Karnataka Times
Trending Stories, Viral News, Gossips & Everything in Kannada

BOI Recruitment: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 5000 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement

ಒಂದೊಳ್ಳೆ ಉದ್ಯೋಗ, ವೇತನ, ಪಡೆಯಬೇಕು ಎನ್ನುವುದು ಬಹುತೇಕರ ಜೀವನದ ಮೂಲ ಉದ್ದೇಶ ಆಗಿದೆ, ಅದೇ ರೀತಿ ಬ್ಯಾಂಕ್ ನಲ್ಲಿ ಕೆಲಸ ಪಡೆಯಬೇಕು ಎಂಬ ಹಂಬಲ ಇರುವವರಿಗೆ ಇದೀಗ ಸೆಂಟ್ರಲ್ ಬ್ಯಾಂಕ್ (Central Bank) ಉದ್ಯೋಗವಕಾಶ ನೀಡಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು, ಹೌದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) 5000 ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಏಪ್ರಿಲ್ 3, 2023 ರವರೆಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಏನು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ಪೂರೈಸಿರುವುದು ಕಡ್ಡಾಯವಾಗಿದೆ. 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ಮೀಸಲಾತಿ ವರ್ಗಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಈ Web siteಗೆ ಭೇಟಿ ನೀಡಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು centralbankofindia.co.in ಬ್ಯಾಂಕಿನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎನ್ನಲಾಗಿದೆ.

ನಿಯಮಗಳೇನು:

ಆಯ್ಕೆಯಾದ ಅಭ್ಯರ್ಥಿಗಳು 2 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಬೇಕಾಗುತ್ತದೆ, ಅಸ್ತಿತ್ವದಲ್ಲಿರುವ ಬ್ಯಾಂಕ್ ನೀತಿಗಳು ಮತ್ತು ನಿಯಮಗಳ ಪ್ರಕಾರ ಹುದ್ದೆಯ ಅವಧಿಯನ್ನು ರಿನೀವಲ್ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 800 ರೂ.ಗಳ ಶುಲ್ಕವನ್ನು ಪಾವತಿಸಬೇಕು, ಎಸ್ಸಿ, ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳು 600 ರೂಪಾಯಿ ಪಾವತಿಸಬೇಕು, ಹೆಚ್ಚಿನ ಮಾಹಿತಿಗೆ ಬ್ಯಾಂಕ್ ವೆಬ್ ಸೈಟ್ ಮೂಲಕ ಮಾಹಿತಿ ಪಡೆದುಕೊಳ್ಳಿ.

Leave A Reply

Your email address will not be published.