Karnataka Times
Trending Stories, Viral News, Gossips & Everything in Kannada

CM Siddaramaiah: ಗ್ಯಾರಂಟಿ ಯೋಜನೆಗಳ ಬಗ್ಗೆ ಸಿಎಂ ಧಿಡೀರ್ ಹೊಸ ಸ್ಪಷ್ಟನೆ

advertisement

ಚುನಾವಣೆ ಗೂ ಮೊದಲು ಐದು ಪ್ರಣಾಳಿಕೆಯನ್ನು ನೀಡುವ ಮೂಲಕ‌ ಕಾಂಗ್ರೇಸ್ ಸರಕಾರ ಹೆಚ್ಚು ಮತ ಪಡೆದು ವಿಧಾನಸಭಾ ಚುನಾವಣೆಯಲ್ಲಿ ಜಯ ಗಳಿಸಿತ್ತು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಸರಕಾರ ಹಂತ ಹಂತವಾಗಿ ಐದು ಗ್ಯಾರಂಟಿಗಳ ಮೂಲಕ ಶಕ್ತಿ ಯೋಜನೆ, ಗೃಹ ಲಕ್ಷ್ಮೀ (Gruha Lakshmi), ಗೃಹ ಜ್ಯೋತಿ (Gruha Jyothi), ಅನ್ನಭಾಗ್ಯ (Anna Bhagya) ಹಾಗೂ ಯುವ ನಿಧಿ ಯೋಜನೆ (Yuva Nidhi Yojana) ಯನ್ನ ಜಾರಿಮಾಡಿದೆ. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು (Guarantee Schemes) ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿದೆ.ಆದ್ರೂ ಈ ಯೋಜನೆಗಳ ಚರ್ಚೆ ಮಾತ್ರ ಇಂದು‌ಕೂಡ ನಿಂತಿಲ್ಲ

ವಿಪಕ್ಷಗಳ ಟೀಕೆ:

 

 

ರಾಜ್ಯ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು (Guarantee Schemes) ಜಾರಿಗೆ ತಂದಾಗ ಕೇಂದ್ರ ಸರ್ಕಾರ, ವಿಪಕ್ಷಗಳು ಟೀಕೆ ಮಾಡಿದ್ದವು. ಆದರೆ ನಾವು ಕೇಂದ್ರ ಸರ್ಕಾರ ಮಾಡದ ಕಾರ್ಯವನ್ನು ಮಾಡುತ್ತಿದ್ದೇವೆ. ನಾವು ನುಡಿದಂತೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದ್ದೇವೆ. ಜನರು ಕೂಡ ಈ ಬಗ್ಗೆ ಖುಷಿ ವ್ಯಕ್ತ ಪಡಿಸಿದ್ದಾರೆ ಎಂದು ಸಿಎಂ (CM Siddaramaiah) ತಿಳಿಸಿದ್ದಾರೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು,ಈ ಸೌಲಭ್ಯ ದಿಂದ ಬಡ ಜನತೆಗೆ ಸಾಕಷ್ಟು ಸಹಾಯಕವಾಗಿದೆ. ಅವುಗಳನ್ನು ಯಾವುದೇ ಕಾರಣಕ್ಕೂ ನಾವು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ ‌ಕೂಡ‌ನೀಡಿದ್ದಾರೆ.

advertisement

ಜನರಿಗೆ ಆರ್ಥಿಕ ಶಕ್ತಿ ನೀಡುತ್ತಿದೆ:

ಸಮಾಜದಲ್ಲಿ ಬಡತನ, ಹಸಿವು, ಅಸಮಾನತೆ ಇರುವವರೆಗೂ ಗ್ಯಾರಂಟಿ ಯೋಜನೆಗಳೂ ಇರುತ್ತವೆ. ಜನರನ್ನು ಆರ್ಥಿಕವಾಗಿ ಬೆಂಬಲಿಸುತ್ತೇವೆ, ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಶಕ್ತಿ ನೀಡುತ್ತಿವೆ. ಐದು ವರ್ಷಗಳ ನಂತರ ಕೂಡ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ, ಈಗಾಗಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ, ಜೆಡಿಎಸ್ ಮೈತ್ರಿಕೂಟದವರಿಗೆ ಸಹಿಸಲು ಆಗುತ್ತಿಲ್ಲ. ಇದಕ್ಕಾಗಿ ಈ ಯೋಜನೆಗಳ ಬಗ್ಗೆ ಸುಳ್ಳು,ಅಪ ಪ್ರಚಾರ ಮಾಡುತ್ತಾ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದಿದ್ದಾರೆ.

ಗ್ಯಾರಂಟಿ ಸಮಾವೇಶ:

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಚಿಕ್ಕಮಂಗಳೂರಿನಲ್ಲಿ ನಡೆದ‌ ಗ್ಯಾರಂಟಿ ಸಮಾವೇಶದಲ್ಲಿ ಈ ಯೋಜನೆಗಳ ಬಗ್ಗೆ ಸ್ಪಷ್ಟನೆ ಯನ್ನು ನೀಡಿದ್ದಾರೆ. ಇದು ನಿರಂತರವಾಗಿ ನಡೆಯುವ ಯೋಜನೆಗಳಾಗಿದ್ದು ಜನರನ್ನು ಆರ್ಥಿಕವಾಗಿ ಮತ್ತಷ್ಟು ಬೆಂಬಲ ನೀಡುತ್ತೆವೆ ಎಂದು ಈ ಬಗ್ಗೆ ಮಾತನಾಡಿದ್ದಾರೆ.

advertisement

Leave A Reply

Your email address will not be published.