Karnataka Times
Trending Stories, Viral News, Gossips & Everything in Kannada

Yuva Nidhi Scheme: ಯುವನಿಧಿ ಯೋಜನೆ ಹಣ ಪಡೆಯಲು ಈ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯ, ಫೆ.29 ರವರೆಗೆ ಮಾತ್ರ ಅವಕಾಶ!

advertisement

ಯುವ ನಿಧಿ ಯೋಜನೆ (Yuva Nidhi Scheme) ಯಡಿ, ಕರ್ನಾಟಕ ಸರ್ಕಾರವು ಡಿಪ್ಲೊಮಾಗೆ ರೂ 1500 ಮತ್ತು ನಿರುದ್ಯೋಗಿ ಪದವಿ ಹೊಂದಿರುವವರಿಗೆ ರೂ 3000 ಮಾಸಿಕ ಸ್ಟೈಫಂಡ್ ನೀಡುತ್ತದೆ. ಆದಾಗ್ಯೂ, ಹಣವನ್ನು ಪ್ರತಿ ತಿಂಗಳು ನಿಜವಾದ ಫಲಾನುಭವಿಗಳಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು, ಕರ್ನಾಟಕ ಸರ್ಕಾರವು ಯುವನಿಧಿ ಯೋಜನೆ (Yuva Nidhi Scheme) ಗೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಯ ಪ್ರಸ್ತುತ ಉದ್ಯೋಗ ಸ್ಥಿತಿಯನ್ನು ಪರಿಶೀಲಿಸಲು ಬಯಸುತ್ತದೆ. ಆದ್ದರಿಂದ, ಎಲ್ಲಾ ಯುವ ನಿಧಿ ಯೋಜನೆಯ ಫಲಾನುಭವಿಗಳು ಮಾಸಿಕ ಸ್ವಯಂ ಘೋಷಣೆ ನಮೂನೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.

ಅರ್ಹ ಅಭ್ಯರ್ಥಿಗಳು ಮಾಡಬೇಕಾದ್ದೇನು?

ಯುವನಿಧಿ ಯೋಜನೆ (Yuva Nidhi Scheme) ಯಡಿ ನಿರುದ್ಯೋಗ ಭತ್ಯೆ ಪಡೆಯಲು ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ತಿಳಿಸಲಾಗಿದೆ. 2022-23ರ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ ಪದವಿ/ಸ್ನಾತಕೊತ್ತರ ಪದವಿ ಮತ್ತು ಡಿಪ್ಲೋಮಾವನ್ನು 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಣಿಯಾಗಿದ್ದು, ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ 2024ರ ಜನವರಿಯಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ.

ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ತಿಂಗಳು ‘ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರೆಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿಯಲ್ಲ’ಎಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ. ಪ್ರಸ್ತಕ ಫೆ.29ರ ವರೆಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರ (Self Declaration Certificate) ವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರಯೋಜನೆ ಪಡೆಯಬಹುದಾಗಿದೆ.

 

 

ಅರ್ಹತೆ ಏನು?

advertisement

  • 2022- 23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದೆ ಇರುವವರಿಗೆ ಈ ಯೋಜನೆಯ ಲಾಭ ಸಿಗಲಿದೆ.
  • ಕರ್ನಾಟಕದಲ್ಲಿ ಕನಿಷ್ಠ 6 ವರ್ಷದವರೆಗೆ ಪದವಿ/ಡಿಪ್ಲೊಮಾ ವ್ಯಾಸಂಗದ ಅವಧಿಯಲ್ಲಿ ಕರ್ನಾಟಕದ ರಹವಾಸಿಯಾಗಿರಬೇಕು.

ಯಾರು ಫಲಾನುಭವಿಗಳು?

  • ವೃತ್ತಿಪರ ಕೋರ್ಸ್‌ ಒಳಗೊಂಡು ಎಲ್ಲ ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ನೀಡಲಾಗುತ್ತದೆ.
  • ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.
  • ಈ ಭತ್ಯೆಯು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಸಿಗಲಿದೆ.

ಯಾರು ಅನರ್ಹರು?

  • ಉನ್ನತ ವ್ಯಾಸಂಗಕ್ಕೆ ದಾಖಲಾಗುವವರು ಮತ್ತು ವಿದ್ಯಾಭ್ಯಾಸ ಮುಂದುವರಿಸುವವರು.
  • ಯಾವುದೇ ಅಪ್ರೆಂಟಿಸ್‌ ವೇತನ ಪಡೆಯುತ್ತಿರುವವರು.
  • ಸರ್ಕಾರಿ/ ಖಾಸಗಿ ಉದ್ಯೋಗ ಪಡೆದಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.
  • ಸರ್ಕಾರದ ನಾನಾ ಯೋಜನೆಗಳಡಿ ಅಥವಾ ಬ್ಯಾಂಕ್‌ ಸಾಲ ಪಡೆದು ಸ್ವಯಂ ಉದ್ಯೋಗ ಶುರು ಮಾಡಿದವರಿಗೂ ಇಲ್ಲ.
  • ಯಾವುದಾದರೂ ಉದ್ಯೋಗ ಸಿಕ್ಕಿದ ಕೂಡಲೇ ಈ ಸವಲತ್ತು ಸ್ಥಗಿತಗೊಳ್ಳಲಿದೆ.
  • ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಂಡು ಭತ್ಯೆ ಸ್ವೀಕರಿಸುವುದನ್ನು ನಿಲ್ಲಿಸಬೇಕು. ಇಲ್ಲದೇ ಇದ್ದರೆ ದಂಡ ವಿಧಿಸಲಾಗುತ್ತದೆ.

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

  • ‘ಸೇವಾ ಸಿಂಧು’ ಪೋರ್ಟಲ್‌ ಮೂಲಕವೇ ಅರ್ಜಿ ಸಲ್ಲಿಸಬೇಕು
  • ಕರ್ನಾಟಕ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ
  • ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಮತ್ತು ಆಧಾರ್‌ ಕಾರ್ಡ್‌ ತೆಗೆದಿಟ್ಟುಕೊಳ್ಳಿ.
  • ನಿಮ್ಮ ಬ್ಯಾಂಕ್‌ ಖಾತೆ ಮಾಹಿತಿ‌ ಸ್ಪಷ್ಟವಾಗಿರಬೇಕು, ಖಾತೆಯೇ ಇಲ್ಲದಿದ್ದರೆ ಈಗಲೇ ಮಾಡಿಸಿ, ಕೆವೈಸಿ ಕೂಡಾ ಮಾಡಿ ಇಡಿ.
  • ಪದವಿ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ ಕಡ್ಡಾಯ (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು)
  • ಡಿಪ್ಲೊಮಾ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ. (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು).

advertisement

Leave A Reply

Your email address will not be published.