Karnataka Times
Trending Stories, Viral News, Gossips & Everything in Kannada

Gruha Lakshmi: ಗೃಹಲಕ್ಷ್ಮೀ ಯೋಜನೆಯ ಅನರ್ಹರ ಪಟ್ಟಿ ಬಿಡುಗಡೆ, ಹೀಗೆ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ!

advertisement

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಯೋಜನೆಗಳ ಕುರಿತಾಗಿ ಹೇಳಿಕೆ ನೀಡಿತ್ತು. ಅದರಂತೆ ಮಹಿಳೆಯರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಗೃಹ ಲಕ್ಷ್ಮಿ ಯೋಜನೆ (Gruha Lakshmi Yojana) ಜಾರಿ ಮಾಡಿತ್ತು. ಇದರಿಂದ ಲಕ್ಷಾಂತರ ಮಹಿಳೆಯರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು. ಆದರೆ ಇದೀಗ ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ (Anna Bhagya Yojana) ಗೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಹೊಸ ರೂಲ್ಸ್‌ ಜಾರಿ ಮಾಡಿದೆ. ಒಂದೊಮ್ಮೆ ಸರಕಾರದ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸುವ ವೇಳೆಯಲ್ಲಿ ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಗೆ ಜಮೆ ಆಗೋದಿಲ್ಲ.

ಸರ್ಕಾರದ ಹೊಸ ನಿಯಮಗಳೇನು?

 

 

ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಹೊಸ ನಿಯಮ ಜಾರಿ ಮಾಡಿದ್ದು ಒಂದೊಮ್ಮೆ ಸರಕಾರದ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸುವ ವೇಳೆಯಲ್ಲಿ ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಗೆ ಜಮೆ ಆಗೋದಿಲ್ಲ. ಕರ್ನಾಟಕದಲ್ಲಿ ನಕಲಿ ಬಿಪಿಎಲ್‌ ಕಾರ್ಡುದಾರರ ಪತ್ತೆ ಕಾರ್ಯಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಈಗಾಗಲೇ ಸಾವಿರಾರು ನಕಲಿ ಬಿಪಿಎಲ್‌ ಕಾರ್ಡು (BPL Card) ಗಳನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಇಂತಹ ನಕಲಿ ಕಾರ್ಡುಗಳನ್ನು ನೀಡಿ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ, ಇದುವರೆಗೆ ಹಣವನ್ನು ಪಡೆದುಕೊಳ್ಳುತ್ತಿರುವ ಜನರಿಗೆ ಸರಕಾರ ಬಿಸಿ ಮುಟ್ಟಿಸಿದೆ.

ಅರ್ಹರಾಗಿದ್ದರೂ ಕೂಡ ಬಿಪಿಎಲ್‌ ಕಾರ್ಡ್‌ ಪಡೆದುಕೊಂಡಿರುವ ಪಡಿತರ ಕಾರ್ಡುದಾರರಿಗೆ ಇನ್ಮುಂದೆ ಗೃಹಲಕ್ಷ್ಮೀ (Gruha Lakshmi) ಹಾಗೂ ಅನ್ನಭಾಗ್ಯ (Anna Bhagya) ಯೋಜನೆಯ ಹಣ ಸಿಗೋದಿಲ್ಲ. ಸರಕಾರ ಆದಾಯ ತೆರಿಗೆ ಪಾವತಿದಾರರಿಗೆ, ಸರಕಾರಿ ನೌಕರರಿಗೆ, ನಾಲ್ಕು ಚಕ್ರದ ವಾಹನ ಹೊಂದಿದವರಿಗೆ ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದೆ. ಇದೇ ಮಾನದಂಡವನ್ನೇ ಇದೀಗ ಗೃಹಲಕ್ಷ್ಮೀ ಯೋಜನೆಗೆ ಪ್ರಯೋಗಿಸುತ್ತಿದೆ.

ಗೃಹಲಕ್ಷ್ಮೀ ಯೋಜನೆಯ ಅನರ್ಹರ ಪಟ್ಟಿ ಬಿಡುಗಡೆ:

advertisement

ಗೃಹಲಕ್ಷ್ಮೀ (Gruha Lakshmi) ಯೋಜನೆಗೆ ಸಂಬಂಧಿಸಿದಂತೆ ಯಾರ ಹೆಸರು ಅನರ್ಹರ ಪಟ್ಟಿ ಸೇರ್ಪಡೆ ಆಗಿದೆ ಎಂಬ ಮಾಹಿತಿ ಇಲ್ಲಿದೆ. ಆಹಾರ ಹಾಗೂ ನಾಗರೀಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ : https://ahara.kar.nic.in/Home/EServices ಭೇಟಿ ನೀಡಬೇಕು.

ನಂತರದಲ್ಲ ರೇಷನ್‌ ಕಾರ್ಡ್‌ ಎಂದು ಸೂಚಿಸುವ ಟ್ಯಾಬ್‌ ಓಪನ್‌ ಮಾಡಬೇಕು, ರೇಷನ್‌ ಕಾರ್ಡ್‌ ಲಿಂಕ್‌ ಕ್ಲಿಕ್‌ ಮಾಡುತ್ತಿದ್ದಂತೆಯೇ ನಿಮಗೆ ಯಾವೆಲ್ಲಾ ಕಾರ್ಡುಗಳನ್ನು ರದ್ದು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಲಿದೆ. ಇನ್ನು ಜಿಲ್ಲೆ, ತಾಲೂಕು, ತಿಂಗಳು ಹಾಗೂ ವರ್ಷವನ್ನು ನಮೂದಿಸಿದ್ರೆ ನಿಮ್ಮ ರೇಷನ್‌ ಕಾರ್ಡ್‌ ರದ್ದಾಗಿದೆಯಾ ಇಲ್ಲವೇ ಅನ್ನೋದು ತಿಳಿಯಲಿದೆ.  ಗೃಹಲಕ್ಷ್ಮೀ ಅನರ್ಹರ ಪಟ್ಟಿ ಈ   ಲಿಂಕ್‌ ಕ್ಲಿಕ್‌ ಮಾಡುವ ಮೂಲಕ ನಿಮ್ಮ ಹೆಸರು ಇಲ್ಲಿದಿಯೇ ಎಂದು ಪರಿಶೀಲಿಸಿಕೊಳ್ಳಬಹುದಾಗಿದೆ.

ರೇಷನ್ ಕಾರ್ಡು ರದ್ದಾಗದಂತೆ ನೋಡಿಕೊಳ್ಳಿ

ಒಂದೊಮ್ಮೆ ನಿಮ್ಮ ರೇಷನ್‌ ಕಾರ್ಡ್‌ (Ration Card) ರದ್ದಾಗಿದ್ರೆ ನೀವು ನಿಮಗೆ ಇನ್ಮುಂದೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗೋದಿಲ್ಲ. ಹೀಗಾಗಿ ನಿಮ್ಮ ಕಾರ್ಡ್‌ ಯೋಗ್ಯವೇ ಅನ್ನೋದನ್ನು ಒಮ್ಮೆ ತಿಳಿದುಕೊಳ್ಳಿ. ಗೃಹಲಕ್ಷ್ಮೀ ಯೋಜನೆಯ ಮೂಲಕ ಕರ್ನಾಟಕ ಸರಕಾರ ಪ್ರತೀ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2,೦೦೦ ರೂಪಾಯಿ ಹಣವನ್ನು ನೀಡುತ್ತಿದೆ.ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬರುತ್ತಿದಂತೆಯೇ ರಾಜ್ಯ ಸರಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿತ್ತು. ಈ ಯೋಜನೆಯ ಮೂಲಕ ಲಕ್ಷಾಂತರ ಮಂದಿ ಮಹಿಳೆಯರು ಪ್ರತೀ ತಿಂಗಳು 2 ಸಾವಿರ ರೂಪಾಯಿ ಆರ್ಥಿಕ ಸಹಾಯವನ್ನು ಪಡೆಯುತ್ತಿದ್ದಾರೆ. ಸರಕಾರ ಪ್ರತೀ ತಿಂಗಳ ಮೊದಲ ವಾರದಲ್ಲೇ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಬಿಡುಗಡೆ ಮಾಡುತ್ತಿದೆ.

ಹೊಸದಾಗಿ ಅರ್ಜಿ ಸಲ್ಲಿಸಬಹುದು.

ಇದುವರೆಗೂ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗದೇ ಇದ್ದವರು ಇದೀಗ ಮತ್ತೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ.

advertisement

Leave A Reply

Your email address will not be published.