Karnataka Times
Trending Stories, Viral News, Gossips & Everything in Kannada

CM Siddaramaiah: ಬಡಜನರಿಗೆ ಹೆಚ್ಚಿನ ಉಚಿತ ಸೇವೆ ಸಿಗಲು ಮಹತ್ವದ ನಿರ್ಧಾರ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

advertisement

ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು (Indira Canteens) ಸ್ಥಾಪಿಸಲಾಗುವುದು ಎಂದು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪಟ್ಟಣಗಳಲ್ಲಿ ಎರಡನೇ ಹಂತದ 188 ಇಂದಿರಾ ಕ್ಯಾಂಟೀನ್ ಮತ್ತು ಅಡುಗೆ ಕೋಣೆಗಳನ್ನು ನಿರ್ಮಿಸಲು ಕರ್ನಾಟಕದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

WhatsApp Join Now
Telegram Join Now

ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 87 ಲಕ್ಷಕ್ಕೆ ಅಡುಗೆ ಕೋಣೆ ಸಹಿತ ಇಂದಿರಾ ಕ್ಯಾಂಟೀನ್ (Indira Canteens) ಮತ್ತು 48 ಲಕ್ಷ ರೂ.ಗಳಿಗೆ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗುತ್ತದೆ. ಒಟ್ಟು 165 ಅಡುಗೆ ಕೋಣೆ ಸಹಿತ ಇಂದಿರಾ ಕ್ಯಾಂಟೀನ್ ಮತ್ತು 23 ಇಂದಿರಾ ಕ್ಯಾಂಟೀನ್ ಸೇರಿ ಒಟ್ಟು 188 ಇಂದಿರಾ ಕ್ಯಾಂಟೀನ್ ಗಳನ್ನು ನಿರ್ಮಿಸಲಾಗುತ್ತದೆ. ಮೊದಲನೇ ಹಂತದಲ್ಲಿ ನಿರ್ಮಿಸಲಾದ ಫ್ರೀ ಕಾಸ್ಟ್ ಮಾದರಿಯಲ್ಲಿಯೇ ನಿರ್ಮಿಸಲು ನಿರ್ಧರಿಸಲಾಗಿದೆ.

 

advertisement

 

ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ಉತ್ತರಿಸಿದ ಸಿದ್ದರಾಮಯ್ಯ ಅವರು ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ (Canteen) ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್‌ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀ‌ನ್‌ಗಳನ್ನು (Mobile Canteens) ಸ್ಥಾಪಿಸಲಾಗುವುದು ಎಂದಿದ್ದಾರೆ.

advertisement

Leave A Reply

Your email address will not be published.