Karnataka Times
Trending Stories, Viral News, Gossips & Everything in Kannada

PMJJBY: ಕೇವಲ 40 ರೂಪಾಯಿಗೆ ಎರಡು ಲಕ್ಷ ರೂಪಾಯಿ ವಿಮೆ ಪಡೆಯಬಹುದು; ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವುದು ಹೇಗೆ?

advertisement

ಕೇಂದ್ರ ಸರ್ಕಾರ ಸಾರ್ವಜನಿಕರಿಗಾಗಿ ಸಾಕಷ್ಟು ಯೋಜನೆಗಳನ್ನು ಪರಿಚಯಿಸುತ್ತದೆ ಬಡವರಿರಬಹುದು ಅಥವಾ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ ನೆರವು ನೀಡುವಂತಹ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇಂತಹ ಯೋಜನೆಗಳಲ್ಲಿ ಆರ್ಥಿಕ ಲಾಭ ಸಿಗುವ ವಿಮಾ ಯೋಜನೆಗಳು ಕೂಡ ಸೇರಿವೆ.

ವಿಮೆ ಎನ್ನುವುದು ಪ್ರತಿಯೊಬ್ಬರ ಜೀವನಕ್ಕೂ ಬಹಳ ಅತ್ಯಗತ್ಯವಾಗಿರುವ ವಿಷಯವಾಗಿದೆ. ಒಂದು ವೇಳೆ ಒಬ್ಬ ವ್ಯಕ್ತಿ ಮೃತಪಟ್ಟರೆ ಆತನ ಮನೆಯವರಿಗೆ ಆ ವಿಮಾ ಹಣ ಸೇರುವಂತೆ ಮಾಡಲಾಗುವುದು. ಪ್ರಧಾನಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆಯಲ್ಲಿ, ಕೇವಲ 40 ರುಪಾಯಿಗಳನ್ನು ಪಾವತಿ ಮಾಡಿ 2 ಲಕ್ಷದವರೆಗೆ ವಿಮಾ ಸೌಲಭ್ಯ ಪಡೆಯಬಹುದು.

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯ (PMJJBY) ಪ್ರಯೋಜನ!

advertisement

ಕೇಂದ್ರ ಸರ್ಕಾರ 2015ರಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PMJJBY) ಯನ್ನು ಪರಿಚಯಿಸಿತು. ಈ ಯೋಜನೆಯ ಅಡಿಯಲ್ಲಿ ಪ್ರತಿ ವರ್ಷ 436 ರೂಪಾಯಿಗಳ ಪ್ರೀಮಿಯಂ ಪಾವತಿಸಬೇಕು ಅಂದರೆ ಪ್ರತಿ ತಿಂಗಳು ಕೇವಲ 40 ರೂಪಾಯಿ ಪ್ರೀಮಿಯಂ ಪಾವತಿ ಮಾಡಿದರೆ ಸಾಕು 2 ಲಕ್ಷ ರೂಪಾಯಿಗಳವರೆಗೆ ಅಪಘಾತ ವಿಮೆ ಪಡೆಯಬಹುದು. ಎಲ್ಐಸಿ ಯೊಂದಿಗೆ ಒಪ್ಪಂದ ಮಾಡಿಕೊಂಡಿರುವ ಕೇಂದ್ರ ಸರ್ಕಾರ ಈ ಹೊಸ ವಿಮಾ ಯೋಜನೆಯನ್ನು ಪರಿಚಯಿಸಿದೆ. ಪಾವತಿಯ ಅವಧಿ ಮೇ 1ರಿಂದ ಜೂನ್ 31ರವರೆಗೆ ಇರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ!

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PMJJBY) ಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅಧಿಕೃತ ಕೇಂದ್ರ ಸರ್ಕಾರದ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ನೀವು ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಅದನ್ನು ಭರ್ತಿ ಮಾಡಿ ಹತ್ತಿರದ ಬ್ಯಾಂಕ್ ಶಾಖೆಗೆ ಸಲ್ಲಿಸಿ. ನೀವು ಅರ್ಜಿ ಸಲ್ಲಿಸಿದ ನಂತರ ಪ್ರೀಮಿಯಂ ಪಾವತಿ ಮಾಡುವ ಅವಧಿ ಆರಂಭವಾಗುತ್ತದೆ. ಖಾತೆಯಿಂದ ಆಟೋಮೆಟಿಕ್ ಆಗಿ ಹಣ, ಯೋಜನೆಗೆ ಕ್ರೆಡಿಟ್ ಆಗುವಂತೆ ಮಾಡಲಾಗುವುದು. ಯೋಜನೆಗೆ ಅರ್ಜಿ ಸಲ್ಲಿಸಲು 18ರಿಂದ 50 ವರ್ಷ ವಯಸ್ಸಾಗಿರಬೇಕು. ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ.

advertisement

Leave A Reply

Your email address will not be published.