 ಕೆಎಂಪಿಎಲ್ ಮೈಲೇಜ್ ನೀಡುತ್ತವೆ. ಈ ಕಾರು 2WD (ಟೂ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದ್ದು, ವಿನ್ಯಾಸದ ದೃಷ್ಟಿಯಿಂದಲೂ ಹೆಚ್ಚು ಅತ್ಯಾಧುನಿಕವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ 10.25-ಇಂಚಿನ ಡುಯಲ್ ಡಿಸ್ಪ್ಲೇ, ಕನೆಕ್ಟ್ದ್ ಕಾರ್ ಟೆಕ್, ಡುಯಲ್ ಝೋನ್ ಎಸಿ, 8 ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್),TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡಿಮಾಂಡ್ ಹೇಗಿದೆ!

ಈ ಕಾರಿಗೆ Kia Seltos, Maruti Suzuki Grand Vitara, Toyota Hyryder, Skoda Kushaq, Volkswagen Tiguan, Citrus C3 Aircross and Honda Elevate ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಇನ್ನು, ಬಿಡುಗಡೆಯಾಗಿ ಕೆಲವೇ ದಿನಗಳಲ್ಲಿ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ ಭಾರೀ ಬೇಡಿಕೆ ಪಡೆದುಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಮುಂಬರುವ ತಿಂಗಳಲ್ಲಿ ಮತ್ತಷ್ಟು ಡಿಮ್ಯಾಂಡ್ ಬರಬಹುದು.

advertisement

Leave A Reply

Your email address will not be published.