Karnataka Times
Trending Stories, Viral News, Gossips & Everything in Kannada

CM Siddaramaiah: ವಿದ್ಯಾರ್ಥಿಗಳು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಕೊಟ್ಟ ಸಿಎಂ! ಹೊಸ ಆದೇಶ

advertisement

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆದು ನಿರ್ಣಯ ತೆಗೆದು ಕೊಳ್ಳಲಾಗಿದೆ.ಹೌದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಜನತೆಗೆ ಗುಡ್ ನ್ಯೂಸ್ ಅನ್ನು‌ ನೀಡಿದ್ದಾರೆ.ಅದರಲ್ಲಿ ಮುಖ್ಯ ವಾಗಿ ಸರಕಾರಿ ಶಾಲೆಗಳ ಉತ್ತೇಜನಕ್ಕೆ ಮಹತ್ವದ ನಿರ್ಣಯ ತೆಗೆದುಕೊಂಡಿದ್ದಾರೆ.‌ಈಗಾಗಲೇ ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹಲವು ರೀತಿಯ ಸೌಲಭ್ಯ ಗಳನ್ನು ನೀಡುತ್ತಿದ್ದು ಇದೀಗ ಮೂಲಭೂತ ಅವಶ್ಯಕ ವಸ್ತುಗಳನ್ನು ಬೇಡಿಕೆ ತಕ್ಕಂತೆ ನೀಡಲು ಮುಂದಾಗಿದ್ದಾರೆ.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆ (Govt School) ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರೂ. 29 ಕೋಟಿ ಅಂದಾಜು ಮೊತ್ತದಲ್ಲಿ ಉಚಿತ ವಿದ್ಯುತ್ (Free Electricity) ಹಾಗೂ ನೀರಿನ ಸೌಲಭ್ಯ ಒದಗಿಸುವ ಕಾರ್ಯಕ್ರಮಕ್ಕೂ ಒತ್ತು ನೀಡಿದ್ದಾರೆ. ಈಗಾಗಲೇ ಕೆಲವು ಶಾಲೆಗಳಲ್ಲಿ ನೀರಿನ ಸಮಸ್ಯೆ ಎದುರಾ ಗಿತ್ತು.‌ ಹಾಗಾಗಿ ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಯಾಗಬಾರದು ಎನ್ನುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹ ಮಾಡಲು ಉಚಿತ ವಿದ್ಯುತ್ ಹಾಗೂ ನೀರಿನ ಸೌಲಭ್ಯ ನೀಡಲು ಮುಂದಾಗಿದೆ.

 

Image Source: Times of India

 

advertisement

ಹಾಗೆಯೇ ಕ್ರೈಸ್ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಕ್ಕೆ ಅನುಮತಿ ಕೂಡ ಸಿಕ್ಕಿದ್ದು ರೋಟರಿ ಸಂಸ್ಥೆಗೆ ಇದರ ಜವಾಬ್ದಾರಿ ಯನ್ನು ಕೂಡ ನೀಡಲಾಗಿದೆ.ಹಾಗೆಯೇ ಉನ್ನತ ಶಿಕ್ಷಣ ಇಲಾಖೆಯ ವಿಶ್ವವಿದ್ಯಾಲಯಗಳಲ್ಲಿ ರಾಜ್ಯದಲ್ಲಿ ಪ್ರಧಾನ ಮಂತ್ರಿ ಉಚ್ಛತರ್ ಶಿಕ್ಷಾ ಅಭಿಯಾನ ಯೋಜನೆಯನ್ನು ಜಾರಿಗೆ ತರುವಂತೆ ಆದೇಶ ನೀಡಿದರು.‌ಆಯಾಯ ವಿಶ್ವವಿದ್ಯಾಲಯಗಳಿಗೆ ಸೂಚಿಸಿರುವಂತೆ ಬೆಂಗಳೂರು ವಿಶ್ವವಿದ್ಯಾಲಯ (ಬೆಂಗಳೂರು), ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ (ಬೆಳಗಾವಿ), ಕರ್ನಾಟಕ ವಿಶ್ವವಿದ್ಯಾಲಯ (ಧಾರವಾಡ), ಮಂಗಳೂರು ವಿಶ್ವವಿದ್ಯಾಲಯ (ಮಂಗಳೂರು), ಕಲಬುರಗಿ ವಿಶ್ವವಿದ್ಯಾಲಯ (ಕಲಬುರಗಿ) ಹಾಗೂ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ (ಬೆಂಗಳೂರು) ಗಳಲ್ಲಿ ಕೇಂದ್ರದ ವಂತಿಕೆ ರೂ.167.86 ಮತ್ತು ರಾಜ್ಯದ ವಂತಿಕೆ ರೂ. 111.91 ಕೋಟಿ ಒಟ್ಟು ರೂ.279.77 ಕೋಟಿಗಳ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸೂಚನೆ ನೀಡಿದರು.

ಅದೇ ರೀತಿ ಪ್ರಗತಿಪಥ ಯೋಜನೆ (Pragati Patha Scheme) ಯ ಮೂಲಕ ಗ್ರಾಮೀಣ ಭಾಗದ ಜನತೆಗೆ ಸಹಾಯಕ ವಾಗುವ ನಿಟ್ಟಿನಲ್ಲಿ ರಸ್ತೆಗಳ ಅಭಿವೃದ್ಧಿ ಮಾಡಲು ಕೂಡ ಮುಂದಾಗಿದೆ. ಹೀಗಾಗಿ 7,110 ಕಿ.ಮೀಗಳ ಗ್ರಾಮೀಣ ರಸ್ತೆ ಅಭಿವೃದ್ಧಿಯನ್ನು 5,190 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನ ಕೂಡ ಮಾಡಲಾಗಿದೆ.

ಇನ್ನು ಬಾಕಿ ಇರುವ ಆಸ್ತಿ ತೆರಿಗೆ ವಸೂಲಿ ಮಾಡಲು ಸಮರ್ಪಕ ವಸೂಲಿಗೆ ಸಿಬಂದಿ ಗಳ ಕೊರತೆ ಇರಲಿದ್ದು ಸ್ಥಳೀಯ ಮಹಿಳಾ ಸ್ವ ಸಹಾಯ ಗುಂಪುಗಳ ಸೇವೆಯನ್ನು ಪಡೆಯಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಸ್ವ-ಸಹಾಯ ಗುಂಪುಗಳಿಗೆ ವಸೂಲಾದ ಮೊತ್ತದಲ್ಲಿನ ಶೇ.5 ರಷ್ಟನ್ನು ಪ್ರೊತ್ಸಾಹ ಧನ ನೀಡಲು ಸಂಪುಟ ನಿರ್ಧರಿಸಿದೆ.ಇದರಿಂದ ಗ್ರಾಮೀಣ ಭಾಗದ ಮಹಿಳೆಯರಿಗೆ ಸಹಾಯಕವಾಗಲಿದೆ.

advertisement

Leave A Reply

Your email address will not be published.