Karnataka Times
Trending Stories, Viral News, Gossips & Everything in Kannada

Copra Price: ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ – ಬೆಂಬಲ ಬೆಲೆ ಘೋಷಿಸಿದ ಸಿದ್ದರಾಮಯ್ಯ

advertisement

ಕೆಲ ದಿನಗಳಿಂದ ಕೊಬ್ಬರಿಗೆ ಸರಿಯಾದ ಬೆಲೆಯಿಲ್ಲದೆ ತೊಂದರೆಗೊಳಗಾಗಿದ್ದಟ್ ಕೊಬ್ಬರಿ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಹೌದು ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ (Copra Price) 12000 ರೂಪಾಯಿಯೊಂದಿಗೆ ರಾಜ್ಯ ಸರ್ಕಾರ 1500 ರೂಪಾಯಿಯನ್ನು ಹೆಚ್ಚುವರಿಯಾಗಿ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

Copra ಬೆಲೆ ನಿಗದಿ:

 

 

advertisement

ತುಮಕೂರಿ​ನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿ (Copra) ಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಕುಣಿಗಲ್‌ನಲ್ಲಿ ಸ್ಟಡ್ ಫಾರಂನ ಟೌನ್‌ಶಿಪ್‌ ಮಾಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ ಮಾಡಲು ಸಲಹೆ ನೀಡಿದ್ದೇನೆ ಎಂದರು. ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು 300 ರೂಪಾಯಿ ಹೆಚ್ಚಿಸಿ ಡಿಸೆಂಬರ್ ತಿಂಗಳಾಂತ್ಯದಲ್ಲಿ ಆದೇಶಿಸಿತ್ತು. ಅಲ್ಲದೆ, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿತ್ತು. ಆ ಮೂಲಕ ಬೆಲೆ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿತ್ತು.

Copra ಬೆಲೆ ಕ್ರೆಡಿಟ್ ಪಡೆದ ಕುಮಾರಸ್ವಾಮಿ:

 

 

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Deve Gowda), ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಸೇರಿದಂತೆ ಇತರೆ ಜೆಡಿಎಸ್ ನಾಯಕು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಕೊಬ್ಬರಿಗೆ ಬೆಂಬಲ ಬೆಲ ಘೋಷಿಸುವಂತೆ ಮನವಿ ಮಾಡಿದ್ದರು. ಬಳಿಕ ಕೇಂದ್ರ ಬೆಂಬಲ ಘೋಷಣೆ ಮಾಡಿತ್ತು. ಇದರ ಕ್ರೆಡಿಟ್​ ನಮ್ಮದೇ ಎಂದು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹೇಳಿದ್ದರು. ಅದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಬಲ ಬೆಲೆ ಘೋಷಣೆ ಮಾಡಿ ರೈತರ ಮುಖದಲ್ಲಿ ನಗು ಮೂಡಿಸಿದ್ದಾರೆ.

advertisement

Leave A Reply

Your email address will not be published.