Karnataka Times
Trending Stories, Viral News, Gossips & Everything in Kannada

Student Scholarship: ಮೆಟ್ರಿಕ್ ನಂತರದ 2.50 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ!

advertisement

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿಯುಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪುವೇಶಕ್ಕಾಗಿ ಹೊಸದಾಗಿ ಪುವೇಶ ಬಯಸುವ ಪ.ಜಾ/ಪ.ವರ್ಗದ ಹಾಗೂ ಪವರ್ಗ-1, 2ಎ, 2ಬಿ, 3ಎ, 3ಬಿ, ಮತ್ತು ಇತರ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕುಟುಂಬ ನೊಂದಣಿ ಸಂಖ್ಯೆ ನಮೂದಿಸುವುದನ್ನು ಕಡ್ಡಾಗೊಳಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ:

ಎಸ್.ಸಿ & ಎಸ್.ಟಿ, ಪವರ್ಗ-1 ರೂ. 2.50 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1.00 ಲಕ್ಷದೊಳಗಿರಬೇಕು.

BCM ಹಾಸ್ಟೆಲ್‌ಗೆ ಅಗತ್ಯವಿರುವ ದಾಖಲೆಗಳು:

 

advertisement

 

ಆಧಾರ್ ಕಾರ್ಡ್, SSP ಸ್ಟೂಡೆಂಟ್ ಐಡಿ, SSLC ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಹಿಂದಿನ ವರ್ಷದ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣಪತ್ರ, ವರ್ಗಾವಣೆ ಪ್ರಮಾಣಪತ್ರ, ಪಾಸ್ಪೋರ್ಟ್ ಗಾತ್ರದ ಫೋಟೋ, ಮೊಬೈಲ್ ನಂಬರ್, ಕಾಲೇಜ್ ಸ್ಟಡಿ ಸರ್ಟಿಫಿಕೇಟ್.

ಆನ್ಲೈನಲ್ಲಿ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ವಿದ್ಯಾರ್ಥಿಗಳು SHP ತಂತ್ರಾಂಶದ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು
ಹಂತ 1: ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು https://ssp.postmatric.karnataka.gov.in/
ಹಂತ 2: ಈ ಎಸ್ ಹೆಚ್ ಪಿ ಪೋರ್ಟಲ್ ನಲ್ಲಿ ಮೇಲೆ ಕಾಣಿಸುತ್ತಿರುವ ” HOSTEL APPLICATION POSTMATRIC” ಆಯ್ಕೆ ಮಾಡಿ
ಹಂತ 3: ಇಲ್ಲಿ ನಿಮ್ಮ SSP ಐಡಿಯನ್ನು ನಮೂದಿಸಿ ಗೆಟ್ ಡೇಟಾ ಮೇಲೆ ಕ್ಲಿಕ್ ಮಾಡಿ.
ಹಂತ 4: ನಂತರ ನಿಮ್ಮ ಶೈಕ್ಷಣಿಕ ವರ್ಷದ ಮಾಹಿತಿ ದೊರೆಯುತ್ತದೆ ಮತ್ತು ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
ಹಂತ 5: ಅರ್ಜಿ ಸಲ್ಲಿಸಿದ ನಂತರ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ನಂತರ ಇಲಾಖೆಯು ಪರಿಶೀಲನೆ ನಡೆಸಿ ಆಯ್ಕೆಯಾದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ.

advertisement

Leave A Reply

Your email address will not be published.