PUC Exam 2023: ದ್ವಿತೀಯ ಪಿಯುಸಿ, ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಕುರಿತಂತೆ ಮಹತ್ವದ ಸೂಚನೆ

Advertisement
ಕಳೆದ ಎರಡು ವರ್ಷಗಳ ಕೋವಿಡ್ ಅನಾಹುತದಿಂದಾಗಿ ರಾಜ್ಯದ ಶಿಕ್ಷಣ ಇಲಾಖೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಿ ಪಾಸ್ ಮಾಡಲಾಗಿತ್ತು. ಅದೇ ರೀತಿ ಈ ವರ್ಷವೂ ಕೂಡ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗ್ರೇಸ್ ನೀಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗಾಗಲೇ ತಿಳಿಸಿದೆ. ಪರೀಕ್ಷೆ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದ್ದು ಫಲಿತಾಂಶವನ್ನು ಸುಧಾರಿಸುವ ನಿಟ್ಟಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ ಎಂದು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
Advertisement
ಈ ಬದಲಾವಣೆಗಳಲ್ಲಿ ಪ್ರಮುಖವಾಗಿರುವ ವಿಷಯ ಏನೆಂದರೆ ಒಂದು ಭಾಷೆಯಲ್ಲಿ ಅಥವಾ ಇನ್ನೊಂದು ಪ್ರಮುಖ ವಿಷಯದಲ್ಲಿ ವಿದ್ಯಾರ್ಥಿಗಳು ಯಾವುದೇ ಎರಡು ವಿಷಯಗಳಲ್ಲಿ ಅಗತ್ಯವಿರುವ ಗ್ರೇಸ್ ಮಾರ್ಕ್ ಅನ್ನು ಪಡೆಯುತ್ತಾರೆ. ಕೆ ಎಸ್ ಇ ಎ ಬಿಯ ನಿರ್ದೇಶಕ ಗೋಪಾಲಕೃಷ್ಣ ಅವರು, 600 ಅಂಕಗಳಿಗೆ 210 ಅಂಕಗಳನ್ನು ಪಡೆಯುವ ವಿದ್ಯಾರ್ಥಿಗೆ ಗ್ರೇಸ್ ಅಂಕಗಳನ್ನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯದ್ಯಂತ ಮಾರ್ಚ್ 9 ರಿಂದ ಆರಂಭವಾಗಲಿದೆ. ಇನ್ನು ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿಯೂ ಬದಲಾವಣೆ ಮಾಡಲಾಗಿದ್ದು ಎಲ್ಲಾ ವಿಷಯದಲ್ಲಿಯೂ ಒಂದು ಅಂಕದ 20 ಪ್ರಶ್ನೆಗಳನ್ನು ಇಡಲಾಗಿದೆ. ಈ 20 ಪ್ರಶ್ನೆಗಳಲ್ಲಿ 12 ಪ್ರಶ್ನೆಗಳಿಗೆ ನಾಲ್ಕು ಆಯ್ಕೆಗಳನ್ನು ನೀಡಲಾಗುತ್ತದೆ. ಇನ್ನು ಕೆಲವು ಬಿಟ್ಟ ಸ್ಥಳ ತುಂಬಿರಿ ಹಾಗೂ ಹೊಂದಿಸಿ ಬರೆಯಿರಿ ಎನ್ನುವಂತಹ ಸರಳವಾದ ಪ್ರಶ್ನೆಗಳನ್ನು ಕೂಡ ಕೇಳಲಾಗಿದೆ ಎಂದು ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಇಲಾಖೆ ಈ ಬಾರಿ ವಿದ್ಯಾರ್ಥಿಗಳ ಪ್ರಶ್ನೆ ಪತ್ರಿಕೆಯಲ್ಲಿ ಸಾಕಷ್ಟು ಬದಲಾವಣೆ ಹಾಗೂ ವಿನೂತನ ಅಳವಡಿಕೆ ಮಾಡಿಕೊಂಡಿದೆ ಎಂದು ಕೆ ಎಸ್ ಇ ಎ ಬಿ ನಿರ್ದೇಶಕ ಗೋಪಾಲಕೃಷ್ಣ ಅವರು ಹೇಳಿದ್ದಾರೆ.
Advertisement