Karnataka Times
Trending Stories, Viral News, Gossips & Everything in Kannada

CM Siddaramaiah: ಗ್ಯಾರಂಟಿ ಯೋಜನೆ ಪಡೆಯುತ್ತಿದ್ದ ಎಲ್ಲರಿಗೂ ಗುಡ್ ನ್ಯೂಸ್! ಸಿಎಂ ಹೊಸ ಘೋಷಣೆ

advertisement

ವಿಧಾನಸಭೆ ‌ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನ ಮತವನ್ನು ಸೆಳೆದಿತ್ತು. ಅದೇ ರೀತಿ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ (Gruha Lakshmi), ಗೃಹಜ್ಯೋತಿ (Gruha Jyothi), ಅನ್ನಭಾಗ್ಯ (Anna Bhagya), ಯುವನಿಧಿ (Yuva Nidhi), ಶಕ್ತಿ ಯೋಜನೆ (Shakti Yojana) ಇತ್ಯಾದಿಯನ್ನು ಜಾರಿಗೆ ತರುವ ಮೂಲಕ ಕೆಲವೊಂದು ಸೌಲಭ್ಯ ವಿತರಣೆ ಮಾಡುತ್ತಿದೆ. ಈಗಾಗಲೇ ಹೆಚ್ಚಿನ ಜನರು ಗ್ಯಾರಂಟಿ ಯೋಜನೆಗಳ ಬಗ್ಗೆ ಧನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆ ಸ್ಥಗಿತ?

ಇನ್ನೇನು ಲೋಕಸಭೆ ಚುನಾವಣೆ ಕೂಡ ನಡೆಯಲಿದ್ದು ಚುನಾವಣೆ ಪ್ರಚಾರ ಜೋರಾಗಿಯೇ ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್ ಗೆಲ್ಲದೆ ಇದ್ದಲ್ಲಿ ಗ್ಯಾರಂಟಿ ಯೋಜನೆ (Guarantee Scheme) ಸ್ಥಗಿತ ಆಗಲಿದೆ, ಅರ್ಧ ಕ್ಕೆ ಯೋಜನೆಗಳು ನಿಲ್ಲಲಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ವಿರೋಧ ಪಕ್ಷಗಳು ಕೂಡ ಗ್ಯಾರಂಟಿ ಯೋಜನೆಗಳ ಬಗ್ಗೆ ಋಣಾತ್ಮಕ ಪ್ರತಿಕ್ರಿಯೆ ನೀಡುತ್ತ ಇದೆ. ಇದೀಗ ಈ ಬಗ್ಗೆ ಸಿಎಂ (CM Siddaramaiah) ಸ್ಪಷ್ಟನೆ ನೀಡಿದ್ದಾರೆ.

ಬಡಜನತೆಯ ಅಭಿವೃದ್ಧಿ ಪರ ಯೋಜನೆ:

 

Image Source: ANI News

 

advertisement

ಗ್ಯಾರಂಟಿ ಯೋಜನೆಗಳು (Guarantee Schemes) ತಾತ್ಕಲಿಕವಾದ ಯೋಜನೆ ಯಲ್ಲ. ಇದು ಬಡಜನತೆಯ ಅಭಿವೃದ್ಧಿ ಗಾಗಿ ಜಾರಿಗೆ ತಂದಂತಹ ಯೋಜನೆಗಳು ಇದಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಇದೀಗ ಭರವಸೆ ಯನ್ನು ಜನತೆಗೆ ನೀಡಿದ್ದಾರೆ. ಈಗಾಗಲೇ ಗ್ಯಾರಂಟಿ ಯೋಜನೆಗಳು ನಿಲುತ್ತದೆ. ಅರ್ಧಕ್ಕೆ ಸ್ಥಗಿತ ವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಿದ್ದಾರೆ.ಈ ಬಗ್ಗೆ ಸುದ್ದಿಗಾರ ರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ತಾತ್ಕಾಲಿಕ ಯೋಜನೆ ಅಲ್ಲ:

ಗ್ಯಾರಂಟಿ ಯೋಜನೆಗಳು ತಾತ್ಕಾಲಿಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಹೇಳಿಕೆ‌ನೀಡಿದ್ದಾರೆ.‌ಆದ್ರೆ ಗ್ಯಾರಂಟಿ ಯೋಜನೆಗಳ ಬಗ್ಗೆ ನಮಗೆ ಸ್ಪಷ್ಟನೆ ಇದೆ. ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ತಾತ್ಕಾಲಿಕವಲ್ಲ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದಿದ್ದಾರೆ.

ಅಭಿವೃದ್ಧಿ ಪರ ಕೆಲಸ ಮಾಡಲಿದೆ:

ಗ್ಯಾರಂಟಿ ಯೋಜನೆಗಳ ಹಣ ಹೊಂದಿಸಲು ಬಜೆಟ್ ನಲ್ಲಿಯು ಈ ಬಗ್ಗೆ ಚರ್ಚಿಸಲಾಗಿದೆ. ಮುಂದೆಯು ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುವ ಕೆಲಸ ಮಾಡುತ್ತೇವೆ. ಈಗಾಗಲೇ ಮುಂದಿನ ವರ್ಷದ ಗ್ಯಾರಂಟಿ ಯೋಜನೆಗಳಿಗಾಗಿ ೫೨ ಸಾವಿರ ಕೋಟಿ ರೂ.ಮೀಸಲಿಡಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಇನ್ನಷ್ಟು ಅಭಿವೃದ್ಧಿ ಪರ ಕೆಲಸಗಳನ್ನು ಜಾರಿಗೆ ಮಾಡಲಿದೆ ಎಂದಿದ್ದಾರೆ.

advertisement

Leave A Reply

Your email address will not be published.