Karnataka Times
Trending Stories, Viral News, Gossips & Everything in Kannada

Sowjanya: ಸೌಜನ್ಯ ಕುಟುಂಬದ ಬಗ್ಗೆ ಕೋರ್ಟ್ ಹೊಸ ತೀರ್ಪು!

Advertisement

ಅಕ್ಟೋಬರ್ 9, 2012ರಂದು ಧರ್ಮಸ್ಥಳದಲ್ಲಿ ಅತ್ಯಾಚಾರ ಪ್ರಕರಣ ದೊಡ್ಡ ಸಂಚಲನವನ್ನೇ ಸೃಷ್ಟಿಸಿತ್ತು. ಇಲ್ಲಿನ ಸ್ಥಳೀಯ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ 17 ವರ್ಷದ ದ್ವಿತೀಯ ಪುತ್ರಿ ಸೌಜನ್ಯರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಸೌಜನ್ಯ (Sowjanya) ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು.

ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಆ ಬಳಿಕ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. 2016ರಲ್ಲಿ ತನಿಖೆ ಪೂರ್ಣಗೊಳಿಸಿದ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್‌ ರಾವ್‌ನನ್ನು ಕೋರ್ಟ್‌ ದೋಷಮುಕ್ತಗೊಳಿಸಿತ್ತು. ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್.ಸಿ.ಬಿ. ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ಪ್ರಕಟಿಸಿದ್ದರು.

ಇನ್ನು ಧರ್ಮಸ್ಥಳದ ಸೌಜನ್ಯ (Sowjanya) ಕೊಲೆ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ (Veerendra Heggade) ಹೆಸರು ಕೆಡಿಸುವ ಹುನ್ನಾರ ನಡೆದಿದೆ ಎಂದು ಕೂಡಾ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಸೌಜನ್ಯ (Sowjanya) ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೋರಾಟದ ನೆಪದಲ್ಲಿ ಧರ್ಮಸ್ರಳ ಕ್ಷೇತ್ರ ಮತ್ತು ಡಾ. ವೀರೇಂದ್ರ ಹೆಗಡೆ (Veerendra Heggade) ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಬಾರದು ಎಂದು ಹೈಕೋರ್ಟ್ ಆದೇಶ ನೀಡಿದೆ.

ಸ್ಕೂಲ್ ಆದೇಶ ಉಲ್ಲಂಘಿಸಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿರುವ ನ್ಯಾಯ ಪೀಠ ಡಿಜಿ ಮತ್ತು ಐಜಿ ಸರ್ಕಾರದ ಮುಖ್ಯ ಕಾರ್ಯದರ್ಶಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಪೊಲೀಸ್ ಉನ್ನತ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಆದೇಶ ಹೊರಡಿಸಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಿ ಗ್ರಾಮ ಅಭಿವೃದ್ಧಿ ಯೋಜನೆ ಮತ್ತು ಹೆಗ್ಗಡ ಕುಟುಂಬದ ಪರವಾಗಿ ಹಿರಿಯ ನ್ಯಾಯವಾದಿಗಳಾದ ಉದಯ ಹೊಳ್ಳ ಹಾಗೂ ರಾಜಶೇಖರ್ ಇಲ್ಲಿ ವಾದಿಸಿದರು.

Leave A Reply

Your email address will not be published.