ದ್ವಿತೀಯ ಪಿಯುಸಿ (2nd PUC) ವಿದ್ಯಾರ್ಥಿಗಳಿಗೆ ಮಾ. 9ರಿಂದ ಮಾ.29ರ ವರೆಗೆ ನಡೆಯಲಿರುವ ವಾರ್ಷಿಕ ಪರೀಕ್ಷೆಗೆ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆಯನ್ನು ಅಳವಡಿಸಿಕೊಂಡಿದೆ. ಇನ್ನೂ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಲವು ನಿಯಮ (Rules) ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ.
2022-23ನೇ ಪ್ರಥಮ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಆಯಾ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಸಿದ್ಧಪಡಿಸಿ ಪರೀಕ್ಷೆಯನ್ನು ನಡೆಸಲು ತಿಳಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಲು ಆದೇಶ ನೀಡಲಾಗಿದೆ.
ಯಾವೆಲ್ಲ ನಿಯಮ:
ಮಾರ್ಚ್ 9 ರಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಪರೀಕ್ಷೆಗೆ ಹಿಜಾಬ್ ಸೇರಿದಂತೆ ಯಾವುದೇ ಧರ್ಮದ ಇತರ ಉಡುಪು ಧರಿಸಿ ಬಂದರೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ (Electronics) ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ,ವಿದ್ಯಾರ್ಥಿಗಳು ಮುಂಜಾಗ್ರತಾ ಕ್ರಮ ಪಾಲಿಸಬೇಕು ಎಂದು ತಿಳಿಸಲಾಗಿದೆ. ನಕಲು ಅಥವಾ ಪರೀಕ್ಷೆ ಅಕ್ರಮ ಪೂರ್ಣ ಪ್ರಮಾಣದಲ್ಲಿ ತಡೆಯುವ ನಿಟ್ಟಿನಲ್ಲಿ ಎಲ್ಲ ಪರೀಕ್ಷೆ ಕೇಂದ್ರದಲ್ಲೂ ಸಿಸಿಟಿವಿ (CCTV)ಅಳವಡಿಸಲಾಗಿದೆ ಎನ್ನಲಾಗಿದೆ. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನದೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ
ಜಿಲ್ಲೆಯಲ್ಲಿ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮತ್ತು ಸಾಮೂಹಿಕ ನಕಲು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ
ವಿದ್ಯಾರ್ಥಿಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.ದೂರದಿಂದ ಸಂಚರಿಸುವ ವಿಧ್ಯಾರ್ಥಿಗಳಿಗೆ ಸಹಾಯ ವಾಗಲಿದೆ.
ಈ ಬಾರಿಯ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಯಲ್ಲಿ ಎಲ್ಲ ವಿಷಯಗಳಲ್ಲೂ 1 ಅಂಕದ 20 ಪ್ರಶ್ನೆಗಳನ್ನು ಕೇಳಿದೆ. ಪ್ರತಿ ವರ್ಷ 5 ಅಥವಾ 6 ಮಾತ್ರ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು.ಈ ಬಾರಿ ಈ 20 ಪ್ರಶ್ನೆಗಳಲ್ಲಿ 12 ಬಹುಆಯ್ಕೆ ಪ್ರಶ್ನೆಗಳು (MCQ), ಕೆಲವು ಬಿಟ್ಟಸ್ಥಳ ತುಂಬಿರಿ ಮತ್ತು ಹೊಂದಿಸಿ ಬರೆಯಿರಿ ಇತ್ಯಾದಿ ಪ್ರಶ್ನೆಗಳನ್ನು ಕೇಳಲಾಗಿದೆ.ಒಟ್ಟಿನಲ್ಲಿ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ನಿಯಮ ಪಾಲಿಸಲು ಶಿಕ್ಷಣ ಇಲಾಖೆ ಆದೇಶ ನೀಡಿದೆ