Karnataka Times
Trending Stories, Viral News, Gossips & Everything in Kannada

CM Siddaramiah: ರೈತರ ಮುಖದಲ್ಲಿ ಖುಷಿಯೋ ಖುಷಿ, ಹೊಸ ವರ್ಷಕ್ಕೆ ಬಂಪರ್ ಗಿಫ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ.

advertisement

ರಾಜ್ಯ ಹಾಗೂ ಕೇಂದ್ರ ಸರ್ಕಾರ (State and Central Government) ವು ಕೃಷಿಕರನ್ನು ಗಮನದಲ್ಲಿಟ್ಟುಕೊಂಡು ಈಗಾಗಲೇ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಇದೀಗ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ (CM Siddaramiah) ನವರು ರಾಷ್ಟ್ರೀಯ ರೈತ ದಿನ ದಂದು ಹಲವು ಯೋಜನೆಗಳಿಗೆ ಸಂಬಂಧ ಪಟ್ಟಂತೆ ಗುಡ್ ನ್ಯೂಸ್ ನೀಡಿದ್ದಾರೆ. ಹಾಗಾದ್ರೆ ಆ ಕುರಿತಾದ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.

ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ

‘ಬರದ ಸಂಕಷ್ಟದ ನಡುವೆಯೂ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡುವ ಮೂಲಕ ನಮ್ಮ ಸರ್ಕಾರವು ನಾಡಿನ ರೈತರ ಹಿತ ಕಾಪಾಡಿದೆ’ ಎಂದು ತಿಳಿಸಿದ್ದಾರೆ.

ಕೃಷಿ ಪಂಪ್ ಸೆಟ್ ಗಳಲ್ಲಿ ಮೂಲಸೌಕರ್ಯ ಸೌಲಭ್ಯ

‘ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ ನಾಡಿನ ರೈತರ 4 ಲಕ್ಷ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಮೂಲಕ, ಮೂಲಸೌಕರ್ಯಗಳನ್ನು ಒದಗಿಸಲಾಗುವುದು’ ಎಂದು ಸಿಎಂ ತಿಳಿಸಿದ್ದಾರೆ.

advertisement

ಕೃಷಿಕರಿಗಾಗಿ ಹೈ-ಟೆಕ್ ಹಾರ್ವೆಸ್ಟರ್ ಹಬ್ ಆರಂಭ

‘ಮುಂಬರುವ ದಿನಗಳಲ್ಲಿ ಮಳೆ ಕೊರತೆಯಾದರೂ ನಾಡಿನ ರೈತರ ಬೆಳೆಗಳಿಗೆ ನೀರಿನ ಅಭಾವ ಎದುರಾಗಬಾರದು ಎಂಬ ಸದಾಶಯದೊಂದಿಗೆ ರೂ. 100 ಕೋಟಿ ವೆಚ್ಚದಲ್ಲಿ ರಾಜ್ಯದ 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆಯನ್ನು ಮರುಜಾರಿ ಮಾಡುತ್ತಿದ್ದೇವೆ’ ಎಂದು ಸಿಎಂ ತಿಳಿಸಿದ್ದಾರೆ.

ಕೃಷಿ ಭಾಗ್ಯ ಯೋಜನೆ ಜಾರಿಗೆ

‘ಬರ ಸಂಕಷ್ಟ ಹಾಗೂ ಮಳೆ ಕೊರತೆಯು ರಾಜ್ಯದ ರೈತರ ಜೀವನಕ್ಕೆ ಮುಳು ಉಂಟುಮಾಡುತ್ತದೆ. ಹೀಗಾಗಿ ಮಳೆ ಕೊರತೆ ಯಿಂದ ನೀರಿನ ಸಮಸ್ಯೆಯು ಉಂಟಾಗಬಾರದು ಎನ್ನುವ ನಿಟ್ಟಿನಿಂದ 100 ಕೋಟಿ ರೂ ವೆಚ್ಚದಲ್ಲಿ ರಾಜ್ಯದ 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆಯನ್ನು ಮತ್ತೆ ಜಾರಿ ಮಾಡಲಾಗುತ್ತಿದೆ’ ಎಂದು ಹೇಳಿದ್ದಾರೆ.

ರಾಜ್ಯದ ರೈತರಿಗೆ ಬರಪರಿಹಾರ

‘ಭೀಕರ ಬರದಿಂದ ತತ್ತರಿಸಿರುವ ನಾಡಿನ ರೈತರ ನೆರವಿಗೆ ಧಾವಿಸುವ ಉದ್ದೇಶದಿಂದ ಮೊದಲ ಕಂತಿನ ಬರಪರಿಹಾರವಾಗಿ ರೂ. 2,000 ನಮ್ಮ ಸರ್ಕಾರದ ವತಿಯಿಂದ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಅನುದಾನಕ್ಕೆ ಕಾಯದೆ, ರೈತರ ಹಿತಕಾಪಾಡುವ ಏಕೈಕ ಉದ್ದೇಶದಿಂದ ತಕ್ಷಣದ ನೆರವನ್ನು ಘೋಷಿಸಲಾಗಿದೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

advertisement

Leave A Reply

Your email address will not be published.