Karnataka Times
Trending Stories, Viral News, Gossips & Everything in Kannada

Krishi Navodyama Scheme: ಕೃಷಿಕರಿಗೆ ನವೋದ್ಯಮ ಯೋಜನೆಯಡಿ 20 ಲಕ್ಷ‌ ರೂ. ವರೆಗೆ ಸಹಾಯಧನ ನೀಡಲಿದೆ ಸರ್ಕಾರ, ಹೀಗೆ ಅರ್ಜಿ ಸಲ್ಲಿಸಿ!

advertisement

ಕರ್ನಾಟಕ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜಿಸುವ ನಿಟ್ಟಿನಲ್ಲಿ ‘ಕೃಷಿ ನವೋದ್ಯಮ’ ಎಂಬ ಹೊಸ ಯೋಜನೆ ಜಾರಿಗೊಳಿಸುತ್ತಿದೆ.ಕೃಷಿ ವಲಯಲ್ಲಿನ ನೂತನ ತಾಂತ್ರಿಕತೆಗಳು, ಆವಿಷ್ಕಾರ ಹಾಗೂ ನವೀನ ಪರಿಕಲ್ಪನೆಗಳ ಸೇವೆಗಳನ್ನು ಒಳಗೊಂಡ ವಾಣಿಜ್ಯೀಕರಣವನ್ನು ಉತ್ತೇಜಿಸುವ ಗುರಿಯೊಂದಿಗೆ ನೂತನ ಯೋಜನೆ ಅನುಷ್ಠಾನಗೊಳ್ಳುತ್ತಿದೆ.

ಈ ಯೋಜನೆ (Krishi Navodyama Scheme) ಯಡಿ ಗರಿಷ್ಠ 20 ಲಕ್ಷ‌ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ. ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿ ಪರ ರೈತರು ಹೊಸದಾಗಿ ಕೃಷಿಯಲ್ಲಿ ನವೋದ್ಯಮ ಸ್ಥಾಪಿಸಲು ಮುಂದೆ ಬರುವವರಿಗೆ ಸ್ಟಾರ್ಟಪ್ ಯೋಜನೆಯ ವರದಿಯ ಶೇ 50ರಷ್ಟು ಅಂದರೆ 5 ರಿಂದ‌ 20 ಲಕ್ಷ ರೂ. ವರೆಗೆ ಸಬ್ಸಿಡಿ ಸಿಗಲಿದೆ.

ಯೋಜನೆಯ ವಿಶೇಷತೆಗಳೇನು?

ಕೋವಿಡ್ ಪರಿಸ್ಥಿತಿಯ ಬಳಿಕ ನಗರಗಳಿಂದ ಯುವಕರು ಗ್ರಾಮಗಳಿಗೆ ಆಗಮಿಸುವುದು ಕೃಷಿ, ಕೃಷಿಯ ಇತರ ಉದ್ಯಮದಲ್ಲಿ ತೊಡಗುವುದು ಹೆಚ್ಚಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೃಷಿ ಉತ್ಪನ್ನಗಳ ಮಾರುಕಟ್ಟೆ, ಮೌಲ್ಯ ವರ್ಧನೆ ಪ್ರೋತ್ಸಾಹಿಸಲು ‘ಕೃಷಿ ನವೋದ್ಯಮ’ ಎಂಬ ಯೋಜನೆ ಜಾರಿಗೊಳಿಸುತ್ತಿದೆ.

ಈ ಬಾರಿಯ ಬಜೆಟ್ ಮಂಡನೆ ಮಾಡಿದ ಹಣಕಾಸು ಖಾತೆ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಈ ‘ಕೃಷಿ ನವೋದ್ಯಮ’ ಎಂಬ ಯೋಜನೆ ಘೋಷಣೆ ಮಾಡಿದ್ದರು. ಅಲ್ಲದೇ 10 ಕೋಟಿ ರೂ. ಅನುದಾನವನ್ನು ಮೀಸಲಿಟ್ಟರು. ಮುಂದಿನ ಬಜೆಟ್‌ನಲ್ಲಿ ಇನ್ನಷ್ಟು ಅನುದಾನವನ್ನು ಸರ್ಕಾರ ಈ ಯೋಜನೆಗೆ ನೀಡಲು ಚಿಂತನೆ ನಡೆಸಿದೆ. ಕೃಷಿ ನವೋದ್ಯಮ’ ಯೋಜನೆ (Krishi Navodyama Scheme) ಯಡಿ ಹೊಸ ಯೋಜನೆ ಅಲ್ಲದೇ ಈಗಾಗಾಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಅಥವಾ ಮೇಲ್ದರ್ಜೆಗೇರಿಸಲು (Scale up)ಗೂ ಶೇ.50 ರಷ್ಟು ಸಹಾಯಧನ (20 ರಿಂದ ಗರಿಷ್ಠ 50 ಲಕ್ಷ ರೂ.) ವರೆಗೆ ಬ್ಯಾಂಕ್‌ನಿಂದ ಸಾಲದ ಮೂಲಕ (Backended Subsidy) ನೀಡಲಾಗುತ್ತದೆ.

ಈ ಯೋಜನೆಯಿಂದಾಗುವ ಲಾಭ ಬಹಳಷ್ಟು:

 

advertisement

 

ಯೋಜನೆಯ ಫಲಾನುಭವಿಗಳನ್ನು ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ, ಅನುಷ್ಠಾನ ಸಮಿತಿ ಒಪ್ಪಿಗೆಯ ನಂತರ ರಾಜ್ಯ ಮಟ್ಟದಲ್ಲಿ ಅನುಮೋದನೆ ಪಡೆದ ಬಳಿಕ ಆಯ್ಕೆ ಮಾಡಿ ಸಹಾಯಧನವನ್ನು ನೀಡಲಾಗುತ್ತದೆ. ಆಸಕ್ತರು ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

ರೈತರನ್ನು ಉದ್ಯಮಿಗಳಾಗಿ ಮಾಡಿದರೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಆಗುತ್ತದೆ. ಇದರಿಂದಾಗಿ ರೈತರ ಆದಾಯ ದ್ವಿಗುಣವಾಗುತ್ತದೆ. ಈಗಾಗಲೇ ಹಲವು ರೈತರು ಇಂತಹ ಉದ್ಯಮ ಸ್ಥಾಪನೆ ಮಾಡಿ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೇ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಪಡೆದಿದ್ದಾರೆ.

ಈ ಯೋಜನೆಯಲ್ಲಿ ವಿಶೇಷ ತರಬೇತಿಗೂ ವ್ಯವಸ್ಥೆ:

ಈ ಯೋಜನೆಯ ಅಡಿಯಲ್ಲಿ ಆಯ್ಕೆಯಾದ ನವೋದ್ಯಮಿಗೆ ಸಾಮರ್ಥ್ಯ ಅಭಿವೃದ್ಧಿಗೆ ಕೃಷಿ ವಿಶ್ವವಿದ್ಯಾಲಯ ICAR, CFTRI, CSIR, C-CAMP ಮತ್ತೆ ಇತರೆ ಸಂಶೋಧನಾ ಸಂಸ್ಥೆಗಳಾದ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ಸ್ಥಾಪಿತವಾದ ಕೃಷಿ ನಾವೀನ್ಯತೆಗಾಗಿ ಶ್ರೇಷ್ಠತೆಯ ಕೇಂದ್ರಗಳ ಮೂಲಕ ತರಬೇತಿ ನೀಡಲಾಗುವುದು

ಅರ್ಜಿ ಹೇಗೆ ಪಡೆಯಬಹುದು?

ಆಸಕ್ತ ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಪ್ರಗತಿಪರ ರೈತರು ಹೆಚ್ಚಿನ ಮಾಹಿತಿಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಆನೇಕಲ್ ಮತ್ತು ಬೆಂಗಳೂರು ಉತ್ತರ, ಉಪ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು ಇಲ್ಲಿ ಭೇಟಿ ನೀಡಿ ಅರ್ಜಿ ಪಡೆಯಬಹುದು. ಅಥವಾ ದೂ. ಸಂಖ್ಯೆ: 080-26711594 ಗೆ ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

advertisement

Leave A Reply

Your email address will not be published.