Karnataka Times
Trending Stories, Viral News, Gossips & Everything in Kannada

Aadhaar Card: ಆಧಾರ್ ಕಾರ್ಡ್ ನಲ್ಲಿ ವಿಳಾಸ ಬದಲಾಯಿಸಲು ಎಷ್ಟು ಶುಲ್ಕವಾಗುತ್ತದೆ ಹಾಗೂ ಹೇಗೆ ಬದಲಾಯಿಸಬಹುದು?

advertisement

ಇಂದಿನ ಕಾಲದಲ್ಲಿ ಆಧಾರ್ ಕಾರ್ಡ್ ಎನ್ನುವುದು ಪ್ರಮುಖ ದಾಖಲೆ ಆಗಿರುವ ಹಿನ್ನೆಲೆಯಲ್ಲಿ ನಾವು ಯಾವುದೇ ರೀತಿಯ ಕೆಲಸ ಮಾಡಿಕೊಳ್ಳುವುದಕ್ಕೂ ಕೂಡ ಆಧಾರ್ ಕಾರ್ಡ್ ಅನ್ನು ನೀಡಬೇಕಾಗುತ್ತದೆ. ಪ್ರತಿಯೊಬ್ಬ ಭಾರತೀಯ ನಾಗರಿಕನ ಪ್ರಮುಖ ಗುರುತಿನ ಚೀಟಿಯಾಗಿ ಕಾರ್ಯನಿರ್ವಹಿಸುತ್ತದೆ. ಇನ್ನು ಆಧಾರ್ ಕಾರ್ಡ್ ನಲ್ಲಿ ಕಾಲಕಾಲಕ್ಕೆ ತಕ್ಕಂತೆ ತಿದ್ದುಪಡಿ ಮಾಡಿಕೊಳ್ಳುವುದು ಬಹಳ ಮುಖ್ಯ.

ಆಧಾರ್ ಕಾರ್ಡ್ ನಲ್ಲಿ ವಿಳಾಸ ಬದಲಾಯಿಸುವುದು ಹೇಗೆ?

ಆಧಾರ್ ಕಾರ್ಡ್ (Aadhaar Card) ಬಹಳ ಮುಖ್ಯವಾಗಿರುವ ದಾಖಲೆ ಎಂದು ನಿಮಗೆಲ್ಲರಿಗೂ ಗೊತ್ತಿದೆ. ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಜನ್ಮ ದಿನಾಂಕ ಮೊದಲಾದ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಬಹುದು. ಅದರಲ್ಲೂ ನೀವು ಆಧಾರ್ ಕಾರ್ಡ್ ಪಡೆದು 10 ವರ್ಷ ಕಳೆದಿದ್ದರೆ ಈಗ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಸೂಕ್ತವಾದ ಸಮಯ.

advertisement

ಸಾಮಾನ್ಯವಾಗಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸ್ಥಳಾಂತರ ಗೊಂಡಿದ್ದರೆ ಅಥವಾ ಮನೆ ಬದಲಾಯಿಸಿದರೆ ಅಡ್ರೆಸ್ ಕೂಡ ಬದಲಾಗುತ್ತದೆ. ನೀವು ಈ ಬದಲಾದ ವಿಳಾಸ ಆಧಾರ್ ಕಾರ್ಡ್ ನಲ್ಲಿಯೂ ಅಪ್ಡೇಟ್ ಮಾಡಲೇಬೇಕು. ಆಧಾರ್ ಕಾರ್ಡ್ ನಲ್ಲಿ ವಿಳಾಸ ಬದಲಾಯಿಸಲು ಎಷ್ಟು ಶುಲ್ಕವಾಗುತ್ತದೆ ಹಾಗೂ ಹೇಗೆ ಬದಲಾಯಿಸಬಹುದು ಎನ್ನುವುದನ್ನು ನೋಡೋಣ.

ಆನ್ಲೈನ್ ನಲ್ಲಿ ಆಧಾರ್ ಕಾರ್ಡ್ ವಿಳಾಸ ಬದಲಾಯಿಸಿ!

  • ಆನ್ಲೈನ್ ನಲ್ಲಿ ಆಧಾರ್ ಕಾರ್ಡ್ ಅಗತ್ಯ ಇರುವ ತಿದ್ದುಪಡಿ ಮಾಡಿಕೊಳ್ಳಬಹುದು. myaadhaar.uidai.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ. ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ. ನಿಮ್ಮ ಮೊಬೈಲ್ ಸಂಖ್ಯೆಗೆ ಒಂದು ಓಟಿಪಿ ಕಳುಹಿಸಲಾಗುತ್ತಿದೆ. ಅದನ್ನು ನಮೂದಿಸುವುದರ ಮೂಲಕ ಲಾಗಿನ್ ಆಗಬೇಕು.
  • ಒಮ್ಮೆ ಈ ವೆಬ್ ಸೈಟ್ ನಲ್ಲಿ ಲಾಗಿನ್ ಆದ ಬಳಿಕ ನೀವು ಅಗತ್ಯ ಇರುವ ದಾಖಲೆಗಳನ್ನು ನೀಡಿ ನಿಮ್ಮ ವಿಳಾಸ ಬದಲಾಯಿಸಿಕೊಳ್ಳಬಹುದು. ಇದಕ್ಕೆ 50 ರೂಪಾಯಿಗಳು ಶುಲ್ಕ ಪಾವತಿಸಬೇಕು. ಆನ್ಲೈನ್ ಮೂಲಕವೇ ಪೇಮೆಂಟ್ ಮಾಡಿದ ನಂತರ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಅರ್ಜಿ ಸಲ್ಲಿಕೆಯಾಗುತ್ತದೆ. ಒಂದು ತಿಂಗಳ ಬಳಿಕ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಆಗಿರುತ್ತದೆ.
  • ಈ ರೀತಿಯಾಗಿ ನೀವು ರೂ. 50 ಗಳ ಶುಲ್ಕವನ್ನು ಪಾವತಿ ಮಾಡಿ ಆಧಾರ್ ಕಾರ್ಡ್ ನ ನವೀಕರಣ ಅಥವಾ ಆಧಾರ್ ಕಾರ್ಡ್ ನಲ್ಲಿ ವಿಳಾಸ ಬದಲಾವಣೆ ಮಾಡಿಕೊಳ್ಳಬಹುದು.

advertisement

Leave A Reply

Your email address will not be published.