Karnataka Times
Trending Stories, Viral News, Gossips & Everything in Kannada

Health Card: ಬಿಪಿಎಲ್, ಎಪಿಎಲ್ ಕಾರ್ಡ್ ಇರುವ ಕುಟುಂಬಗಳಿಗೆ ಸಿಹಿಸುದ್ದಿ, ಈ ಕಾರ್ಡ್ ಇದ್ದರೆ 5 ಲಕ್ಷ ಉಚಿತ ಚಿಕಿತ್ಸೆ.

advertisement

ಆರೋಗ್ಯವೇ ಭಾಗ್ಯ ಎನ್ನುವಂತೆ, ಒಮ್ಮೆ ಆರೋಗ್ಯವು ಕೈಕೊಟ್ಟರೆ ಕಾಯಿಲೆಯಿಂದ ದೂರವಾಗಲು ಆಸ್ಪತ್ರೆಗಳಿಗೆ ಸುತ್ತಬೇಕಾಗುತ್ತದೆ. ಈ ವೇಳೆಯಲ್ಲಿ ಕೈಯಲ್ಲಿ ದುಡ್ಡಿದರೆ ಕಾಯಿಲೆ ಚಿಕಿತ್ಸೆ ಪಡೆದು ಸರಿಪಡಿಸಿಕೊಳ್ಳಬಹುದು. ಈ ವೇಳೆಯಲ್ಲಿ ಉಪಯೋಗಕ್ಕೆ ಬರುವುದೇ ಈ ಹೆಲ್ತ್ ಕಾರ್ಡ್ ಗಳು. ರಾಜ್ಯ ಸರ್ಕಾರವು ಇದೀಗ ಬಿಪಿಎಲ್‌ ಕಾರ್ಡ್‌ (BPL Card) ಹೊಂದಿರುವ ಕುಟುಂಬಗಳಿಗೆ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು ಹೊಸದಾಗಿ ಬಿಡುಗಡೆ ಮಾಡಿದೆ.

ಈ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು, ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಮರುನಾಮಕರಣ ಮಾಡಲಾಗಿದೆ. ಈ ಕಾರ್ಡ್ ಅನ್ನು ರಾಜ್ಯದ ಮುಖ್ಯ ಮಂತ್ರಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬಿಡುಗಡೆ ಮಾಡಿದ್ದಾರೆ. ಹಾಗಾದ್ರೆ ಈ ಹೆಲ್ತ್ ಕಾರ್ಡ್ ನಿಂದ ಏನೆಲ್ಲಾ ಪ್ರಯೋಜನಗಳಿವೆ ಎನ್ನುವುದರ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಒಮ್ಮೆ ಓದಿ.

advertisement

ಈ ಹೆಲ್ತ್ ಕಾರ್ಡ್ ನಿಂದ ಏನೆಲ್ಲಾ ಪ್ರಯೋಜನಗಳಿವೆ?

  •  ಹೆಲ್ತ್ ಕಾರ್ಡ್ ಇದ್ದರೆ ಬಿಪಿಎಲ್ ಕಾರ್ಡ್ ದಾರರು ದೇಶದ ಎಲ್ಲೆಡೆಯು ಈ ಹೆಲ್ತ್ ಕಾರ್ಡ್ ನಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.
  •  ಮುಂಬರುವ 6 ತಿಂಗಳ ಒಳಗಾಗಿ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಕಾರ್ಡ್‌ ಅನ್ನು ರಾಜ್ಯದ ಒಟ್ಟು 5.09 ಕೋಟಿ ಫಲಾನುಭವಿಗಳಿಗೆ ನೀಡುವ ಗುರಿಯನ್ನು ಹೊಂದಿದೆ.
  •  ಈ ಕಾರ್ಡ್ ಗೆ ಸಂಬಂಧ ಪಟ್ಟಂತೆ ರಾಜ್ಯ ಸರ್ಕಾರವು ಶೇ 66 ರಷ್ಟು ಹಾಗೂ ಕೇಂದ್ರ ಸರ್ಕಾರವು 34% ಅನುದಾನವನ್ನು ನೀಡುತ್ತಿದೆ.
  •  BPL ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದಡಿಯಲ್ಲಿ ಪಡೆದುಕೊಳ್ಳಬಹುದಾಗಿದೆ. ಈ ಕಾರ್ಡ್ ನಡಿಯಲ್ಲಿ ರಾಜ್ಯದ ಎಲ್ಲಾ ಸಾರ್ವಜಿಕ ಆಸ್ಪತ್ರೆ ಮತ್ತು 540 ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ 1650 ಚಿಕಿತ್ಸಾ ಪ್ಯಾಕೇಜ್‌ಗಳು ಫಲಾನುಭವಿಗಳಿಗೆ ದೊರಕಲಿದೆ. 171 ಅತ್ಯಂತ ತುರ್ತು ಚಿಕಿತ್ಸೆಯ ಮತ್ತು ಜೀವ ಉಳಿಸುವ ಪ್ಯಾಕೇಜ್‌ ಗಳಿರಲಿದೆ.
  •  BPL ಕಾರ್ಡ್ ಹೊಂದಿರುವವರು ಮಾತ್ರವಲ್ಲದೇ APL ಕುಟುಂಬದವರಿಗೂ ಸಹ ಯೋಜನೆ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಈ ಯೋಜನೆ ಯಡಿಯಲ್ಲಿ APL ಕುಟುಂಬಗಳಿಗೆ 5 ಲಕ್ಷದ ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನ ರಾಜ್ಯ ಸರ್ಕಾರವು ನೀಡಲಿದೆ. ಅಂದರೆ ಎಪಿಎಲ್ ಕಾರ್ಡು ದಾರರು ಶೇ 70 ರಷ್ಟು ಚಿಕಿತ್ಸಾ ವೆಚ್ಚವನ್ನು ಪಾವತಿಸಬೇಕಾಗುತ್ತದೆ. ಉಳಿದ ಶೇ 30 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರವೇ ನೋಡಿಕೊಳ್ಳುತ್ತದೆ.
  • ಆಯುಷ್ಮಾನ್‌ ಭಾರತ್‌ – ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ Co-Branded ಗುರುತಿನ ಚೀಟಿಯಾಗಿದ್ದು, ಉಚಿತವಾಗಿ ನೀಡಲಾಗುತ್ತದೆ.
  •  ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ID (ABHA ID) ಯೊಂದಿಗೆ ಜೋಡಿಸಲಾಗಿರುತ್ತದೆ. ಈ ಮೂಲಕ ಫಲಾನುಭವಿಗಳು ವ್ಯೆದ್ಯಕೀಯ ದಾಖಲೆಗಳನ್ನು ಇಟ್ಟುಕೊಂಡು ಚಿಕಿತ್ಸೆಯನ್ನು ಪಡೆಯಬಹುದು.
  • ಪಡಿತರ ಚೀಟಿಯೊಂದಿಗೆ ಲಿಂಕ್ ಮಾಡಲಾದ ಈ ಮೂಲ ಆಧಾರ್‌ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರೀಕ ಸೇವಾಗಳಲ್ಲಿ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಗುರುತಿನ ಚೀಟಿಗಳನ್ನು ನೊಂದಾಯಿಸಿದರೆ, ಈ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು.

advertisement

Leave A Reply

Your email address will not be published.