Karnataka Times
Trending Stories, Viral News, Gossips & Everything in Kannada

Kumarswamy: ಕುಟುಂಬದ ಖಾಸಗಿ ವಿಷಯ ಹೊರಹಾಕಿದ ಮಾಜಿ ಸಿಎಂ ಕುಮಾರಸ್ವಾಮಿ.

ಸದ್ಯ ಇದೀಗ ಹಾಸನ (Hassan) ಕ್ಷೇತ್ರದಲ್ಲಿ ಜೆಡಿಎಸ್ (JDS) ಅಭ್ಯರ್ಥಿಯ ವಿಚಾರವಾಗಿ ಬಹಳಾನೇ ಕಗ್ಗಂಟಾಗಿರುವ ಸಂದರ್ಭದಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ(Anitha Kumaraswamy) ಯವರು ಈ ಬಾರಿ ಖಂಡಿತ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿಗಳು ಹರಿದಾಡಿತ್ತು. ಬಳಿಕ ಶಾಸಕಿ ಅನಿತಾ ಕುಮಾರಸ್ವಾಮಿಯವರು ಟ್ವೀಟ್ (Tweet) ಮುಖಾಂತರವಾಗಿ ತಮ್ಮ ಮೇಲಿನ ವದಂತಿಗಳನ್ನು ತಳ್ಳಿಹಾಕಿದ್ದು ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ನಿಖಿಲ್‌ ಕುಮಾರಸ್ವಾಮಿಯವರು (Nikhil Kumarswamy) ಪಂಚರತ್ನ (Pamcharathna) ರಥಯಾತ್ರೆಯ ಸಂದರ್ಭದಲ್ಲಿ ನನ್ನನ್ನು ರಾಮನಗರದ (Ramanagar)ಅಭ್ಯರ್ಥಿ ಎಂದು ಘೋಷಣೆ ಮಾಡಿದ ಕ್ಷಣದಿಂದ ಕೂಡ ಅನಿತಾ ಕುಮಾರಸ್ವಾಮಿಯವರು ಚುನಾವಣಾ ರಾಜಕೀಯದಿಂದ (Politics) ದೂರ ಆಗಿದ್ದಾರೆ ಎಂದು ನುಡಿದಿದ್ದಾರೆ.

Advertisement

ಅನಿತಾ ಕುಮಾರಸ್ವಾಮಿ ಸ್ಪರ್ಧೆ ಅನಿರೀಕ್ಷಿತ..

Advertisement

ಇನ್ನು ರಾಮನಗರದಲ್ಲೂ ಕೂಡ ಅನಿತಾ ಕುಮಾರಸ್ವಾಮಿ ಅವರ ಸ್ಪರ್ಧೆ ಅನಿರೀಕ್ಷಿತವಾಗಿದ್ದು ಈ ಹಿಂದೆ ಪಕ್ಷ ಸಾಮಾನ್ಯ ಕಾರ್ಯಕರ್ತರಾಗಿದ್ದ ಕೆ.ರಾಜು (K Raju)ಅವರನ್ನು ಕಣಕ್ಕಿಳಿಸಲಾಗಿತ್ತು. ಆಗ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ಬಳಿಕ ಅವರು ಜೆಡಿಎಸ್ ತೊರೆದು ಕಾಂಗ್ರೆಸ್‌ (Congress) ಸೇರ್ಪಡೆಯಾಗಿ ಜೆಡಿಎಸ್ ವಿರುದ್ಧವೇ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಚುನಾವಣೆಯಲ್ಲಿ‌ ತಮ್ಮ ಕುಟುಂಬದಿಂದಲೇ ಅಭ್ಯರ್ಥಿ ಮಾಡಬೇಕು ಎಂದು ಕಾರ್ಯಕರ್ತರು ಒತ್ತಡ ಹಾಕಿದ ಕಾರಣ ಅನಿತಾ ಕುಮಾರಸ್ವಾಮಿಯವರು ಸ್ಪರ್ಧೆ ಮಾಡಿದ್ದರು ಎಂದರು ರಾಜ್ಯ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು.

Advertisement

ಕಳೆದ ಬಾರಿಯೇ ಸ್ಪರ್ಧಿಸಬೇಕಿತ್ತು.

Advertisement

ಕಳೆದ ಬಾರಿಯ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧೆ ಮಾಡುವಂತೆ ನನಗೂ ಕೂಡ ಒತ್ತಡ ಬಂದಿತ್ತು. ‌ಆದರೆ ಆಗ ನಾನು ಸಿನಿಮಾದಲ್ಲಿ ಬ್ಯುಸಿ ಆಗಿದ್ದು ಈ ಅನಿವಾರ್ಯ ಕಾರಣಗಳಿಂದ ನಮ್ಮ ತಾಯಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ತದ ನಂತರದ ದಿನಗಳಲ್ಲಿ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದು ಮತ್ತೆ ಅವರು ಟಿಕೆಟ್ ಆಕಾಂಕ್ಷಿಗಳಲ್ಲ. ಅವರಿಗೆ ಅದರಲ್ಲಿ ಆಸಕ್ತಿಯೂ ಇಲ್ಲ ಎಂದು ನಿಕಿಲ್ ಕುಮಾರಸ್ವಾಮಿ ತಿಳಿಸಿದರು.

ಅನಿತಾ ಕುಮಾರಸ್ವಾಮಿಗೆ ರಾಜಕೀಯ ಇಷ್ಟವಿಲ್ಲವೇ?

ಇನ್ನು ನಮ್ಮ ಕುಟುಂಬದಲ್ಲಿ ಅನಿತಾ ಕುಮಾರಸ್ವಾಮಿ ಅವರಿಗೆ ರಾಜಕಾರಣವೇ ಇಷ್ಟವಿಲ್ಲ. ಹೌದು ಆದರೆ ನಾನು ಸಿನಿಮಾ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದ ಕಾರಣ ಎರಡು ಬಾರಿ ಅನಿವಾರ್ಯ ಕಾರಣಗಳಿಂದ ಮಧುಗಿರಿ ಹಾಗೂ ರಾಮನಗರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ಅನಿತಾ ಕುಮಾರಸ್ವಾಮಿ ಅವರು ಈಗಾಗಲೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದು ಅನಿರೀಕ್ಷಿತವಾಗಿ ಸ್ಪರ್ಧೆ ಮಾಡಿದ್ದರು. ಅವರು ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದು ಮತ್ತೆ ಅವರು ಟಿಕೇಟ್ ಆಕಾಂಕ್ಷಿಗಳಲ್ಲ ಅವರಿಗೆ ಆಸಕ್ತಿಯೂ ಇಲ್ಲ ಎಂದು ಹೇಳಿದ್ದಾರೆ ನಿಖಿಲ್.

Leave A Reply

Your email address will not be published.