Karnataka Times
Trending Stories, Viral News, Gossips & Everything in Kannada

CM Siddaramaiah: ಗ್ಯಾರಂಟಿ ಯೋಜನೆಗಳು ನಿಲ್ಲುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ!

advertisement

ಕೆಲ ದಿನಗಳಿಂದ ರಾಜ್ಯ ಸರ್ಕಾರದ ಕೈಯಲ್ಲಿ ಹಣವಿಲ್ಲ. ಹಾಗಾಗಿ ಇನ್ನು ಮುಂದೆ ಒಂದೊಂದೇ ಗ್ಯಾರಂಟಿ ಯೋಜನೆಗಳು ಮುಕ್ತಾಯವಾಗುತ್ತದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಇದೀಗ ಆ ಕುರಿತಾಗಿ ಆಶ್ವಾಸನೆ ನೀಡಿರುವ ಮುಖ್ಯ ಮಂತ್ರಿಗಳು. ಗ್ಯಾರಂಟಿ ಯೋಜನೆಗಳು (Guarantee Schemes) ಅಂತ್ಯವಾಗುವುದಿಲ್ಲ. ಬೇಸರ ಪಡಬೇಡಿ . ಗಾಳಿ ಸುದ್ದಿ ಗೆ ಕಿವಿಗೊಡಬೇಡಿ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದೇನು?

ಇನ್ನೇನು ಕೆಲವೇ ದಿನಗಳಲ್ಲಿ ಬೃಹತ್‌ ಗಾತ್ರದ ಬಜೆಟ್‌ ಮಂಡನೆಯಾಗುತ್ತಿದೆ. ಹಾಗಿದ್ದ ಮೇಲೆ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ ಎಂದರ್ಥ ಎಂದು ವಿಶ್ಲೇಷಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರ ದಿವಾಳಿಯಾಗಲಿದೆ ಎನ್ನುವವರಿಗೆ ನಮ್ಮ ಬಜೆಟ್‌ ಉತ್ತರ ನೀಡಲಿದೆ. 2024-25 ಸಾಲಿನಲ್ಲಿ 3.80 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಪಟ್ಟಿಯನ್ನು ಮಂಡಿಸಲಾಗುವುದು ಎಂದು ತುಮಕೂರಿನಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಘೋಷಿಸರುವ ಗ್ಯಾರೆಂಟಿ ಯೋಜನೆಗಳಿಂದ ದಿವಾಳಿಯಾಗಿಲ್ಲ. ಯಾವ ಕಾರಣಕ್ಕೂ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು. ಗ್ಯಾರೆಂಟಿ ಯೋಜನೆಗಳಿಂದಾಗಿ ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

advertisement

ಇನ್ನೂ ಕೆಲವರಿಗೆ ತಲುಪದ ಗ್ಯಾರಂಟಿ ಭಾಗ್ಯ

ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು, ಕೆಲವರಿಗೆ ಮಾತ್ರ ಗ್ಯಾರಂಟಿ ಅನುಕೂಲ ತಲುಪಿಲ್ಲ. ಈ ಕೆಲವರೇ ಹೆಚ್ಚು ಹೇಳಿಕೊಂಡು ತಿರುಗುತ್ತಿದ್ದಾರೆ. ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ  ಎಂದು ಸಿಎಂ ಸಿದ್ದರಾಮಯ್ಯ  ತಾಕೀತು ಮಾಡಿದ್ದಾರೆ.

advertisement

Leave A Reply

Your email address will not be published.