Karnataka Times
Trending Stories, Viral News, Gossips & Everything in Kannada

Gruha Jyothi: ಉಚಿತ ವಿದ್ಯುತ್​ ಯೋಜನೆಯ ಬಿಗ್​​ ಅಪ್ಡೇಟ್​​; ಹೆಚ್ಚುವರಿ 10 ಯೂನಿಟ್‌ ಬಗ್ಗೆ ಸರ್ಕಾರದ ಮಹತ್ವದ ಆದೇಶ!

advertisement

ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ (Congress Guarantee) ಒಂದಾದ ಗೃಹ ಜ್ಯೋತಿ (Gruha Jyothi) ಉಚಿತ ವಿದ್ಯುತ್‌ ಯೋಜನೆಯ ಅಡಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ. ಇದು ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ತರುವ ಕೆಲಸ ಮಾಡುತ್ತೇವೆ ಎಂದು ಈಗಾಗಲೇ ಅಧಿಕಾರಿಗಳು ತಿಳಿಸಿದ್ದಾರೆ.

ಈಗಿನ ನಿಯಮದಂತೆ ಯೋಜನೆ ಆರಂಭವಾದ ಸಂದರ್ಭದಲ್ಲಿ ಬಳಸುತ್ತಿದ್ದ ಸರಾಸರಿ ವಿದ್ಯುತ್‌ಗೆ ಹೆಚ್ಚುವರಿ 10% ಯೂನಿಟ್‌ಗಳನ್ನು ಸೇರಿಸಿ ಉಚಿತ ವಿದ್ಯುತ್‌ (Free Electricity) ನೀಡಲಾಗುತ್ತಿತ್ತು. ಇನ್ನು ಮುಂದೆ ಬಳಸುತ್ತಿದ್ದ ಯೂನಿಟ್‌ಗಳಿಗೆ ಹೆಚ್ಚುವರಿ 10 ಯೂನಿಟ್‌ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಆದರೆ, ಈ ಆದೇಶ ಇರುವುದು ಅತ್ಯಲ್ಪ ಬಳಕೆದಾರರಿಗೆ ಮಾತ್ರ. ಅಂದರೆ, ಮಾಸಿಕವಾಗಿ 48 ಯೂನಿಟ್‌ಗಿಂತ ಕಡಿಮೆ ವಿದ್ಯುತ್‌ ಅನ್ನು ಬಳಕೆ ಮಾಡುವವರಿಗೆ ಈ ಆದೇಶವನ್ನು ಹೊರಡಿಸಲಾಗಿದೆ.

ಶೇಕಡಾವಾರು 10ರಷ್ಟು ಬದಲು 10 ಯುನಿಟ್‌ ಫ್ರೀ ವಿದ್ಯುತ್ (Free Electricity) ನೀಡಲು ಈಚೆಗೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು. ಅದರಂತೆ ಈಗ ಆದೇಶವೂ ಹೊರಬಿದ್ದಿದೆ.48 ಯೂನಿಟ್ ಕೊಟ್ಟರೂ ಕಡಿಮೆ ಬಳಕೆ ಮಾಡ್ತಾ ಇದ್ದರು, ಕೇವಲ 20-25 ಯೂನಿಟ್ ಯುಸ್ ಮಾಡಿದಾಗ ಕೇವಲ 2 ಪರ್ಸೆಂಟ್ ಕೊಡಬೇಕಿತ್ತು. ಆದರೆ ಇದೀಗ 48 ಇರೋದು 58 ಯೂನಿಟ್ ಆಗುತ್ತದೆ ಎಂದು ತಿಳಿಸಿದ್ದಾರೆ.

 

ಸಚಿವರ ಆದೇಶದಲ್ಲಿ ಏನಿದೆ?

advertisement

ಈ ಮೊದಲು ಗೃಹ ಜ್ಯೋತಿ ಯೋಜನೆ (Gruha Jyothi Scheme) ಅಡಿ ಬಳಸಿದ ಸರಾಸರಿ ಯುನಿಟ್​ಗಿಂತ ಶೇ. 10ರಷ್ಟು ಹೆಚ್ಚುವರಿ ವಿದ್ಯುತ್ತನ್ನು ಉಚಿತವಾಗಿ ನೀಡಲಾಗುತ್ತಿತ್ತು. ಈಗ ಶೇಕಡಾವಾರು ಬದಲಾಗಿ ಸರಾಸರಿಗಿಂತ 10 ಯುನಿಟ್ ಅನ್ನು ಹೆಚ್ಚುವರಿಯಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕವಾಗಿ ಹೆಚ್ಚುವರಿ 398 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಒಟ್ಟು ಸಬ್ಸಿಡಿ ಮೊತ್ತವು 3578 ಕೋಟಿ ರೂಪಾಯಿ ಆಗುತ್ತದೆ ಎಂದು ಸರ್ಕಾರ ತಿಳಿಸಿದೆ. ಮುಂದಿನ ಬಿಲ್ಲಿಂಗ್ ನಲ್ಲೇ ಇದು ಆಡ್ ಆಗಿ ಬರುತ್ತದೆ. ಇಲಾಖೆಗೆ ಹೊರೆಯಾಗುತ್ತದೆ ಆದರೆ ಬಡವರಿಗೆ ಅನುಕೂಲ ಆಗುತ್ತದೆ. ಎಷ್ಟೋ ಜನರಿಗೆ ಜೀರೋ ಬಿಲ್ ಬರ್ತಾ ಇರಲಿಲ್ಲ, ಹಾಗಾಗಿ ಅವರಿಗೆ ಅನುಕೂಲ ಆಗಲಿ ಅಂತ ಸಿಎಂ ನಿರ್ಧಾರ ಮಾಡಿದ್ದಾರೆ. ಇದರಿಂದ ವಾರ್ಷಿಕವಾಗಿ ಹೆಚ್ಚುವರಿ ವೆಚ್ಚ ಆಗುತ್ತದೆ ಎಂದು ಸಚಿವರು ವಿವರಿಸಿದರು.

ಫೆಬ್ರವರಿ 1ರಿಂದ ಜಾರಿಗೆ ಬರುವಂತೆ ಆದೇಶ:

ಗೃಹ ಜ್ಯೋತಿಗೆ ಸಂಬಂಧಪಟ್ಟಂತೆ ಈಗ ತೆಗೆದುಕೊಳ್ಳಲಾದ ನಿರ್ಧಾರವು ಫೆಬ್ರವರಿ 1ರಿಂದ ಅನುಷ್ಠಾನಕ್ಕೆ ಬರುವಂತೆ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಇದರಿಂದ ಮಾಸಿಕವಾಗಿ 48 ಯೂನಿಟ್‌ಗಿಂತ ಕಡಿಮೆ ಬಳಕೆ ಮಾಡುತ್ತಿರುವ ಗ್ರಾಹಕರಿಗೆ ಅನುಕೂಲವಾಗಲಿದ್ದು, ಅವರಿಗೆ ಇನ್ನು ಮಾಸಿಕವಾಗಿ 58 ಯೂನಿಟ್‌ವರೆಗೆ ಬಳಕೆ ಮಾಡಲು ಅವಕಾಶ ಸಿಕ್ಕಂತೆ ಆಗುತ್ತದೆ. ಬಡ ಕುಟುಂಬಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ:

ಇನ್ನು ಕರ್ನಾಟಕ ವಿದ್ಯುತ್ ನಿಗಮ ಪಡೆದಿದ್ದ 4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಈಗಾಗಲೇ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ. ಹಲವು ವರ್ಷಗಳಿಂದ ಪಡೆದಿದ್ದ ಸಾಲಕ್ಕೆ ಒಳಹರಿವಿನ ಕೊರತೆಯಿದೆ. ಶ್ಯೂರಿಟಿ ನೀಡಬೇಕೆಂದು ಸರ್ಕಾರಕ್ಕೆ ವಿದ್ಯುತ್ ನಿಗಮ ಮನವಿ ಮಾಡಿತ್ತು. ಹೀಗಾಗಿ ಸರ್ಕಾರ ಇದೀಗ 4450 ಕೋಟಿ ರೂ. ಸಾಲಕ್ಕೆ ಖಾತರಿ ನೀಡಲು ತೀರ್ಮಾನಿಸಿದೆ.

ವಿದ್ಯುತ್ ಸರಬರಾಜು ಕಂಪನಿಗಳು ಯಪಿಸಿಎಲ್‌ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಚರ್ಚೆಯಾಗಿದೆ. ಹಾಗೇ ಸೆಂಟ್ರಲ್ ಇಆರ್.ಸಿಯವರ ಆದೇಶದ ಕುರಿತು ಚರ್ಚೆಯಾಗಿದ್ದು, ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ + 419 ಕೋಟಿ ರೂ. ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಚಿವ ಎಚ್​​ಕೆ ಪಾಟೀಲ್ ಮಾತನಾಡಿ, ವಿದ್ಯುತ್ ಸರಬರಾಜು ಕಂಪನಿಗಳು ಯಪಿಸಿಎಲ್ ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಚರ್ಚೆ ನಡೆಸಲಾಗಿದೆ. ಸೆಂಟ್ರಲ್ ಇ ಆರ್ ಸಿ ಅವರ ಆದೇಶದ ಕುರಿತು ಚರ್ಚೆ ನಡೆದಿದೆ. ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ. ಲೇಟ್ ಪೇಮೆಂಟ್  1348 ಕೋಟಿ + 419 ಕೋಟಿ ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

advertisement

Leave A Reply

Your email address will not be published.