Karnataka Times
Trending Stories, Viral News, Gossips & Everything in Kannada

Covid-19: ದೇಶದಲ್ಲಿ ಕೊರೊನಾ ಭೀತಿ ಹೆಚ್ಚಳ, ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ

advertisement

ಈಗಾಗಲೇ ರಾಜ್ಯದಲ್ಲಿ ಕೊರೋನಾ ‌ಭೀತಿ ಮತ್ತಷ್ಟು ಹೆಚ್ಚಳವಾಗಿದೆ. ಹೆಚ್ಚುತ್ತಿರುವ ಕೋವಿಡ್ ಪ್ರಕರಣಕ್ಕೆ ಕಡಿವಾಣ ಹಾಕಲು ಕೇಂದ್ರ ಸರಕಾರ ರಾಜ್ಯಗಳಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಕೇರಳದಲ್ಲಿ ಕೋವಿಡ್-19 (Covid-19) ಜೆಎನ್.1 ರೂಪಾಂತರಿ ಪತ್ತೆ ‌ಯಾಗಿದ್ದು ಈ ಬಗ್ಗೆ ನಿಗಾ ವಹಿಸಲು ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಕ್ರಮಗಳ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ನೀಡಿದೆ.

ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಅಗತ್ಯ ಸುರಕ್ಷತೆ ಬೇಕಾಗಿದ್ದು ಮುಂಬರುವ ದಿನದಲ್ಲಿ ಹಬ್ಬ ಸಮಾರಂಭ ಗಳು ಹೆಚ್ಚಾಗಲಿದ್ದು ರೋಗಗಳ ಹರಡುವಿಕೆಯ ಅಪಾಯವನ್ನು ತಡೆಗಟ್ಟಲು ಅಗತ್ಯವಾದ ಸಾರ್ವಜನಿಕ ಆರೋಗ್ಯ ಕ್ರಮಗಳು ಮತ್ತು ಇತರ ವ್ಯವಸ್ಥೆಗಳನ್ನು ಜಾರಿಗೆ ತರಲು ಕೇಂದ್ರ ಸರಕಾರ ಮುಂದಾಗಿದೆ.

ಸೂಚನೆ ನೀಡಲಾಗಿದೆ

advertisement

ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ತೀವ್ರ ಉಸಿರಾಟದ ಕಾಯಿಲೆ ಪ್ರಕರಣಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಿ ಮತ್ತು ವರದಿ ಮಾಡಲು ರಾಜ್ಯಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.

ಈ ಕ್ರಮ ಅನುಸರಿಸಿ

  • ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳು ಇರುವವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯುದು ಕಡ್ಡಾಯ ‌ವಾಗಿದೆ.
  • ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು
  • ಮುಂಬರುವ ದಿನದಲ್ಲಿ ಹಬ್ಬ, ಜಾತ್ರೆಗಳು ಹೆಚ್ಚಾಗಿದ್ದು ಈ ಬಗ್ಗೆ ನಿಗಾವಹಿಸಬೇಕು. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಜವಾಬ್ದಾರಿ ಹೆಚ್ಚಿಸಬೇಕು.
  • ಹೊಸ ಕೊರೊನಾ ರೂಪಾಂತರ ತಳಿಗಳನ್ನು ಪತ್ತೆ ಹಚ್ಚಲು ಆರ್‌ಟಿ-ಪಿಸಿಆರ್‌ ಪರೀಕ್ಷೆಗಳನ್ನು ಮಾಡಬೇಕು
  • ವಯಸ್ಸಿನ ‌ವೃದ್ದರು, ಆರೋಗ್ಯ ಸಮಸ್ಯೆ ‌ಇರುವವರು ಮನೆಯಲ್ಲಿ ರೆಸ್ಟ್ ಮಾಡಿ ಜಾಗೃತೆ ವಹಿಸಬೇಕು.
  • ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆ ಮಾಡಬೇಕು.
  • ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡು ಇರುವ ಗಡಿ ಭಾಗದಲ್ಲಿ ಕೋವಿಡ್ ತಪಾಸಣೆ ನಡೆಸುವುದು ಕಡ್ಡಾಯ ವಾಗಿದೆ‌

advertisement

Leave A Reply

Your email address will not be published.