Karnataka Times
Trending Stories, Viral News, Gossips & Everything in Kannada

Subsidy: ಹೊಸ ಉದ್ಯಮ ಆರಂಭಿಸುವವರಿಗೆ ಸಿಗಲಿದೆ ಸರ್ಕಾರದಿಂದ 50 ಲಕ್ಷ ರೂಪಾಯಿ ಧನ ಸಹಾಯ, ಹೀಗೆ ಅರ್ಜಿ ಸಲ್ಲಿಸಿ!

advertisement

ಐಟಿ ಬಿಟಿ ಸಚಿವ ಪ್ರಿಯಾಂಕ ಖರ್ಗೆ (Priyank Kharge)  ಸ್ಟಾರ್ಟ್ ಅಪ್ ಗಳನ್ನು ಆರಂಭಿಸುವವರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈಗಾಗಲೇ ಸ್ಟಾರ್ಟ್ ಅಪ್ ಗೆ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಈಗ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಜನವರಿ 1, 2024ರ ವರೆಗೆ ವಿಸ್ತರಿಸಲಾಗಿದೆ ಎಂದು ಸಚಿವ ತಿಳಿಸಿದ್ದಾರೆ. ಡಿಸೆಂಬರ್, 2023ರ ವರೆಗೆ ಮಾತ್ರ ಅವಕಾಶ ನೀಡಲಾಗಿತ್ತು ಈಗ ಅವಧಿ ವಿಸ್ತರಣೆ ಮಾಡಲಾಗಿದೆ.

ತಾಂತ್ರಿಕವಾಗಿ ನಾವು ಸಾಕಷ್ಟು ಮುಂದುವರೆದಿದ್ದೇವೆ. ತಂತ್ರಜ್ಞಾನ ಲೋಕದಲ್ಲಿ ಸಾಕಷ್ಟು ಸಾಧನೆ ಮಾಡಿದ್ದೇವೆ ಇಡೀ ವಿಶ್ವವೇ ನಮ್ಮತ್ತ ತಿರುಗಿ ನೋಡುವಂತಹ ಹೊಸ ಹೊಸ ಅಪ್ಲಿಕೇಶನ್ ಗಳನ್ನು ಪರಿಚಯಿಸುತ್ತಾ ತಂತ್ರಜ್ಞಾನಗಳನ್ನು ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಅಳವಡಿಸಿಕೊಂಡು ಬಂದಿದ್ದೇವೆ ಕ್ಷೇತ್ರದಲ್ಲಿ ಮುಂದುವರೆಯುವ ಸಲುವಾಗಿ ಹೊಸದಾಗಿರುವ ಚಿಂತನೆಗೆ ಹೊಸಬರಿಗೆ ಪ್ರೋತ್ಸಾಹ ಹಾಗೂ ಉತ್ತೇಜನ ನೀಡುವ ಸಲುವಾಗಿ ಸರ್ಕಾರ ಹಲವು ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ವಿನೂತನ ಚಿಂತನೆಗಳಿಗೆ ಪ್ರೋತ್ಸಾಹ ನೀಡುವಂತಹ ಹೊಸ ಸ್ಟಾರ್ಟ್ ಅಪ್ ಗಳಿಗೆ ಸಹಾಯಧನ ನೀಡುವ ಯೋಜನೆಯು ಒಂದು.

ಎಲೆಕ್ಟ್ರಾನಿಕ್ಸ್ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಜೊತೆಗೆ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಈಗ ಹೊಸ ಯೋಜನೆ ಜಾರಿಗೆ ತಂದಿದೆ ಈ ಯೋಜನೆಯ ಅಡಿಯಲ್ಲಿ ಸ್ಟಾರ್ಟ್ ಅಪ್ ಗಳನ್ನು ಆರಂಭಿಸುವವರಿಗೆ ಸಹಾಯಧನ ನೀಡಲಾಗುತ್ತದೆ.

advertisement

ಸ್ಟಾರ್ಟ್ ಅಪ್ ಗೆ ಸರ್ಕಾರದ ಉತ್ತೇಜನ!

ಈ ಯೋಜನೆ ಅಡಿಯಲ್ಲಿ ಸ್ಟಾರ್ಟ್ ಅಪ್ ಗಳಿಗಾಗಿ 50 ಲಕ್ಷ ರೂಪಾಯಿಗಳನ್ನು ಈಗಾಗಲೇ ಅನುದಾನ ನೀಡಲಾಗಿದೆ. ವಿಭಿನ್ನ ಅನ್ವೇಷಣೆಯ ಜೊತೆಗೆ ಉದಯೋನ್ಮುಖ ಯುವಕ ಯುವತಿಯರು ಸ್ಟಾರ್ಟ್ ಅಪ್ ಗಳನ್ನು ಆರಂಭಿಸುವುದಕ್ಕೆ ಹಣಕಾಸಿನ ನೆರವು ನೀಡಲಾಗುವುದು. ಸ್ಟಾರ್ಟ್ ಅಪ್ ಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗೆ ಹೆಚ್ಚು ಮಹತ್ವ ಬಂದಿದೆ ಹಾಗಾಗಿ ಅರ್ಜಿ ಸಲ್ಲಿಸುವುದಕ್ಕಾಗಿ ಇನ್ನಷ್ಟು ಕಾಲಾವಕಾಶವನ್ನು ನೀಡುವುದರ ಮೂಲಕ ಯುವಕರನ್ನು ಇನ್ನಷ್ಟು ಉತ್ತೇಜಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಸ್ಟಾರ್ಟ್ ಅಪ್ ಗೆ ಸಿಗುವ ಅನುದಾನ ಹಾಗೂ ಮತ್ತಿತರ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಸರ್ಕಾರದ ಅಧಿಕೃತ ವೆಬ್ಸೈಟ್ ಆಗಿರುವ missionstartupkarnataka.org ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ. ಜನವರಿ 1, 2024 ಕೊನೆಯ ದಿನಾಂಕವಾಗಿರುವುದರಿಂದ ಕೂಡಲೇ ಅರ್ಜಿ ಸಲ್ಲಿಸಿ. ಹೊಸ ತಂತ್ರಜ್ಞಾನದ ಬಗ್ಗೆ ಕಲ್ಪನೆ ಇರುವ ಹೊಸದಾಗಿರುವ ವಿಚಾರಗಳನ್ನು ಜಗತ್ತಿಗೆ ಪರಿಚಯಿಸಲು ಇಷ್ಟಪಡುವ ಯಾವುದೇ ವ್ಯಕ್ತಿ ಅಥವಾ ಗುಂಪು ಸ್ಮಾರ್ಟ್ ಆಪ್ (ಕಂಪನಿ) ಆರಂಭಿಸುವುದಕ್ಕಾಗಿ ಸರ್ಕಾರದಿಂದಲೇ ಸಹಾಯಧನ ಪಡೆದುಕೊಳ್ಳಬಹುದಾಗಿದೆ. ಇದರಿಂದ ಇಂದಿನ ಯುವಕರು ಕೆಲಸ ಗಳಿಸಿಕೊಳ್ಳುವುದಕ್ಕೂ ಸಹಾಯಕವಾಗಲಿದೆ.

advertisement

Leave A Reply

Your email address will not be published.