Karnataka Times
Trending Stories, Viral News, Gossips & Everything in Kannada

Ration Card: ಹೊಸ ರೇಷನ್ ಕಾರ್ಡ್ ಬಗ್ಗೆ ಬಿಗ್ ಅಪ್ಡೇಟ್, ಇಂತವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ!

advertisement

ಸರ್ಕಾರದ ವಿವಿಧ ಯೋಜನೆಗಳಿಗಾಗಿ ಪಡಿತರ ಚೀಟಿ (Ration Card) ಒಂದು ಪ್ರಮುಖ ಗುರುತಿನ ಪುರಾವೆಯಾಗಿದೆ. ದುರದೃಷ್ಟವಶಾತ್, ಇನ್ನೂ ಸಾಕಷ್ಟು ಜನರಿಗೆ ಪಡಿತರ ಚೀಟಿಗಳಿಲ್ಲ. ಈ ಕಾರಣದಿಂದಾಗಿ, ಅವರು ಈ ಯೋಜನೆಯಿಂದ ವಂಚಿತರಾಗುತ್ತಾರೆ ಮತ್ತು ಅಗತ್ಯವಿರುವ ಪಡಿತರ ಪಡೆಯಲು ಪಡೆಯಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ, ಕರ್ನಾಟಕ ಸರ್ಕಾರವು ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.

ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ. ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ (Minister KH Muniyappa) ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.ಕೆಲವು ತುರ್ತು ಅಗತ್ಯಗಳನ್ನು ಪೂರೈಸಲು, ಸರ್ಕಾರವು ಹೊಸ ರೇಷನ್ ಕಾರ್ಡ್‌ಗಳಿಗೆ (Ration Cards) ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಈ ಯೋಜನೆಯಡಿ ಈ ಕೆಳಗಿನವರು ಅರ್ಜಿ ಸಲ್ಲಿಸಬಹುದು:

  • ಹೊಸದಾಗಿ ಮದುವೆಯಾಗಿ ಸಂಸಾರ ಆರಂಭಿಸುವ ದಂಪತಿಗಳು
  • ಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಹರಾಗುತ್ತಾರೆ.
  • ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುವ ದಂಪತಿಗಳು
  • ಈಗಾಗಲೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.

Ration Card: ತಿದ್ದುಪಡಿಗೆ ಅವಕಾಶ:

 

advertisement

 

ಹೊಸ ಸದಸ್ಯರ ಸೇರ್ಪಡೆ, ತಪ್ಪುಗಳ ತಿದ್ದುಪಡಿ, ಮತ್ತು ವಿಳಾಸ ಬದಲಾವಣೆ ಸೇರಿದಂತೆ ರೇಷನ್ ಕಾರ್ಡ್‌ (Ration Card) ಗಳಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಈ ಜೊತೆಗೆ, ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಸಹ ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ:

ಗ್ರಾಮ ಒನ್ (Gram One), ಬೆಂಗಳೂರು ಒನ್ (Bengaluru One) , ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.ಆನ್ಲೈನ್ (Online) ಮೂಲಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಆನ್ಲೈನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ. ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

advertisement

Leave A Reply

Your email address will not be published.