Karnataka Times
Trending Stories, Viral News, Gossips & Everything in Kannada

CM Siddaramaiah: ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇನ್ನೂಂದು ಯೋಜನೆ ಜಾರಿಗೆ ತಂದ ಸರ್ಕಾರ!

advertisement

ನುಡಿದಂತೆ ನಡೆಯುವ ರಾಜ್ಯ ಸರ್ಕಾರದಿಂದ ಈಗಾಗಲೇ ಮಹಿಳೆಯರಿಗಾಗಿ ಗೃಹಲಕ್ಷ್ಮಿ (Gruha Lakshmi), ಶಕ್ತಿ ಯೋಜನೆ (Shakti Yojana) ಜಾರಿಗೊಳಿಸಿದ ನಂತ್ರ, ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಮಹಿಳೆಯರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸರ್ಕಾರ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿದೆ.

ಮಹಿಳೆಯರಿಗೆ ಹೊಸ ಯೋಜನೆ:

ಆರ್ಥಿಕವಾಗಿ ಮಹಿಳೆಯರನ್ನು ಬಲ ತುಂಬುವ ನಿಟ್ಟಿನಲ್ಲಿ ರಾಮನಗರ ಬಿಡದಿಯ ಬಳಿಯಲ್ಲಿ ಮಹಿಳೆಯರಿಗಾಗಿಯೇ ವಾಹನ ಚಾಲನೆ ತರಬೇತಿ ನೀಡೋದಕ್ಕಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸೋದಾಗಿದೆ.

ಈ ಕುರಿತಂತೆ ನಿನ್ನೆ ಸಿಎಂ ಸಿದ್ಧರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ, ಅನುದಾವನಕ್ಕೂ ಒಪ್ಪಿಗೆ ಸೂಚಿಸಲಾಗಿದೆ. ಹೀಗಾಗಿ ರಾಮನಗರ ತಾಲ್ಲೂಕು ಬಿಡದಿಯಲ್ಲಿ ಮಹಿಳೆಯರಿಗಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ.

 

advertisement

 

ಕೈಜೋಡಿಸುತ್ತಿರುವ ಇತರ ಸಂಸ್ಥೆಗಳು:

ಅಂದಹಾಗೇ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (Ramalinga Reddy) ಅವರ ಮಾರ್ಗದರ್ಶನದಲ್ಲಿ ಸಾರಿಗೆ ಇಲಾಖೆ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಸ್ತಾಪವನ್ನು ಮುಂದಿಟ್ಟಿದೆ. ಈ ಯೋಜನೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ.

AWAKE ಸಂಸ್ಥೆ, ರಾಜಾಜಿನಗರ, ಬೆಂಗಳೂರು ಮತ್ತು ಸಾರಿಗೆ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ರೂ.10.50 ಕೋಟಿಗಳ ಅಂದಾಜು ಮೊತ್ತದಲ್ಲಿ ಬಿಡದಿಯಲ್ಲಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರ ಸ್ಥಾಪನೆಗೆ ಯೋಜಿಸಲಾಗಿದೆ. ಈ ಮೂಲಕ ಶಕ್ತಿ, ಗೃಹಲಕ್ಷ್ಮೀ ಯೋಜನೆಯ ಬಳಿಕ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ವಾಹನ ಚಾಲನಾ ತರಬೇತಿಯಂತ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಇನ್ನು ಮುಂದೆ ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಳ್ಳ ಬಹುದಾಗಿದೆ.

advertisement

Leave A Reply

Your email address will not be published.