Electric Vehicles: ಇನ್ನು ಮುಂದೆ ಎಲೆಕ್ಟ್ರಿಕ್ ವಾಹನಗಳ ಬೆಲೆ ಅಗ್ಗವೋ ಅಗ್ಗ; ಸರ್ಕಾರದ ಹೊಸ ನಿಯಮ
ದೇಶದಲ್ಲಿ ಮಾಲಿನ್ಯ ಹೆಚ್ಚುತ್ತಿದೆ, ಜೊತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಇಂಧನಗಳ ಬೆಲೆಯು ಗಗನಕ್ಕೆ ಏರಿದೆ. ಇದೆಲ್ಲವನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನ ರೂಪಿಸುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಇನ್ನು ಮುಂದೆ ವಿದ್ಯುತ್ ಕ್ರಾಂತಿಯಾಗಲಿದೆ, ದೇಶದಲ್ಲಿ ಎಂದು ಘೋಷಿಸಿದ್ದಾರೆ. ಅವರು ಹೇಳಿರುವ ಪ್ರಕಾರ ಪೆಟ್ರೋಲ್, ಡೀಸೆಲ್ ವಾಹನಗಳ ಬೆಲೆಯಲ್ಲಿ ಇನ್ನು ಮುಂದೆ ಎಲೆಕ್ಟ್ರಿಕ್ ವಾಹನಗಳು ಕೂಡ ಲಭ್ಯವಾಗಲಿದೆ ಇದಕ್ಕೆ ಸಂಬಂಧಪಟ್ಟ ಹಾಗೆ ರಾಜ್ಯ ಸರ್ಕಾರಗಳ ಜೊತೆಗೂ ಕೇಂದ್ರ ಸರ್ಕಾರ ಮಾತನಾಡಿ ಕರಡು ಸಿದ್ಧಪಡಿಸುತ್ತಿದೆ ಎಂದು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಖರೀದಿಯ ಮೇಲೆ ಹೆಚ್ಚಿನ ವಿನಾಯಿತಿ ನೀಡಲಾಗುತ್ತಿದೆ.
ಎಲೆಕ್ಟ್ರಿಕ್ ವಾಹನ ಖರೀದಿಗೆ ಸಹಾಯಧನ:
ದೆಹಲಿ ಹಾಗೂ ಉತ್ತರ ಪ್ರದೇಶಗಳಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿಯ ಮೇಲೆ ವಿನಾಯಿತಿ ನೀಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಖರೀದಿಯನ್ನು ಉತ್ತೇಜಿಸುವ ಸಲುವಾಗಿ ಸರ್ಕಾರ ಕ್ರಮವನ್ನು ಕೈಗೊಂಡಿದೆ. ಆದರೆ ಸರ್ಕಾರ ಈ ಬಗ್ಗೆ ಇನ್ನೂ ಘೋಷಣೆ ಮಾಡಿಲ್ಲ. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದಷ್ಟೇ ತಿಳಿಸಿದ್ದಾರೆ. ಎಲೆಕ್ಟ್ರಿಕಲ್ ವಾಹನಗಳ ಖರೀದಿಯ ಮೇಲೆ ಸಬ್ಸಿಡಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಉತ್ತರಪ್ರದೇಶದಲ್ಲಿ ಯೋಗಿ ಸರ್ಕಾರ 10,000 ದಿಂದ ಒಂದು ಲಕ್ಷದ ವರೆಗೂ ರಿಯಾಯಿತಿ ನೀಡುವುದಾಗಿ ಘೋಷಿಸಿದೆ.
ಅಗ್ಗವಾಗಲಿದೆ ಪ್ರತಿ ಕಿ.ಮೀ ವೆಚ್ಚ:
ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳಿಗಿಂತಲೂ ಎಲೆಕ್ಟ್ರಿಕ್ ವಾಹನಗಳು ಪ್ರತಿ ಕಿ.ಮೀ. ಗೆ ವೆಚ್ಚದ ದೃಷ್ಟಿಯಿಂದ ಅತಿ ಕಡಿಮೆ ಬೆಲೆಗೆ ಲಭ್ಯವಿದೆ. ಎಲೆಕ್ಟ್ರಿಕ್ ವಾಹನಗಳು ಪ್ರತಿ ಕಿ.ಮೀಗೆ ಕೇವಲ ಒಂದು ರೂಪಾಯಿ ದರದಲ್ಲಿ ಪ್ರಯಾಣಿಸುವಂತೆ ಆಗಬಹುದು. ಜೊತೆಗೆ ಜನರು ತಮ್ಮ ಬಜೆಟ್ ಬೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವಂತೆಯೂ ಆಗಬಹುದು ಈ ನಿಟ್ಟಿನಲ್ಲಿ ಸರ್ಕಾರವು ಹೊಸ ಯೋಜನೆ ರೂಪಿಸುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.