ಹಿರಿಯ ನಾಗರಿಕರಿಗೆ ಸಿಗಬೇಕಾದ ಸೌಲತ್ತು ಒದಗಿಸುವುದು ಸರ್ಕಾರದ ಉದ್ದೇಶ ಹಾಗೂ ರಾಜ್ಯ ಸರ್ಕಾರ ಇದಕ್ಕೆ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿರಿಯ ನಾಗರಿಕರ (Senior Citizens) ಆರೋಗ್ಯಕರ ಹಾಗೂ ಆರ್ಥಿಕ ಜೀವನವನ್ನು ಸುಧಾರಿಸುವ ಸಲುವಾಗಿ ಮಾಸಾಶನ ಹೆಚ್ಚಿಸಲು ಸಿಎಂ ನಿರ್ಧರಿಸಿದ್ದಾರೆ.
ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ರಾಜ್ಯದಲ್ಲಿ ಮಾಸಾಶನ ಒದಗಿಸಲಾಗುತ್ತಿದೆ. ಇತ್ತೀಚಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ (CM Siddaramaiah) ಅವರು “ಹಿರಿಯರ ಜೀವನ ಹಾಗೂ ಅವರ ಬದುಕುವ ರೀತಿಯಲ್ಲಿ ಆದರ್ಶವನ್ನು ಹುಡುಕುವುದು ಮಾತ್ರವಲ್ಲದೆ ಸಮಾಜಮುಖಿ ಕಾರ್ಯಗಳಿಗೆ ಅವರಿಂದ ಪ್ರೇರಣೆ ಪಡೆದುಕೊಳ್ಳಬೇಕು. ಈ ರೀತಿ ಮಾಡುವುದರ ಮೂಲಕ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ.
ಹಿರಿಯ ನಾಗರಿಕರ ನೆಮ್ಮದಿ ಹಾಗೂ ಆರೋಗ್ಯವನ್ನು ಖಾತ್ರಿಪಡಿಸುವುದು ಸರ್ಕಾರದ ಕರ್ತವ್ಯ. ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದ್ದು, ಈ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಿ ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ತಿಳಿಸಿದ್ದಾರೆ. ಸದ್ಯದಲ್ಲಿಯೇ ಈ ಬಗ್ಗೆ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ಸಿಗಲಿದೆ.