Karnataka Times
Trending Stories, Viral News, Gossips & Everything in Kannada

RBI: 100 ರೂಪಾಯಿ ಮುಖಬೆಲೆಯ ಹಳೆಯ ನೋಟುಗಳನ್ನು ಬಂದ್ ಆಗಲಿದೆಯೇ? ಸ್ಪಷ್ಟನೆ ನೀಡಿದ ಆರ್‌ಬಿಐ.

advertisement

ಪ್ರಸ್ತುತ ಚಲಾವಣೆಯಲ್ಲಿರುವ Rs100 ಮುಖಬೆಲೆಯ ಹಳೆಯ ನೋಟುಗಳನ್ನು ಮಾರ್ಚ್‌ ಅಂತ್ಯದ ಹೊತ್ತಿಗೆ ಸಂಪೂರ್ಣವಾಗಿ ಹಿಂಪಡೆಯಲಾಗುವುದು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (Reserve Bank of India) ಹೇಳಿದೆ. ಇದು ಡಿಮಾನಿಟೈಸೇಷನ್‌ ಅಲ್ಲ. ಹಾಗಾಗಿ ಭೀತಿ ಬೇಡ. ಜೊತೆಗೆ, ಮಾರ್ಚ್‌ ನಂತರದಲ್ಲಿ ಹೊಸದಾದ ₹100 ಮುಖಬೆಲೆಯ ನೋಟುಗಳು ಚಲಾವಣೆಗೆ ಬರಲಿವೆ. ಹಳೆಯ Rs 100 ಮುಖಬೆಲೆಯ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಬೇಕು ಎಂದು RBI ಹೇಳಿದೆ ಎಂಬಂಥ ಪೋಸ್ಟ್‌ಗಳು ವಾಟ್ಸ್‌ಆ್ಯಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅಷ್ಟಕ್ಕೂ ವೈರಲ್ ಆಗಿತ್ತಿರೋದೇನು?

 

 

ಈ ಹಿಂದೆ 2016 ರಲ್ಲಿ ₹500 ಹಾಗೂ ₹1,000 ಮುಖಬೆಲೆಯ ನೋಟುಗಳನ್ನು ಆರ್‌ಬಿಐ ಹಿಂಪಡೆದಿತ್ತು. ಆದ್ದರಿಂದ, ₹100, ₹10 ಹಾಗೂ ₹5 ಮುಖಬೆಲೆಯ ನೋಟುಗಳನ್ನು ಮತ್ತೊಮ್ಮೆ RBI ಹಿಂಪಡೆಯಲಿದೆ. ಇದು ಎರಡನೇ ನೋಟು ರದ್ದತಿಯಾಗಲಿದೆ ಎಂಬಂಥ ಪೋಸ್ಟ್‌ಗಳು 2019ರಲ್ಲಿ ಹಾಗೂ 2021ರಲ್ಲಿಯೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈಗ ಮತ್ತೊಮ್ಮೆ ₹100 ಮುಖಬೆಲೆಯ ಹಳೆಯ ನೋಟುಗಳನ್ನು ಹಿಂಪಡೆಯಲಾಗುತ್ತದೆ ಮಾರ್ಚ್ 31 ಲಾಸ್ಟ್ ದಿನ ಎಂಬಂತೆ ಪೋಸ್ಟ್‌ಗಳು ಹರಿದಾಡುತ್ತಿವೆ.

advertisement

ನಿಜಕ್ಕೂ RBI ಹೇಳಿದೆಯೇ ?

 

 

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಪೋಸ್ಟ್‌ಗಳ ಕುರಿತು ಆರ್‌ಬಿಐ 2021ರಲ್ಲಿ ಸ್ಪಷ್ಟನೆ ನೀಡಿತ್ತು. ಪ್ರಸ್ತುತ ಚಲಾವಣೆಯಲ್ಲಿರುವ ₹100, ₹10 ಹಾಗೂ ₹5 ಮುಖಬೆಲೆಯ ಹಳೆಯ ನೋಟುಗಳನ್ನು ಹಿಂಪಡೆಯಲಾಗುವುದು ಎಂಬಂಥ ವರದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಆದರೆ, ಇಂಥ ವರದಿಗಳು ತಪ್ಪು ಮಾಹಿತಿಯಿಂದ ಕೂಡಿವೆ. ನಾವು ಇಂಥ ಯಾವುದೇ ಪ್ರಕಟಣೆ ಹೊರಡಿಸಿಲ್ಲ ಎಂದು ಆರ್‌ಬಿಐ ಸ್ಪಷ್ಟನೆ ನೀಡಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಈಗ ಹರಿದಾಡುತ್ತಿರುವ ಸುದ್ದಿಗೆ ಸಂಬಂಧಿಸಿದಂತೆ RBI ಯಾವುದೇ ಪ್ರಕಟಣೆಯನ್ನು ಹೊರಡಿಸಿಲ್ಲ. ಆದ್ದರಿಂದ, ಈಗ ಮತ್ತೊಮ್ಮೆ ಹರಿದಾಡುತ್ತಿರುವ ₹100 ಮುಖಬೆಲೆಯ ಹಳೆಯ ನೋಟುಗಳ ಹಿಂಪಡೆದುಕೊಳ್ಳುವ ಸುದ್ದಿಯು ಸಹ ಸುಳ್ಳು ಸುದ್ದಿಯಾಗಿದೆ. ಈ ತರಹದ ಯಾವುದೇ ಆದೇಶ ಆರ್ ಬಿ ಐ ಹೊರಡಿಸಿಲ್ಲ.

advertisement

Leave A Reply

Your email address will not be published.