BPL Card: ರಾಜ್ಯದ ಜನರಿಗೆ ಮತ್ತೊಂದು ಗ್ಯಾರೆಂಟಿ ..! BPL ಕಾರ್ಡ್ ಇದ್ದವರಿಗೆ ಸಿಹಿಸುದ್ದಿ

Advertisement
ಮನೆ ಇಲ್ಲದ ಬಡವರಿಗೆ ಸರಕಾರ ವಸತಿ ನೀಡುವ ಅನೇಕ ಯೋಜನೆಗಳು ನಮ್ಮ ಮುಂದಿದೆ.ಇದೀಗ ಅಂತದ್ದೇ ಒಂದು ಯೋಜನೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ತೋರಿಸಿದೆ.ಹೌದು, ಕರ್ನಾಟಕ ಗೃಹ ಮಂಡಳಿ ವತಿಯಿಂದ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿರುವ ಟೌನ್ ಶಿಪ್ ಹಾಗೂ ವಿಲ್ಲಾ ಯೋಜನೆಗೆ ಅಗತ್ಯ ಜಮೀನು ಗುರುತಿಸುವ ಕಾರ್ಯ ತಕ್ಷಣವೇ ಆರಂಭಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.ಗೃಹಮಂಡಳಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಅವರು ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಬಹುದಾಗಿದೆ.,
ಬೆಂಗಳೂರಿನ ಐದು ಕಡೆ ತಲಾ ಎರಡು ಸಾವಿರ ಎಕರೆ ಯಲ್ಲಿ ಟೌನ್ ಶಿಪ್ ಹಾಗೂ ತಲಾ 500 ಎಕರೆಯಲ್ಲಿ ನಾಲ್ಕು ಕಡೆ ವಿಲ್ಲಾ ಯೋಜನೆಗೆ ಜಮೀನು ಗುರುತಿಸಿ ಪ್ರಕ್ರಿಯೆ ಆರಂಭಿಲಾಗುತ್ತಿದೆ ಎನ್ನಲಾಗಿದೆ.ಅದಕ್ಕಾಗಿ ಅಧಿಕಾರಿಗಳ ವಿಶೇಷ ತಂಡ ರಚಿಸಲು ನಿರ್ದೇಶನವನ್ನು ಕೂಡ ನೀಡಲಾಗಿದೆ.ಬೆಂಗಳೂರಿನ ನಾಲ್ಕು ಕಡೆ ಮೆಟ್ರೋ ಸೇರಿ ಸಾರಿಗೆ ಹಾಗೂ ಇತರೆ ಮೂಲ ಸೌಕರ್ಯ ವ್ಯವಸ್ಥೆ ಇರುವ ಕಡೆ ಜಮೀನು ಗುರುತಿಸಿ 50:50 ಆಧಾರದಲ್ಲಿ ಜಮೀನು ಮಾಲೀಕರ ಜತೆ ಒಪ್ಪಂದ ಮಾಡಿಕೊಂಡು ಬಡಾವಣೆ ನಿರ್ಮಾಣ ಕಾರ್ಯಕ್ಕೆ ವೇಗ ನೀಡಬೇಕು ಎಂದು ಸೂಚಿಸಿದರು.
ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಹೊರತುಪಡಿಸಿ ಇತರೆ ಕಡೆ ಬಿಪಿಲ್ ಕುಟುಂಬಗಳಿಗೆ ರಿಯಾಯಿತಿ ದರದಲ್ಲಿ ನಿವೇಶನ ಅಥವಾ ಮನೆ ನಿರ್ಮಿಸಿಕೊಡುವ ಯೋಜನೆ ರೂಪಿಸಬೇಕು ಎಂಬ ಚಿಂತನೆ ಇದೆ. ಈ ಬಗ್ಗೆ ಸಾಧಕ ಬಾಧಕ ಅಧ್ಯಯನ ಮಾಡಿ ವರದಿ ಕೊಡಿ ಎಂದು ಎಂದು ಕೂಡ ಜಮೀರ್ ಅಹಮದ್ ಕೇಳಿದ್ದಾರೆ.ಜಮೀನು ಸ್ವಾಧೀನ ಸೇರಿದಂತೆ ನ್ಯಾಯಲಯದಲ್ಲಿರುವ 122 ವ್ಯಾಜ್ಯ ಇತ್ಯರ್ಥ ಕ್ಕಾಗಿ ಅದಾಲತ್ ಮಾದರಿಯಲ್ಲಿ ಅರ್ಜಿದಾರರ ಜತೆ ಸಂಧಾನ ಸಭೆ ಏರ್ಪಡಿಸಲು ಸಚಿವರು ಇದೇ ವೇಳೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಅನುಷ್ಠಾನ ದಲ್ಲಿರುವ ಗೃಹ ಮಂಡಳಿ ಯೋಜನೆ ಗಳು, ಅದರ ಸ್ಥಿತಿಗತಿ, ಲಭ್ಯ ಇರುವ ಜಮೀನು, ನ್ಯಾಯಾಲಯ ದಲ್ಲಿರುವ ಪ್ರಕರಣ ಕುರಿತು ಸಮಗ್ರ ವರದಿಯನ್ನು ಕೂಡ ಈ ಸಂದರ್ಭದಲ್ಲಿ ಕೇಳಿ ಪಡೆದಿದ್ದಾರೆ.ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳ ಸ್ಥಿತಿಗತಿ ಕುರಿತು ಕೂಡ ಮಾಹಿತಿ ಪಡೆದಿದ್ದು, ಒಟ್ಟಾರೆ ಸರ್ಕಾರ ಮುಂದಿನ ದಿನಗಳಲ್ಲಿ ಅನೇಕರ ಮನೆ ಕನಸನ್ನು ನನಸು ಮಾಡಲು ಮುಂದಾಗಿದ್ದು, ಅನೇಕರಿಗೆ ಈ ನಿರ್ಧಾರದಿಂದ ಉಪಯೋಗ ವಾಗಲಿದೆ .