Bengaluru – Mysuru ದಶಪಥ ಹೆದ್ದಾರಿ ಉದ್ಘಾಟನೆ ಆದ ದಿನವೇ ಎಕ್ಸ್‌ಪ್ರೆಸ್‌ವೇಯಲ್ಲಿ Accident ನಡೆದಿದೆ. ಸಂಭವಿಸಿದೆ. ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ( PM Narendra Modi) ಅವರೇ ಮಂಡ್ಯದಲ್ಲಿ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದ್ದರು. ಉದ್ಘಾಟನೆ ಯಾದ ಕೆಲವೇ ಗಂಟೆಗಳ ಸಮಯದಲ್ಲಿ ಈ ಅವಘಡ ನಡೆದಿದೆ.
ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಮಂಡ್ಯದ ಮದ್ದೂರಿನ ಎಕ್ಸ್‍ಪ್ರೆಸ್ ವೇ ಫ್ಲೈಓವರ್ ಬಳಿ ಪಲ್ಟಿಯಾಗಿದೆ.
ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿದ್ದು , ಗುದ್ದಿದ ರಭಸಕ್ಕೆ ಕಾರು ಪಲ್ಟಿಯಾಗಿದೆ.
ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ . ಈ ಈ ಕುರಿತಂತೆ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೈಸೂರು ದಶಕಥ ಹೆದ್ದಾರಿ ಮಂಡ್ಯ ರಾಮನಗರದಿಂದ ಮೈಸೂರಿಗೆ ಹಾದು ಹೋಗುತ್ತದೆ. ಈ ಹೆದ್ದಾರಿಯ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಕೇವಲ 90 ಗಂಟೆ ಸಮಯದಲ್ಲಿ ಪ್ರಯಾಣ ಬೆಳೆಸಬಹುದಾಗಿದೆ. ಆದರೆ ಉದ್ಘಾಟನೆಯಾದ ಮೊದಲ ದಿನವೇ ಅಪಘಾತ ನಡೆದಿರುವುದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.