Karnataka Times
Trending Stories, Viral News, Gossips & Everything in Kannada

CM Siddaramaiah: ರಾಜ್ಯದಲ್ಲಿ ಇಂತಹರಿಗೆ ಮಾತ್ರ ಶೀಘ್ರವೇ ಸಿಗಲಿದೆ 10HP ಉಚಿತ ವಿದ್ಯುತ್; ಸಿಎಂ ಸಿದ್ದರಾಮಯ್ಯ ಘೋಷಣೆ!

advertisement

ಕೆಲ ದಿನಗಳ ಹಿಂದಷ್ಟೇ ಕಾಫಿ ಬೆಳೆಗಾರರು ಭತ್ತ, ಅಡಕೆ ಇತ್ಯಾದಿ ಬೆಳೆಗಾರರಿಗೆ ನೀಡಿದ ಮಾದರಿಯಲ್ಲಿ ಕಾಫಿ ಬೆಳೆಗಾರರಿಗೂ ಉಚಿತ ವಿದ್ಯುತ್ ನೀಡಲು ಮುಖ್ಯಮಂತ್ರಿ ಅವರ ಬಳಿ ತಮ್ಮ ಮನವಿಯನ್ನು ಸಲ್ಲಿಸಿದ್ದರು. ರಾಜ್ಯದ ಕಾಫಿ ಬೆಳೆಗಾರರ ಮಹತ್ವದ ಬೇಡಿಕೆಯಲ್ಲಿ ಒಂದು ಉಚಿತ ವಿದ್ಯುತ್ ನೀಡೋದಾಗಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿಸಿದ್ದು, ಪರಿಶೀಲಿಸಿ, ಶೀಘ್ರವೇ ಆದೇಶ ಮಾಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ತಿಳಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊಡಗಿನ ಕಾಫಿ ಬೆಳೆಗಾರರಿಗೆ 10 ಹೆಚ್.ಪಿ ಉಚಿತ ವಿದ್ಯುತ್ ನೀಡುವ ಬಗ್ಗೆ 2008 ರಿಂದಲೂ ಬೇಡಿಕೆ ಇರುವ ಬಗ್ಗೆ ಮಾತನಾಡಿ, ಬೇಡಿಕೆ ಇದೆ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಬಿಜೆಪಿ ಶಾಸಕರೇ ಇಲ್ಲಿದ್ದರೂ ಬೊಪ್ಪಯ್ಯ, ಅಪ್ಪಚ್ಚು ರಂಜನ್ ಅವರು ಈ ಬಗ್ಗೆ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಸಂಸದರೂ ಅವರೇ ಇದ್ದಾರೆ. ಈ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದರು.

advertisement

ಅಧ್ಯಕ್ಷರು, ಸಿಎಂ,ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ

ಸಚಿವ ಕೆ.ಎನ್ ರಾಜಣ್ಣ ಅವರು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಬಗ್ಗೆ ನಾವು ಗುಲಾಮರೇ ನಮ್ಮನ್ನು ಕೇಳದೇ ವರಿಷ್ಠರು ನಿರ್ಧಾರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಎಲ್ಲರೂ ಒಂದೊಂದು ಹೆಸರನ್ನು ಹೇಳಿದಾದ ಕಷ್ಟವಾಗುತ್ತದೆ. ಸಾಮಾನ್ಯವಾಗಿ ಈ ಬಗ್ಗೆ ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

ಮಗ ಯತೀಂದ್ರ ಈ ಸಲ ಸ್ಪರ್ಧಿಸುವುದಿಲ್ಲ

ಲೋಕಸಭಾ ಚುನಾವಣೆಯಲ್ಲಿ ಕೊಡಗಿನಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

advertisement

Leave A Reply

Your email address will not be published.