Karnataka Times
Trending Stories, Viral News, Gossips & Everything in Kannada

Guarantee Scheme: ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಗ್ರಾಹಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ ಸರ್ಕಾರ

advertisement

ವಿಧಾನಸಭಾ ಚುನಾವಣೆ ಸಮಯದಲ್ಲಿ ಪ್ರಣಾಳಿಕೆಯಲ್ಲಿ ಬಿಡುಗಡೆ ಮಾಡಿದ್ದ ಗೃಹಲಕ್ಷ್ಮೀ, ಶಕ್ತಿ, ಅನ್ನಭಾಗ್ಯ  ಯೋಜನೆಗಳನ್ನು ಕಾಂಗ್ರೇಸ್ ಸರ್ಕಾರ ಈಗಾಗಲೇ ಜಾರಿಗೆ ತಂದಿದೆ. ಯುವ ನಿಧಿ ಯೋಜನೆಯೊಂದು ಜಾರಿಗೆ ತರುವುದು ಬಾಕಿ ಉಳಿದಿದೆ. ಈ ನಡುವೆ ಅನ್ನಭಾಗ್ಯ (Annabhagya), ಗೃಹಲಕ್ಷ್ಮಿ (Gruhalakshmi) ಯೋಜನೆ ಗ್ರಾಹಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ.

ಹೌದು! ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯಡಿ ಅರ್ಹ ಕುಟುಂಬದ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್‌ ಖಾತೆಗೆ ಹಣ ಜಮಾ ಮಾಡುವ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅಧ್ಯಕ್ಷತೆಯಲ್ಲಿಗುರುವಾರ ನಡೆದ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆಲ್ಲ ನೆರವು ತಲುಪಿಸುವ ನಿಟ್ಟಿನಲ್ಲಿ ವಿಸ್ತೃತ ಚರ್ಚೆಯಾಗಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ.

advertisement

ಎರಡೂ ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿ ಕುಟುಂಬದಲ್ಲಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್‌ ಖಾತೆಗೆ ಹಣ ಜಮಾ ಮಾಡುವ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಯ ಅನುಪಸ್ಥಿತಿಯಲ್ಲಿ ಕುಟುಂಬ ಅತ್ಯಂತ ಹಿರಿಯ ಗೃಹಿಣಿಗೆ ನೆರವಿನ ಮೊತ್ತವನ್ನು ಜಮಾ ಮಾಡಲು ತೀರ್ಮಾನಿಸಲಾಗಿದೆ.

ಹಾಗೆಯೇ ಅನ್ನಭಾಗ್ಯ ಯೋಜನೆಯಡಿ ಕುಟುಂಬದ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್‌ ಖಾತೆಗೆ 5 ಕೆ.ಜಿ. ಅಕ್ಕಿ ಬದಲಿಗೆ ನೇರ ನಗದು ವರ್ಗಾವಣೆ ಅಂದರೆ ಕುಟುಂಬದ ಸದಸ್ಯರಿಗೆ ಮಾಸಿಕ ತಲಾ 170 ರೂಪಾಯಿ ನೀಡಲು ಸಂಪುಟ ಅನುಮೋದನೆ ನೀಡಿದೆ.
ಅನ್ನಭಾಗ್ಯ ಯೋಜನೆಯಡಿ ಆಯಾ ಕುಟುಂಬದ ಮುಖ್ಯಸ್ಥರ ನಂತರ ಬರುವ ಅಥವಾ ಸ್ಥಾನಿಕವಾಗಿ ಲಭ್ಯವಾಗುವ ಅತ್ಯಂತ ಹಿರಿಯ ವ್ಯಕ್ತಿಗೆ ಆಧಾರ್‌ ಬ್ಯಾಂಕ್‌ ಖಾತೆ, ಪೋಸ್ಟಲ್‌ ಬ್ಯಾಂಕ್‌ ಖಾತೆ ಹಾಗೂ ಇತರೆ ಅರ್ಹತೆ ಆಧರಿಸಿ ಸೂಕ್ತರಾದವರನ್ನು ಗುರುತಿಸಿ ಹಣ ಜಮಾ ಮಾಡಲು ಒಪ್ಪಿಗೆ ನೀಡಲಾಗಿದೆ. ಹಾಗಾಗಿ ಇನ್ನು ಮುಂದೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಎರಡು ಯೋಜನೆಯ ಹಣ ಮಿಸ್ ಆಗದೇ ಪ್ರತಿ ಫಲಾನುಭವಿ ಕುಟುಂಬಕ್ಕೆ ಸಿಗಲಿದೆ.

advertisement

Leave A Reply

Your email address will not be published.