Karnataka Times
Trending Stories, Viral News, Gossips & Everything in Kannada

Street Vendors: ಬೀದಿ ಬದಿ ವ್ಯಾಪಾರ ಮಾಡುತ್ತಿರುವ ಜನರಿಗೆ ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್!

advertisement

ಕೆಲ ದಿನಗಳ ಹಿಂದಷ್ಟೇ ಬೀದಿ ಬದಿಯ ವ್ಯಾಪಾರಿಗಳ ಮೇಲೆ ಪಾದಚಾರಿಗಳ ಹಾಗೂ ವಾಹನ ಸವಾರರ ಅಸಮಾಧಾನದ ಮಾತುಗಳು ಕೇಳಿ ಬಂದಿತ್ತು. ಇದೀಗ ಹೈಕೋರ್ಟ್ (High Court) ಆದೇಶದಂತೆ ಬೀದಿ ವ್ಯಾಪಾರಿಗಳ ಒತ್ತುವರಿ ತೆರವು ಆಗುತ್ತದೆ ಎಂದು KPCC ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಸಂಚಾರ ದಟ್ಟಣೆ ದೊಡ್ಡ ಸಮಸ್ಯೆಯಾಗಿದೆ. ಸುಗಮ ಸಂಚಾರ ಹಾಗೂ ಪಾದಚಾರಿಗಳ ಅನುಕೂಲಕ್ಕಾಗಿ ಹೈಕೋರ್ಟ್ ಆದೇಶದ ಪಾದಚಾರಿ ಮಾರ್ಗಗಳ ವ್ಯಾಪಾರಿಗಳ ಒತ್ತುವರಿ ತೆರವು ಮಾಡಲಾಗುತ್ತಿದೆ.

ಹಾಗಿದ್ದರೆ ಬೀದಿ ಬದಿಯ ವ್ಯಾಪಾರಿಗಳ ಗತಿಯೇನು?

 

 

advertisement

ಸಂಚಾರಕ್ಕೆ ಸಮಸ್ಯೆ ಆಗದಂತೆ ಬೀದಿ ಬದಿ ವ್ಯಾಪಾರಿಗಳು (Street Vendors) ಒಂದು ಬದಿಗೆ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುವುದಾದರೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಸಿದ್ಧವಿದ್ದೇವೆ. ಅವರಿಗೆ ಹಣಕಾಸು ಸಹಾಯವಿದೆ ಎಂದು ಭರವಸೆ ನೀಡಿದ್ದಾರೆ.

ಜಯನಗರದಲ್ಲಿ ಬೀದಿ ಬದಿ ವ್ಯಾಪಾರಿಗಳು (Street Vendors) ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಾದಚಾರಿಗಳು ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗದಂತೆ ವ್ಯಾಪಾರ ಮಾಡಿದರೆ ಅನುಕೂಲವಾಗುತ್ತದೆ. ಆದರೆ ಪಾದಚಾರಿ ಮಾರ್ಗದಲ್ಲೇ ಶಾಶ್ವತ ಟೆಂಟ್ ಹಾಕಿಕೊಂಡರೆ ಪಾದಚಾರಿಗಳು ಎಲ್ಲಿ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳು ಮುಖ್ಯ ರಸ್ತೆಗಳ ಪಾದಚಾರಿ ಮಾರ್ಗದಲ್ಲೇ ವ್ಯಾಪಾರ ಮಾಡುತ್ತಾರೆ. ಅಡ್ಡ ರಸ್ತೆಯ ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ಮಾಡಲು ಮನೆಗಳಿಗೆ ಅವಕಾಶ ನೀಡುವುದಿಲ್ಲ. ಜನರಿಗೆ ಸಮಸ್ಯೆಯಾಗದ ಕಡೆ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡಿದರೆ ಆರ್ಥಿಕ ಸಹಾಯ ಮಾಡಬಹುದು ಎಂದಿದ್ದಾರೆ .

advertisement

Leave A Reply

Your email address will not be published.