Karnataka Times
Trending Stories, Viral News, Gossips & Everything in Kannada

Handicapped People: ದೈಹಿಕ ವಿಕಲಚೇತನರಿಗೆ ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ, ಹೀಗೆ ಅಪ್ಲೈ ಮಾಡಿ!

advertisement

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2023 – 2024 ನೆಯ ಸಾಲಿಗೆ ಇಲಾಖೆ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸಿದೆ. ಈ ಇಲಾಖೆಯ ಯೋಜನೆಗಳು ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನೆ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್ ಯೋಜನೆ ಈ 05 ಯೋಜನೆಗಳಿಗೆ 2023-24 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (https://sevasindhu.karnataka.gov.in/Sevasindhu/DepartmentServicesKannada)  ಪೋರ್ಟಲ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಜನವರಿ, 30 ಕೊನೆಯ ದಿನವಾಗಿದೆ. ಜಿಲ್ಲೆಯ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಲು ಕೋರಿದೆ.

ದೈಹಿಕ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ

ಇನ್ನು ದೈಹಿಕ ವಿಕಲಚೇತನರು ಸ್ವಾವಲಂಬಿ ಜೀವನ ನಡೆಸಲಿ ಎನ್ನುವ ಉದ್ದೇಶದಿಂದ ಸರ್ಕಾರ ಇದೀಗ ಹೊಸ ಸೌಲಭ್ಯವನ್ನು ನೀಡಲು ಮುಂದಾಗಿದೆ. ದೈಹಿಕ ವಿಕಲಚೇತನರಿಗೆ (Handicapped People) 4000 ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 36 ಕೋಟಿ ಅಂದಾಜು ವೆಚ್ಚದಲ್ಲಿ ದೈಹಿಕ ವಿಕಲಚೇತನರಿಗೆ 4000 ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ದೈಹಿಕ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ಸದ್ಯದಲ್ಲೇ ವಿತರಿಸುವುದಾಗಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.

advertisement

ಯಾವೆಲ್ಲ ದಾಖಲೆ ನೀಡಬೇಕು?

ಆಧಾರ್ ಕಾರ್ಡ್,ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, UIADI ಕಾರ್ಡ್ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಗ್ರಾಮ ಒನ್ ಕೇಂದ್ರಗಳಿಗೆ ಹೋಗಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು. ಅಥವಾ ನಿಮ್ಮ ಜಿಲ್ಲೆಯ ಅಂಗವಿಕಲರ ಕಲ್ಯಾಣಧಿಕಾರಿಗಳು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿಗೂ ಕೂಡ ಭೇಟಿ ನೀಡಿ ಹೆಚ್ಚಿನ ಮಾಹಿತಿ ಲಾಡೆದು ನಂತರ ಅರ್ಜಿ ಸಲ್ಲಿಸಬಹುದು. ಯೋಜನೆಯ ಲಾಭವನ್ನ ಮುಖ್ಯವಾಗಿ ಎಸ್ ಎಸ್ ಎಲ್ ಸಿ ಮುಗಿಸಿ ಮುಂದಿನ ವಿದ್ಯಾಭ್ಯಾಸ ಮಾಡಲು ಬಯಸುವವರು, ಟಾಕಿಂಗ್ ಲ್ಯಾಪ್ ಟಾಪ್ ಪಡೆದುಕೊಳ್ಳಬಹುದು, ಇನ್ನು ದೈಹಿಕ ಅಂಗ ವೈಕಲ್ಯ ಇರುವವರಿಗೆ ಮೋಟಾರ್ ಬೈಕ್, ದೃಷ್ಟಿ ದೋಷ ಇರೋರಿಗೆ ಬೈಲ್ ಕಿಟ್, ಶ್ರಾವಣ ದೋಷ ಇರುವಂತವರಿಗಾಗಿ ಹೊಲಿಗೆ ಯಂತ್ರಗಳು ಸೇರಿದಂತೆ ವಿಕಲಚೇತನರಿಗೆ ಒಂದಷ್ಟು ಸಲಕರಣೆಗಳನ್ನ ನೀಡಲಾಗುತ್ತಿದೆ. ಹೀಗಾಗಿ ಆಸಕ್ತರು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

advertisement

Leave A Reply

Your email address will not be published.