Karnataka Times
Trending Stories, Viral News, Gossips & Everything in Kannada

CM Siddaramaiah: ಸರಕಾರದ ಉಚಿತ ಭಾಗ್ಯ ಪಡೆಯುತ್ತಿದ್ದ ಎಲ್ಲಾ ಮಹಿಳೆಯರು ಹಾಗೂ ಕುಟುಂಬಗಳಿಗೆ ಸಿದ್ದರಾಮಯ್ಯ ಹೊಸ ಸಿಹಿಸುದ್ದಿ!

advertisement

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಇಂದು ಬಹಳಷ್ಟು ಸುದ್ದಿ ಮಾಡುತ್ತಿದ್ದು ಇನ್ನೇನು ಲೋಕಸಭೆ ಚುನಾವಣೆ ಕೂಡ ನಡೆಯಲಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಸರಕಾರ ಬಂದರೆ ಹಲವು ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಈಗಾಗಲೇ ಕಾಂಗ್ರೆಸ್ ಪ್ರಣಾಳಿಕೆ ಯನ್ನು ಇಟ್ಟಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಗ್ಯಾರಂಟಿ ಯೋಜನೆಗಳ (Guarantee Schemes) ಬಗ್ಗೆ ಮಾತನಾಡಿದ್ದು, ಕಾಂಗ್ರೆಸ್ ಸರಕಾರವು ನುಡಿದಂತೆ ನಡೆಯುವ ಸರಕಾರ, ಇನ್ನೂ ಅಭಿವೃದ್ಧಿ ಯುತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಹೇಳಿದರು.

ಅವರು ಮೈಸೂರು ನಗರದಲ್ಲಿ ಆಯೋಜನೆ ಮಾಡಿದ್ದ, ಚಾಮರಾಜ, ಕೃಷ್ಣರಾಜ, ನರಸಿಂಹರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ನಾವು ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ ಹಣ ಕೇಳುತ್ತಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಹೇಳುತ್ತಾರೆ. ಈ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರಿಗೆ ನಾವು ಆಹ್ವಾನ ನೀಡಿದ್ದೇವೆ, ಗ್ಯಾರಂಟಿ ಯೋಜನೆಗಳ ಬಗ್ಗೆ ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿಎಂ ಹೇಳಿದರು‌.

ಕೇಂದ್ರದಿಂದ ಹಣ ಬೇಕಾಗಿಲ್ಲ:

advertisement

ಮುಂದಿನ ವರ್ಷದ ಗ್ಯಾರಂಟಿ ಯೋಜನೆಗಳಿಗೆ (Guarantee Scheme) ಸುಮಾರು 52,009 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಟ್ಟಿದ್ದೇವೆ, ಕೇಂದ್ರದಿಂದ ಹಣ ಬೇಕಾಗಿಲ್ಲ ಎನ್ನುವ ಸ್ಪಷ್ಟನೆಯನ್ನು ನೀಡಿದರು‌. ಈಗಾಗಲೇ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡುತ್ತೇವೆ ಎಂದಿದ್ದರು, ಇದುವರೆಗೂ ಕೇಂದ್ರದಿಂದ ಹಣ ಬಂದಿಲ್ಲ ಎಂದರು.

ಬರ ಪರಿಹಾರವೂ ಇಲ್ಲ:

 

 

ಈಗಾಗಲೇ ರೈತರು ಸಂಕಷ್ಟದಲ್ಲಿ ಇದ್ದಾರೆ. ಕೃಷಿಯಲ್ಲಿ ಫಸಲು ಕಾಣದೇ ನಷ್ಟದಲ್ಲಿದ್ದರೂ ರೈತರ ಸಮಸ್ಯೆ ಇವರಿಗೆ ತಿಳಿಯುತ್ತಿಲ್ಲ. ಬರ ಪರಿಹಾರ (Drought Relief) ಕೊಡಲು ಮನವಿ ಮಾಡಿ 5 ತಿಂಗಳಾಗಿದರೂ ಒಂದು ರೂಪಾಯಿ ಹಣ ಬಂದಿಲ್ಲ. ರಾಜ್ಯ ಸರಕಾರದಿಂದ ಮಾತ್ರ ಎರಡು ಸಾವಿರ ರೂಪಾಯಿ ನೀಡಿದ್ದೇವೆ. ಬರ ಸಮೀಕ್ಷೆ ವರದಿ ನೀಡಿ ಒಂದು ತಿಂಗಳೊಳಗೆ ಪರಿಹಾರ ಕೊಡಬೇಕೆಂದು ಕಾನೂನಿನಲ್ಲಿದ್ದರೂ ಆದರೂ ಪರಿಹಾರ ನೀಡಿಲ್ಲ ಎಂದರು.

advertisement

Leave A Reply

Your email address will not be published.