Karnataka Times
Trending Stories, Viral News, Gossips & Everything in Kannada

PM Awas Yojana: ಪ್ರಧಾನ ಮಂತ್ರಿ ಆವಾಸ್ ಯೋಜನೆ ಲಿಸ್ಟ್ ಬಿಡುಗಡೆ; ನಿಮ್ಮ ಹೆಸರು ಹೀಗೆ ಚೆಕ್ ಮಾಡಿಕೊಳ್ಳಿ!

advertisement

ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರಿಗೂ ಕೂಡ ಸ್ವಂತ ಸೂರು ಇರಬೇಕು ಎನ್ನುವುದು ಸರ್ಕಾರದ ಉದ್ದೇಶ. ಈ ಕಾರಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಸರ್ಕಾರ ರೂಪಿಸಿದೆ. ಅದರಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆ (PM Awas Yojana) ಕೂಡ ಒಂದು. ಈ ಯೋಜನೆ ಅಡಿಯಲ್ಲಿ ಈಗಾಗಲೇ ಲಕ್ಷಾಂತರ ಮನೆ ನಿರ್ಮಾಣ ಮಾಡಿಕೊಡಲಾಗಿದೆ. ಹಾಗೂ ಇನ್ನಷ್ಟು ಮನೆ ನಿರ್ಮಾಣ ಮಾಡಿಕೊಡಲು ಸರ್ಕಾರ ಹಣ ಬಿಡುಗಡೆ ಮಾಡಿದೆ.

ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಪಟ್ಟಿ ಬಿಡುಗಡೆ!

ಪ್ರಧಾನ್ ಮಂತ್ರಿ ಆವಾಸ್ ಯೋಜನೆಗಾಗಿ ಅರ್ಜಿ ಸಲ್ಲಿಸಿದ ಹಾಗೂ ಅರ್ಜಿ ಪರಿಶೀಲನೆಗೊಂಡು ಮನೆ ಮಂಜೂರಾಗಿರುವವರ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ.

ಆವಾಸ್ ಯೋಜನೆಯ ಹಣ ಪಡೆಯುವುದು ಹೇಗೆ?

ಈ ಯೋಜನೆಯಲ್ಲಿ ಸರ್ಕಾರ ಹಂತ ಹಂತವಾಗಿ ಫಲಾನುಭವಿಗಳಿಗೆ ಹಣವನ್ನು ಬಿಡುಗಡೆ ಮಾಡುತ್ತದೆ. ನಿರ್ಮಾಣ ಕಾರ್ಯ ಆರಂಭವಾದ ನಂತರ ಸರ್ಕಾರದಿಂದ ಹಣ ಬಿಡುಗಡೆ ಮಾಡಲಾಗುತ್ತದೆ. ಪ್ರತಿಯೊಂದು ಮನೆಯ ಹಂತ ನಿರ್ಮಾಣ ಆಗುತ್ತಿದ್ದ ಹಾಗೆ ಅದರ ಫೋಟೋವನ್ನು ಮನೆಯ ಮಾಲೀಕರ ಜೊತೆ ತೆಗೆಸಿಕೊಂಡು ಗ್ರಾಮ ಪಂಚಾಯತ್ ಗೆ ಸಲ್ಲಿಕೆ ಮಾಡಬೇಕಾಗುತ್ತದೆ. ಈ ರೀತಿ ಮಾಡಿದ್ರೆ ಫಲಾನುಭವಿಗಳಿಗೆ ಶಾಶ್ವತ ಮನೆ ಕಟ್ಟಿಕೊಳ್ಳಲು, ಸರ್ಕಾರದಿಂದ ಸಬ್ಸಿಡಿ ದರದಲ್ಲಿ ಹಣ ಬಿಡುಗಡೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ಹತ್ತಿರದ ಜನಸೇವಾ ಕೇಂದ್ರಕ್ಕೆ ಹೋಗಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕೆ ಅಗತ್ಯ ಇರುವ ದಾಖಲೆಗಳ ಸಮೇತ ಅರ್ಜಿ ಫಾರಂ ಭರ್ತಿ ಮಾಡಿ ಕೊಡಬೇಕಾಗುತ್ತದೆ. ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ https://pmayg.nic.in/netiayHome/home.aspx ಗೆ ಭೇಟಿ ನೀಡಿ ಸಂಬಂಧ ಪಟ್ಟ ಮಾಹಿತಿಗಳನ್ನು ಒದಗಿಸಿ ದಾಖಲೆಗಳನ್ನು ಅಪ್ಲೋಡ್ ಮಾಡಿದ್ರೆ ನಿಮ್ಮ ಅರ್ಜಿ ಸ್ವೀಕರಿಸಲ್ಪಡುತ್ತದೆ. ನಂತರ ಅರ್ಜಿ ಪರಿಶೀಲನೆ ಮಾಡಿ ಫಲಾನುಭವಿಗಳಿಗೆ ಹಣ ಮಂಜೂರು ಮಾಡಲಾಗುತ್ತದೆ.

advertisement

ಬೇಕಾಗಿರುವ ದಾಖಲೆಗಳು!

  • ಆಧಾರ್ ಕಾರ್ಡ್
  • ಅರ್ಜಿದಾರರ ವಿಳಾಸ ಪುರಾವೆ
  • ಬ್ಯಾಂಕ ಖಾತೆಯನ್ನು ಆಧಾರ್ ಗೆ ಲಿಂಕ್ ಮಾಡುವುದು
  • ಮೊಬೈಲ್ ಸಂಖ್ಯೆ
  • ಪಾಸ್ಪೋರ್ಟ್ ಅಳತೆಯ ಫೋಟೋ

ಈ ಯೋಜನೆಯ ಪ್ರಯೋಜನ ಯಾರಿಗೆ ಸಿಗಲಿದೆ?

  • ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ವಿಭಾಗದಲ್ಲಿ ಅರ್ಜಿ ಸಲ್ಲಿಸಿದ ಗ್ರಾಮೀಣ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಿಕೊಡಲಾಗುವುದು.
  • ಆರ್ಥಿಕವಾಗಿ ದುರ್ಬಲ ವಿಭಾಗ
  • ಯಾವುದೇ ಜಾತಿ ಅಥವಾ ಧರ್ಮದ ಮಹಿಳೆಯರು, ಮಧ್ಯಮ ವರ್ಗ 1, ಮಧ್ಯಮ ವರ್ಗ 2, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೊದಲಾದವರು ಅರ್ಜಿ ಸಲ್ಲಿಸಬಹುದು.

ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

  • ಮೊದಲನೆಯದಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ https://pmayg.nic.in/netiayHome/home.aspx ಗೆ ಭೇಟಿ ನೀಡಿ.
  • ಈಗ ಹುಡುಕಾಟದಲ್ಲಿ ಫಲಾನುಭವಿಗಳ ಲಿಸ್ಟ್ ಎಂದು ಟೈಪ್ ಮಾಡಿ. ಹೊಸ ಪುಟ ತೆರೆದುಕೊಳ್ಳುತ್ತದೆ. ಈಗ ನಿಮ್ಮ ರಿಜಿಸ್ಟರ್ಡ್ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು.
  • ಸೆಂಡ್ ಒಟಿಪಿ ಎಂದು ಕ್ಲಿಕ್ ಮಾಡಿ ನಿಮ್ಮ ಈ ಮೊಬೈಲ್ ಸಂಖ್ಯೆಗೆ ಓಟಿಪಿ ಕಳುಹಿಸಲಾಗುತ್ತದೆ ಅದನ್ನು ಮತ್ತೆ ಇಲ್ಲಿ ನಮೂದಿಸಬೇಕು.
  • ಈಗ ನಿಮ್ಮ ಕಂಪ್ಯೂಟರ್ ಪರದೆಯ ಮೇಲೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಇದರ ಫಲಾನುಭವಿಗಳ ಲಿಸ್ಟ್ ಕಾಣಿಸುತ್ತದೆ ಇದನ್ನು ನೀವು ಡೌನ್ಲೋಡ್ ಕೂಡ ಮಾಡಿಕೊಳ್ಳಲು ಅವಕಾಶ ಇದೆ.
  • ನೀವಿನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿಲ್ಲ ಎಂದರೆ ತಕ್ಷಣ ಅರ್ಜಿ ಸಲ್ಲಿಸಿ ಹಾಗೂ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳುವ ಕನಸನ್ನು ನನಸಾಗಿಸಿಕೊಳ್ಳಿ.

advertisement

Leave A Reply

Your email address will not be published.