Karnataka Times
Trending Stories, Viral News, Gossips & Everything in Kannada

Udyogini Scheme: ಮಹಿಳೆಯರಿಗೆ ಮತ್ತೊಮ್ಮೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ ಸರ್ಕಾರ, ಸಿಗಲಿದೆ 3ಲಕ್ಷ ಸಾಲ ಸೌಲಭ್ಯ!

advertisement

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನು ತರುತ್ತಿದೆ. ಈಗಾಗಲೇ ನಮ್ಮ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಬಸ್ ಪಾಸ್, ಭಾಗ್ಯಲಕ್ಷ್ಮಿ ಯೋಜನೆ ಇತ್ಯಾದಿ ವಿಶೇಷ ಕೊಡುಗೆಗಳನ್ನು ನೀಡಿದ್ದಾರೆ. ಅದೇ ರೀತಿ ಮತ್ತೆ ಮಹಿಳೆಯರಿಗೆ ಯಾವುದೇ ರೀತಿ ಬಡ್ಡಿ ಇಲ್ಲದೆ ಸಂಪೂರ್ಣ ಉಚಿತವಾಗಿ ಮಹಿಳೆಯರಿಗೆ 3 ಲಕ್ಷ ರೂಪಾಯಿಗಳ ಸಾಲ ನೀಡುವ ಹೊಸ ಯೋಜನೆ ಆರಂಭಿಸಲಾಗಿದ್ದು ಎಲ್ಲಾ ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದು. ಮಹಿಳೆಯರು ಈ ಸಾಲವನ್ನು ಪಡೆದುಕೊಂಡು ಯಾವುದಾದರೂ ಒಂದು ಕೆಲಸವನ್ನು ಮಾಡಬಹುದು. ಯಾಕೋ ಏನೋ ಗೊತ್ತಿಲ್ಲ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಹೆಣ್ಣು ಮಕ್ಕಳಿಗೆ ಮಾತ್ರ ಎಲ್ಲ ರೀತಿಯ ಹೊಸ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಗೆ ಬೇಕಾಗುವ ದಾಖಲಾತಿಗಳ ಕುರಿತಾಗಿ ಮಾಹಿತಿ ನೀಡಿದ್ದೇವೆ.

ಉದ್ಯೋಗಿನಿ ಯೋಜನೆ (Udyogini Scheme)ಎಂದರೇನು?

ಈ ಯೋಜನೆಯು ನಿರುದ್ಯೋಗಿ ಮಹಿಳೆಯರು ಅಥವಾ ಸ್ವಉದ್ಯೋಗ ಮಾಡಲು ಪ್ರೋತ್ಸಾಹ ನೀಡುವ ಯೋಜನೆಯಾಗಿದೆ ಈ ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳೆಯರು ಗರಿಷ್ಠ ಮೂರು ಲಕ್ಷ ರೂಪಾಯಿವರೆಗೂ ಸಾಲ ದೊರೆಯಲಿದ್ದು ಸಬ್ಸಿಡಿ ಕೂಡ ಲಭ್ಯವಿರುತ್ತದೆ. ಹಾಗಾದರೆ ಉದ್ಯೋಗಿನಿ ಯೋಜನೆಗೆ ಮಹಿಳೆಯರು ಮಾತ್ರವೇ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ಹಾಗಂತ ಈ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಬದಲಿಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನೀವು ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಹೋಗಬೇಕಾಗುತ್ತದೆ.

advertisement

ಈ ಯೋಜನೆಯಿಂದ ಸಿಗುವ ಲಾಭವೇನು

ಉದ್ಯೋಗಿನಿ ಯೋಜನೆಯಲ್ಲಿ ಸ್ವಯಂ ಉದ್ಯೋಗ ಮಾಡಲು ಬಯಸುವ ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಮಹಿಳೆಗೆ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಬ್ಯಾಂಕ್ ಮೂಲಕ ಸಾಲ ನೀಡಲಾಗುತ್ತದೆ. ಇದರಲ್ಲಿ ಪರಿಶಿಷ್ಟ ಪಂಗಡ ಪರಿಶಿಷ್ಟ ಜಾತಿಯ ಮಹಿಳೆಯರಿಗೆ ಶೇಖಡ 40ರಷ್ಟು ಅಥವಾ 1,50,000 ಸಾವಿರ ರೂಪಾಯಿ ಸಬ್ಸಿಡಿ ನೀಡಲಾಗುತ್ತದೆ. ಅಲ್ಲದೆ ಇತರ ವರ್ಗದ ಮಹಿಳೆಯರಿಗೆ ಶೇಕಡ 30ರಷ್ಟು ಅಥವಾ ಗರಿಷ್ಠ 90 ಸಾವಿರ ರೂಪಾಯಿ ಸಬ್ಸಿಡಿ ದೊರೆಯಲಿದೆ.

ಈ ಯೋಜನೆಯು ಕರ್ನಾಟಕದ ಖಾಯಂ ನಾಗರಿಕ ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತದೆ. ಅಲ್ಲದೆ ಇದು 18 ವರ್ಷದಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಈ ಸೌಲಭ್ಯ ದೊರಕಲಿದೆ. ಮೊದಲಿಗೆ ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಭೇಟಿ ನೀಡಿ ಅಲ್ಲಿ ಉದ್ಯೋಗಿನಿ ಯೋಜನೆಯ ಅರ್ಜಿಯನ್ನು ಕೇಳಿ ಪಡೆಯಿರಿ. ಅರ್ಜಿಯಲ್ಲಿ ಕೇಳಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಂತರ ಅರ್ಜಿಯ ಜೊತೆಗೆ ಅಗತ್ಯವಾದ ದಾಖಲಾತಿಗಳನ್ನು ಸಲ್ಲಿಸಿ ಇದಾದ ನಂತರ ಸಂಬಂಧ ಪಟ್ಟಂತಹ ಅಧಿಕಾರಿಗಳು ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತಾರೆ.

ಈ ಯೋಜನೆಗೆ ಬೇಕಾಗುವ ದಾಖಲೆಗಳು

ಅರ್ಜಿಯಲ್ಲಿ ನಿಮ್ಮ ಮಾಹಿತಿ ಸರಿಯಾಗಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ. ಅರ್ಜಿ ಸಲ್ಲಿಸುವ ಮಹಿಳೆಯ
ಈ ಕೆಳಗೆ ಕೊಟ್ಟಿರುವ ದಾಖಲೆಗಳನ್ನು ಸಲ್ಲಿಸಬೇಕು.
• ಆಧಾರ್ ಕಾರ್ಡ್
• ಜನನ ಪ್ರಮಾಣ ಪತ್ರ
• ಆದಾಯ ಪ್ರಮಾಣ ಪತ್ರ
• ಬಿಪಿಎಲ್ ಕಾರ್ಡ್ ಹಾಗೂ ಎಸ್ಸಿ ಎಸ್ಟಿ ಆಗಿದ್ದರೆ ಜಾತಿ ಪ್ರಮಾಣ ಪತ್ರ ನೀಡಬೇಕಾಗುತ್ತದೆ.

advertisement

Leave A Reply

Your email address will not be published.