Karnataka Times
Trending Stories, Viral News, Gossips & Everything in Kannada

Agricultural Loan: ರೈತರ ಕೃಷಿ ಸಾಲದ ಬಡ್ಡಿ ಮನ್ನಾ ಮಾಡಿದ ಸರ್ಕಾರ, ಆದರೆ ಈ ಕಂಡಿಷನ್ಸ್ ಅಪ್ಲೈ!

advertisement

ರಾಜ್ಯದ ಸಹಕಾರಿ ಸಂಸ್ಥೆಗಳ ಮೂಲಕ ಸಾಲ (Loan) ಪಡೆದು 2023ರ ಡಿಸೆಂಬರ್ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲ (Agricultural Loan) ಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬಡ್ಡಿ ಮನ್ನಾ ಸಂಬಂಧ ಘೋಷಣೆ ಮಾಡಿದ್ದರು. ಇದೀಗ ಸರಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ರೈತರು ರಾಜ್ಯದ ಸಹಕಾರ ಸಂಘಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು 31.12.2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ಫೆಬ್ರುವರಿ 29, 2024ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿ ಇರುವ ಬಡ್ಡಿಯನ್ನು ಮನ್ನಾ ಮಾಡಲು ಮಂಜೂರಾತಿ ನೀಡಲಾಗಿದೆ. ಹಾಗೂ ಕೆಲವು ಷರತ್ತು ವಿಧಿಸಲಾಗಿದೆ.

 

advertisement

ಸಾಲದ ಬಡ್ಡಿ ಮನ್ನಾ ಮಾಡಲು ಸರ್ಕಾರ ಜಾರಿ ಮಾಡಿರುವ ಷರತ್ತುಗಳೇನು?

  1. ಈ ಸೌಲಭ್ಯವು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು 31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲ (Agricultural Loan) ಗಳಿಗೆ ಮಾತ್ರ ಅನ್ವಯವಾಗುತ್ತದೆ.
  2. ಈ ಯೋಜನೆ ಕೃಷಿಯೇತರ ಸಾಲಗಳಿಗೆ ಅನ್ವಯವಾಗುವುದಿಲ್ಲ ಮತ್ತು ಮೇಲೆ ತಿಳಿಸಿರುವ ಸಂಸ್ಥೆಗಳನ್ನು ಹೊರತುಪಡಿಸಿ ಇತರ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಅನ್ವಯಿಸುವುದಿಲ್ಲ. ನಬಾರ್ಡ್‌ ಗುರುತಿಸಿದ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶುಸಂಗೋಪನೆ ಹಾಗೂ ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್ ಹಾಗೂ ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಮುಂದುವರೆದು, ರಾಜ್ಯ ಸರ್ಕಾರದ ಬಡ್ಡಿ ರಿಯಾಯತಿ ಬದ್ಧತೆಯಡಿ ವಿತರಿಸಿರುವ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.
  3. ಈ ಯೋಜನೆಯಲ್ಲಿ ಮರುಪಾವತಿಸುವ ಸಾಲಗಳಿಗೆ ಯಾವುದೇ ಸುಸ್ತಿ ಬಡ್ಡಿ, ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬಡ್ಡಿ, ವಸೂಲಿ ವೆಚ್ಚ (Recovery Charges) ಹಾಗೂ ಇತರೆ ವೆಚ್ಚಗಳನ್ನು ಸಹಕಾರ ಸಂಸ್ಥೆಗಳು ಕ್ಷೇಮು ಮಾಡತಕ್ಕದ್ದಲ್ಲ.7. ಈ ಯೋಜನೆಯಲ್ಲಿ ತಗಲುವ ವೆಚ್ಚವನ್ನು ಸಹಕಾರ ಇಲಾಖೆಗೆ ಒದಗಿಸಿರುವ ಆಯವ್ಯಯದ ಸಾಮಾನ್ಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಲೆಕ್ಕಶೀರ್ಷಿಕೆಯಲ್ಲಿ ಭರಿಸತಕ್ಕದ್ದು.
  4. ಈ ಯೋಜನೆಯಡಿ ಕ್ಷೇಮ್ ಬಿಲ್ಲುಗಳನ್ನು ಸಹಕಾರ ಸಂಘಗಳು ವಸೂಲಾತಿ ಅಂತಿಮ ದಿನಾಂಕದಿಂದ 45 ದಿನಗಳೊಳಗಾಗಿ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸತಕ್ಕದ್ದು, ರೈತರು ಸುಸ್ತಿ ಅಸಲು ಮೊತ್ತವನ್ನು ಮರುಪಾವತಿಸುವ ದಿನಾಂಕದವರೆಗೆ ಮಾತ್ರ ಬಡ್ಡಿ ಕ್ಷೇಮುಗಳಿಗೆ ಅವಕಾಶವಿರುತ್ತದೆ. ಯಾವುದೇ ಕಾರಣದಿಂದಾಗಿ ಕ್ಷೇಮು ಮೊತ್ತ ಬಿಡುಗಡೆಗೆ ಆಗುವ ವಿಳಂಬದ ಅವಧಿಗೆ ಯಾವುದೇ ಕ್ಷೇಮುಗಳಿಗೆ ಅವಕಾಶವಿರುವುದಿಲ್ಲ.
  5. ಪ್ಯಾಕ್ಸ್/ಲ್ಯಾಂಪ್ಸ್ ಸಹಕಾರ ಸಂಘಗಳು ಹಾಗೂ ಡಿಸಿಸಿ ಬ್ಯಾಂಕುಗಳ ಬಿಲ್ಲುಗಳನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಯಾರಿಸಿ ಸಹಕಾರ ಸಂಘಗಳ ಲೆಕ್ಕಪರಿಶೋಧನ ಜಂಟಿ / ಉಪ ನಿರ್ದೇಶಕರು ಮತ್ತು ಸಹಕಾರ ಸಂಘಗಳ ಉಪನಿಬಂಧಕರು ಇವರುಗಳ ಜಂಟಿ ದೃಢೀಕರಣದೊಂದಿಗೆ ಬಿಲ್ಲುಗಳನ್ನು ಬಿಡುಗಡೆಗೆ ವ್ಯವಸ್ಥಾಪಕ ನಿರ್ದೇಶಕರು, ಅಪೆಕ್ಸ್ ಬ್ಯಾಂಕ್ ಇವರ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸತಕ್ಕದ್ದು.
  6. ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು (ಪಿಕಾರ್ಡ್‌)ಗಳ ಬಿಲ್ಲುಗಳನ್ನು ಜಿಲ್ಲಾ ವ್ಯವಸ್ಥಾಪಕರು ತಯಾರಿಸಿ ಸಹಕಾರ ಸಂಘಗಳ ಲೆಕ್ಕಪರಿಶೋಧನ ಜಂಟಿ / ಉಪ ನಿರ್ದೇಶಕರು ಮತ್ತು ಸಹಕಾರ ಸಂಘಗಳ ಉಪನಿಬಂಧಕರು ಇವರುಗಳ ಜಂಟಿ ದೃಢೀಕರಣದೊಂದಿಗೆ ಎಂದು ತಿಳಿಸಿದ್ದಾರೆ.

advertisement

Leave A Reply

Your email address will not be published.