Karnataka Times
Trending Stories, Viral News, Gossips & Everything in Kannada

Loan: ರಾಜ್ಯದ ರೈತರಿಗೆ 20 ಲಕ್ಷ ರೂಪಾಯಿ ಸಾಲ ಸೌಲಭ್ಯ, ಅರ್ಹರು ಇಲ್ಲಿ ಅರ್ಜಿ ಸಲ್ಲಿಸಿ!

advertisement

ಕೃಷಿ ಇಲಾಖೆ ವತಿಯಿಂದ ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ 4% ಬಡ್ಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2023 – 24ನೇ ಸಾಲಿನ ಆಯವ್ಯಯದಲ್ಲಿ ರೈತ ಉತ್ಪಾದಕರ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲೂಕುಗಳ ನೂರು ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂಪಾಯಿಗಳವರೆಗಿನ ಸಾಲಕ್ಕೆ ಶೇ 4ರ ಬಡ್ಡಿ ಸಹಾಯಧನ ನೀಡಲಾಗುವುದು ಎಂದು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ.

ಸಾಲ ಮತ್ತು ಸಹಾಯಧನದ ನಿಯಮಾವಳಿಗಳು

ಕೃಷಿ ಇಲಾಖೆ ಜಲಾನಯನ ಅಭಿವೃದ್ಧಿ ಇಲಾಖೆ ಜಿಲ್ಲೆಯ ಹಿಂದುಳಿದ ತಾಲೂಕುಗಳಲ್ಲಿನ ಕಂಪನಿ ಕಾಯ್ದೆ 2013ರ ಅಡಿಯಲ್ಲಿ ಕನಿಷ್ಠ ನೂರು ರೈತ ಷೇರುದಾರರನ್ನು ಹೊಂದಿ, ಸರ್ಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳ ಮೂಲಕ 2023ರ ಏಪ್ರಿಲ್ ಒಂದರಿಂದ ಗರಿಷ್ಠ 20 ಲಕ್ಷ ರೂಪಾಯಿಗಳವರೆಗೆ ರೈತ ಉತ್ಪಾದಕರ ಸಂಸ್ಥೆಗಳು ಪಡೆದ ಸಾಲಕ್ಕೆ(Loan) ಶೇಕಡ ನಾಲ್ಕರಷ್ಟು ಸಹಾಯ ಬಡ್ಡಿ ದರ ನೀಡಲು ರೈತ ಉತ್ಪಾದಕರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

advertisement

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನಾಂಕ ವಾಗಿರುತ್ತದೆ. ಸ್ವೀಕೃತವಾದ ಸೂಕ್ತ ಅರ್ಜಿಗಳಿಗೆ ನಿಯಮಾನಸಾರ ಬಡ್ಡಿ ಸಹಾಯಧನವನ್ನು ಸಂಬಂಧಿಸಿದ ರೈತ ಉತ್ಪಾದಕರ ಸಂಸ್ಥೆಗಳ ಸಾಲದ ಖಾತೆಗೆ ಪಾವತಿಸಲಾಗುತ್ತದೆ. ಆಸಕ್ತಿಯುಳ್ಳ ಅರ್ಹ ರೈತ ಉತ್ಪಾದಕರ ಸಂಸ್ಥೆಗಳು ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರ, ಉಪಕೃಷಿ ನಿರ್ದೇಶಕರ, ಸಹಾಯಕ ಕೃಷಿ ನಿರ್ದೇಶಕರ, ಇಲ್ಲವೇ ರೈತರ ಸಂಪರ್ಕ ಕೇಂದ್ರದ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

advertisement

Leave A Reply

Your email address will not be published.