Karnataka Times
Trending Stories, Viral News, Gossips & Everything in Kannada

Corona Vaccination: ಕರ್ನಾಟಕದಲ್ಲಿ ಮತ್ತೆ ಕೊರೊನಾ ವ್ಯಾಕ್ಸಿನೇಷನ್ ನೀಡುತ್ತಾರೆಯೇ? ಸಚಿವರ ಸ್ಪಷ್ಟನೆ ಇಲ್ಲಿದೆ.

advertisement

ರಾಜ್ಯದಲ್ಲಿ ಕೊರೊನಾ (Corona) ರೂಪಾಂತರ ತಳಿ ಮೂಲಕ ಕಾಡತೊಡಗಿದೆ.ಚಳಿಗಾಲ ಇರುವ ಕಾರಣ ರಾಜ್ಯದಲ್ಲಿ ಮತ್ತೆ ಕರೊನ ಹೆಚ್ಚಾಗುತ್ತಿದ್ದು, ನಿನ್ನೆ ಒಂದೇ ದಿನ 78 ಜನರಿಗೆ ಕೊರೊನಾ ಪಾಸಿಟಿವ್ (Corona Positive) ದೃಢಪಟ್ಟಿದೆ. ಬೆಂಗಳೂರು ಒಂದರಲ್ಲೇ 68 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಸದ್ಯ ರಾಜ್ಯದಲ್ಲಿ ಕೋವಿಡ್ (Covid) ಸಕ್ರಿಯ ಪ್ರಕರಣಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರ ಬಿಗಿ ಕ್ರಮಗಳ ಮೂಲಕ ಆರಂಭದಲ್ಲಿಯೇ ಕೊರೊನಾ ಉಲ್ಬಣ ಗೊಳ್ಳದಂತೆ ಎಚ್ಚರಿಕೆ ವಹಿಸಬೇಕಿದೆ.

ಈ ಕುರಿತಾಗಿ ಅರೋಗ್ಯ ಸಚಿವರು ಹೇಳಿದ್ದೇನು?

ಗಡಿ ಜಿಲ್ಲೆ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಕರ್ನಾಟಕದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನು ರಾಜ್ಯದಲ್ಲಿ ಮತ್ತೆ ಕೊರೊನಾ ವ್ಯಾಕ್ಸಿನೇಷನ್‌ (Corona Vaccination) ಎನ್ನುವ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Minister Dinesh Gundurao) ಸ್ಪಷ್ಟನೆ ನೀಡಿದ್ದಾರೆ.

 

 

ದಕ್ಷಿಣ ಕನ್ನಡ ಜಿಲ್ಲೆಯ ಕೊರೊನಾ ಸ್ಥಿತಿಗತಿ ಪರಿಶೀಲಿಸಿ ಮಾತನಾಡಿದ ಅವರು, ತಜ್ಞರ ತಂಡ ಸೂಚಿಸಿದ್ದಲ್ಲಿ ಮಾತ್ರ ವ್ಯಾಕ್ಸಿನೇಷನ್‌ ಮಾಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆ ಕೇರಳ ಗಡಿಭಾಗವಾಗಿದ್ದರಿಂದ ಅಧಿಕಾರಿಗಳಿಗೆ ಎಚ್ಚರಿಕೆಯಿಂದ ಇರಲು ಅವರು ಸೂಚನೆ ನೀಡಿದ್ದಾರೆ.

advertisement

ಆಚರಣೆಗಳಿಗೆ ನಿರ್ಬಂಧವಿಲ್ಲ ಎಂದ ಸರ್ಕಾರ:

ಮುಂದಿನ ದಿನಗಳಲ್ಲಿ ಯಾವುದೇ ಸಂದರ್ಭ ಎದುರಾದರೂ ಎದುರಿಸಲು ಸಿದ್ದರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಕ್ಯಾಬಿನೆಟ್ ಉಪಸಮಿತಿ ಸೋಮವಾರ ಅಥವಾ ಮಂಗಳವಾರ ಸಭೆ ನಡೆಸಲಿದೆ. ಕೇಂದ್ರ ಹಾಗೂ ಬೇರೆ ರಾಜ್ಯಗಳ ಮಾಹಿತಿ ಪಡೆದು ನಿರ್ಧಾರ ಕೈಗೊಳ್ಳಲಿದ್ದೇವೆ. ಯಾವುದೇ ಕಾರ್ಯಕ್ರಮಗಳನ್ನು ನಿಲ್ಲಿಸುವ ನಿರ್ಧಾರ ಮಾಡಿಲ್ಲ. ಇಲ್ಲಿಯವರೆಗೆ ಎಲ್ಲವೂ ಸಹಜ ಸ್ಥಿತಿಯಲ್ಲಿ ‌ಇರಲಿದೆ. ಕ್ರಿಸ್ಮಸ್, ಹೊಸವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದಿದ್ದಾರೆ.

ಕೋವಿಡ್ ರೂಪಾಂತರಿ ತಳಿ ಜೆಎನ್ 1 ಅಪಾಯಕಾರಿಯೇ ?

ಈಗಾಗಲೆ ಹೇಳಿರುವ ಹಾಗೆ ಈಗ ಜನರನ್ನು ಕಾಡುತ್ತಿರುವುದು ಕೋವಿಡ್ ನ ರೂಪಾಂತರ ತಳಿ ಇದರಿಂದ ಯಾರಿಗೂ ಹೆಚ್ಚಿನ ಅಪಾಯವಿಲ್ಲ. ಈ ಬಗ್ಗೆ ಮೆಡಿಕಲ್ ತಾಂತ್ರಿಕ ಸಮಿತಿಗಳು ಈಗಾಗಲೇ ಹೇಳಿಕೆ ನೀಡಿದೆ. ಆದರೂ ನಮ್ಮ ಎಚ್ಚರಿಕೆಯಲ್ಲಿ ನಾವು ಇರುವುದು ಒಳಿತು. ಸಂಪುಟ ಉಪಸಮಿತಿ ತಜ್ಞರ ವರದಿ ಪಡೆದು ನಿರ್ಧಾರ ಮಾಡಲಿದೆ. ರಾಜ್ಯದಲ್ಲಿ ಸದ್ಯ ಐದು ಸಾವಿರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 330 ಹಾಗೂ ಬೆಂಗಳೂರಿನಲ್ಲಿ 1,500 ಟೆಸ್ಟಿಂಗ್ ಟಾರ್ಗೆಟ್ (Testing Target) ನೀಡಲಾಗಿದೆ. ಗಡಿ ಜಿಲ್ಲೆಯಾಗಿದ್ದರಿಂದ ಮಂಗಳೂರು, ಮೈಸೂರಿಗೆ ಹೆಚ್ಚು ನೀಡಲಾಗಿದೆ ಎಂದು ಹೇಳಿದ್ದಾರೆ.

ವೆಂಟಿಲೇಟರ್ ಕಾರ್ಯನಿರ್ವಹಣೆ ಪರೀಕ್ಷೆ ಬಗ್ಗೆ ಕ್ರಮ ವಹಿಸುತ್ತೇವೆ. ಸರ್ಕಾರಿ ಆಸ್ಪತ್ರೆಗಳಿಗೆ PPE Kit ಪೂರೈಕೆ ಕೆಲಸ ಆಗುತ್ತಿದೆ. ಕೆಲವು ಕಡೆ ಸ್ವಲ್ಪ ತಡ ಆಗಿದೆ, ಎಲ್ಲವೂ ಶೀಘ್ರ ಆಗಲಿದೆ.‌ ಹೆಚ್ಚು ಟೆಸ್ಟಿಂಗ್ ಮಾಡುವ ಅಗತ್ಯ ಇದೆಯೇ ಎಂದು ನಿರ್ಧಾರ ಮಾಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಿಗೆ ಗೈಡ್ ಲೈನ್ಸ್ ಗಳ ಬಗ್ಗೆ ನಿರ್ಧಾರ ಮಾಡಲಾಗುತ್ತದೆ‌ ಎಂದು ತಿಳಿದಿದ್ದಾರೆ.ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ಪ್ರಕಾರ ಈ ಉಪತಳಿ ಬಗ್ಗೆ ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ.

advertisement

Leave A Reply

Your email address will not be published.