Karnataka Times
Trending Stories, Viral News, Gossips & Everything in Kannada

Yuva Nidhi Scheme: 5 ನೇ ಗ್ಯಾರಂಟಿ ಯುವನಿಧಿ ಕೆಲವೇ ದಿನಗಳಲ್ಲಿ ಜಾರಿ; ಈ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ

advertisement

ಕಾಂಗ್ರೆಸ್ ಸರ್ಕಾರ ಘೋಷಿಸಿರುವ 5 ಗ್ಯಾರಂಟಿಗಳಲ್ಲಿ ಯುವನಿಧಿ ಯೋಜನೆ (Yuva Nidhi Scheme) ಕೂಡ ಪ್ರಮುಖವಾದದ್ದಾಗಿದೆ. ಕಾಂಗ್ರೆಸ್ ಈಗಾಗಲೇ ನಾಲ್ಕು ಯೋಜನೆಗಳನ್ನು ಜಾರಿಗೆ ತಂದಿದೆ ಆದರೆ ಉಳಿದ ಒಂದು ಯೋಜನೆಯನ್ನು ಇದೇ ತಿಂಗಳಿನಲ್ಲಿ ಅಥವಾ ಜನವರಿ ತಿಂಗಳಿನಲ್ಲಿ ಜಾರಿಗೆ ಬರಲಿದೆ. ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ನವರು ಸೂಚನೆಯನ್ನು ನೀಡಿದ್ದಾರೆ.

ಇನ್ನು ಯುವನಿಧಿ ಹಣ (Yuva Nidhi Money) ಅಭ್ಯರ್ಥಿಗಳ ಖಾತೆಗೆ ಯಾವಾಗಿನಿಂದ ಬೀಳಲಿದೆ ಎಂಬುದಕ್ಕೂ ಮಾಹಿತಿ ದೊರೆತಿದ್ದು, 2024 ರ ಜನವರಿ ತಿಂಗಳಿಂದಲೇ ಯುವನಿಧಿ ಹಣ ಫಲಾನುಭವಿಗಳ ಖಾತೆಗೆ ಬೀಳಲಿದೆ ಎಂದು ಸರ್ಕಾರ ತಿಳಿಸಿದೆ. ಕರ್ನಾಟಕ ರಾಜ್ಯ ಸರ್ಕಾರವು 2022-23ರಲ್ಲಿ ತೇರ್ಗಡೆಯಾಗಿ 6 ತಿಂಗಳು ಪೂರೈಸಿದ ಪದವೀಧರ ನಿರುದ್ಯೋಗಿಗಳಿಗೆ ಹಾಗೂ ಡಿಪ್ಲೊಮ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುವ ಸಲುವಾಗಿ ಯುವ ನಿಧಿ ಯೋಜನೆಯನ್ನು ಜಾರಿಗಳಿಸಿದೆ. ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ (Seva Sindhu Portal) ಮೂಲಕ ನೊಂದಣಿ ಮಾಡಿಕೊಳ್ಳಬಹುದು. ಸುಮಾರು 5 ಲಕ್ಷ ಅಭ್ಯರ್ಥಿಗಳು ಈ ಪ್ರೋತ್ಸಾಹಧನದ ಸದುಪಯೋಗ ಪಡೆಯಲಿದ್ದಾರೆ ಎಂದು ಸರ್ಕಾರ ಹೇಳಿದೆ.

ಯುವ ನಿಧಿ ಭತ್ಯೆ ವಿವರಗಳು ಹೀಗಿವೆ:

 

 

ಪದವೀಧರ ನಿರುದ್ಯೋಗಿಗಳಿಗೆ: ಪ್ರತಿ ತಿಂಗಳು 3000 ರೂಪಾಯಿ.

ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ: ಪ್ರತಿ ತಿಂಗಳು 1500 ರೂಪಾಯಿ.

ಯುವ ನಿಧಿ ಯೋಜನೆಗೆ ಅರ್ಜಿ ಹಾಕಲು ಅರ್ಹತೆಗಳು

  • 2023 ರ ವರ್ಷದಲ್ಲಿ ಪದವಿ / ಡಿಪ್ಲೊಮ ತೇರ್ಗಡೆಯಾಗಿದ್ದು, ಉತ್ತೀರ್ಣರಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್‌ಗಳು, ಸೇರಿದಂತೆ) ಮಾತ್ರ ಯುವ ನಿಧಿ ಯೋಜನೆಗೆ (Yuva Nidhi Scheme) ಅರ್ಜಿ ಸಲ್ಲಿಸಲು ಅರ್ಹತೆ ಇರುತ್ತದೆ.
  • ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ದಿನಾಂಕದಿಂದ ತಾವು ಉದ್ಯೋಗ ಸಿಗುವವರೆಗೆ ಮಾತ್ರ ಅಥವಾ ಎರಡು ವರ್ಷ ಗರಿಷ್ಠ ಅವಧಿಯ ವರೆಗೆ ಮಾತ್ರ ಈ ಸೌಲಭ್ಯ ನೀಡಲಾಗುತ್ತದೆ.
  • ಕರ್ನಾಟಕ ರಾಜ್ಯದ ಕನ್ನಡಿಗ ಅಭ್ಯರ್ಥಿಗಳಿಗೆ ಮಾತ್ರ ಯುವನಿಧಿ ಯೋಜನೆ ಅನ್ವಯವಾಗುತ್ತದೆ.
  • ಯುವ ನಿಧಿ ಯೋಜನೆ ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 21 ರಿಂದ ಅವಕಾಶ ನೀಡಲಾಗುತ್ತಿದೆ.
  • ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು. ಅಭ್ಯರ್ಥಿಗಳು ತಾವು ನಿರುದ್ಯೋಗಿಗಳೆಂದು ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತ್ತೀರ್ಣರಾದ ದಿನಾಂಕದಿಂದ 6 ತಿಂಗಳ ವರೆಗೆ ತಮ್ಮ ಅಧಿಕೃತ ಬ್ಯಾಂಕ್‌ ಖಾತೆಗಳ ವಹಿವಾಟು ಸ್ಟೇಟ್‌ಮೆಂಟ್‌ ಪ್ರತಿ ಕಡ್ಡಾಯವಾಗಿ ಸಲ್ಲಿಸಬೇಕಾಗಿರುತ್ತದೆ.

 

 

advertisement

ಯುವನಿಧಿಗೆ ಅಪ್ಲಿಕೇಶನ್‌ ಸಲ್ಲಿಸಲು ಯಾರು ಅರ್ಹರಲ್ಲ:

  • ಉನ್ನತ ಶಿಕ್ಷಣಕ್ಕಾಗಿ ಪ್ರವೇಶ ಪಡೆದು ಅಧ್ಯಯನ ಮುಂದುವರೆಸಿರುವವರು.
  • ಯಾವುದೇ ಅಪ್ರೆಂಟಿಸ್‌ ಹುದ್ದೆಗೆ ನಿಯೋಜನೆಗೊಂಡಿರುವವರು.
  • ಸರ್ಕಾರಿ ಮತ್ತು ಖಾಸಗಿ ವಲಯ ಉದ್ಯೋಗ ಪಡೆದಿರುವವರು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ವಾಸಸ್ಥಳಪುರಾವೆ
  • ಅಭ್ಯರ್ಥಿಯ ಆಧಾರ್ ಕಾರ್ಡ್‌
  • ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ
  • ಪಿಯುಸಿ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ
  • ಪದವಿ ವೃತ್ತಿಪರ ಕೋರ್ಸ್‌ ಪಡೆದ ಪ್ರಮಾಣ ಪತ್ರ
  • ಬ್ಯಾಂಕ್‌ ಖಾತೆ ಪಾಸ್ ಬುಕ್‌ ಪ್ರತಿ
  • ಆದಾಯ ಪ್ರಮಾಣಪತ್ರ
  • ಡಿಪ್ಲೋಮಾ (ಡಿಪ್ಲೋಮಾ ಹೊಂದಿರುವವರಿಗೆ )
  • ಜಾತಿ ಪ್ರಮಾಣ ಪತ್ರ (ಅನ್ವಯವಾದರೆ)
  • ಮೊಬೈಲ್ ಸಂಖ್ಯೆ
  • ಬ್ಯಾಂಕ್ ಖಾತೆ ವಿವರಗಳು
  • ಸ್ವಯಂ ಘೋಷಣೆ

ಯುವ ನಿಧಿ ಯೋಜನೆ ಷರತ್ತುಗಳು

  • ಸೇವಾ ಸಿಂಧು ಪೋರ್ಟಲ್‌ ಮೂಲಕವೇ ಅರ್ಜಿ ಸಲ್ಲಿಸಬೇಕು .
  • ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಣೆ ಮಾಡಿದರೆ ಸಾಕಾಗುತ್ತದೆ. ಆದರೆ, ಅಸತ್ಯದ ಪ್ರಮಾಣ ಸಲ್ಲದು.
  • ಪದವಿ/ ಡಿಪ್ಲೊಮಾ ಮುಗಿಸಿದ ಫ್ರೆಷರ್ಸ್‌ಗೆ 6 ತಿಂಗಳಾದರೂ ಉದ್ಯೋಗ ಸಿಗದೆ ಇದ್ದರೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
  • ಫಲಾನುಭವಿಗೆ 2 ವರ್ಷಗಳಿಗೆ ಮಾತ್ರ ಸೀಮಿತ. 2 ವರ್ಷಗಳೊಳಗೆ ಉದ್ಯೋಗ ದೊರೆತರೆ ಯೋಜನೆ ಸೌಲಭ್ಯ ಸ್ಥಗಿತ
  • ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಂಡು ಭತ್ಯೆ ಸ್ವೀಕರಿಸುವುದನ್ನು ನಿಲ್ಲಿಸಬೇಕು. ಇಲ್ಲದೇ ಇದ್ದರೆ ದಂಡ ವಿಧಿಸಲಾಗುತ್ತದೆ.

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

  1. ಕರ್ನಾಟಕ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ
  2. ಮತದಾರರ ಗುರುತಿನ ಚೀಟಿ (Identity Card), ಪಡಿತರ ಚೀಟಿ (Ration Card) ಮತ್ತು ಆಧಾರ್‌ ಕಾರ್ಡ್‌ (Aadhaar Card) ತೆಗೆದಿಟ್ಟುಕೊಳ್ಳಿ.
  3. ನಿಮ್ಮ ಬ್ಯಾಂಕ್‌ ಖಾತೆ ಮಾಹಿತಿ‌ ಸ್ಪಷ್ಟವಾಗಿಬೇಕು, ಖಾತೆಯೇ ಇಲ್ಲದಿದ್ದರೆ ಈಗಲೇ ಮಾಡಿಸಿ, KYC ಕೂಡಾ ಮಾಡಿ ಇಡಿ.
  4. ಪದವಿ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ ಕಡ್ಡಾಯ (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು)
  5. ಡಿಪ್ಲೊಮಾ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ. (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು).

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ?

ಯುವನಿಧಿ ಯೋಜನೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ನೀವು ಸೇವಾಸಿಂಧು ಪೋರ್ಟಲ್‌ https://sevasindhu.karnataka.gov.in ಗೆ ಬೇಟಿ ನೀಡಬೇಕಾಗುತ್ತದೆ. ದಿನಾಂಕ 26 ಡಿಸೆಂಬರ್ ಇಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.

advertisement

Leave A Reply

Your email address will not be published.