Karnataka Times
Trending Stories, Viral News, Gossips & Everything in Kannada

Drought Relief: ಬರಪೀಡಿತ ಜಿಲ್ಲೆಗಳ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್.

advertisement

ಕರ್ನಾಟಕದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್ ಈಗಾಗಲೇ ರಾಜ್ಯ ಸರ್ಕಾರದಿಂದ ಮೊದಲನೇ ಕಂತಿನ ಬರ ಪರಿಹಾರ (Drought Relief) ಹಣ ₹2000 ಮಾತ್ರ ರಾಜ್ಯ ಸರ್ಕಾರದಿಂದ ಹಾಕಲಾಗಿತ್ತು. ಆದರೆ ಮತ್ತೊಮ್ಮೆ ರಾಜ್ಯ ಸರ್ಕಾರದಿಂದ 628 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯದ ಬರ ಪೀಡಿತ ಜಿಲ್ಲೆಗಳ ಎಲ್ಲ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದಿಂದ ಎಲ್ಲ ಬರ ಪೀಡಿತ ರೈತರಿಗೆ ಗುಡ್ ನ್ಯೂಸ್ ನೀಡಿದೆ.

ಬರ ಪೀಡಿತ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಬರುವ ರೈತರು ರಾಜ್ಯ ಸರ್ಕಾರದಿಂದ ಎರಡನೇ ಕಂತಿನ ಬರ ಪರಿಹಾರ (Drought Relief) ಹಣವನ್ನ ಪಡೆದುಕೊಳ್ಳಬಹುದಾಗಿದೆ. ಇನ್ನು ಕೂಡ ನಿಮ್ಮ ಖಾತೆಗೆ ಎರಡನೇ ಕಂತಿನ ರಾಜ್ಯ ಸರ್ಕಾರದ ಹಣ ವರ್ಗಾವಣೆ ಆಗಿಲ್ಲ ಅಂದ್ರೆ ತಪ್ಪದೆ ಈ ಲೇಖನವನ್ನ ಕೊನೆವರೆಗೂ ನೋಡಿ.

ಬರದಿಂದ ಕಂಗೆಟ್ಟಿರುವ ರೈತರಿಗೆ ಪರಿಹಾರ:

 

 

advertisement

ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿತು. 628 ಕೋಟಿ ರೂಪಾಯಿ ಹಣವನ್ನ ಬರ ಪರಿಹಾರ (Drought Relief) ವಾಗಿ ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Minister Krishna Byre Gowda) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ 2000 ಕೋಟಿ ರೂಪಾಯಿ ಅನುದಾನ ನಿಗದಿಪಡಿಸಿತ್ತು. ಈಗಾಗಲೇ ರವಾನಿಸಲಾಗಿದೆ.

33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ. 1.5 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗೆ ಹಣ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ರಾಜ್ಯದ 223 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಕುಡಿಯುವ ನೀರು, ಮೇವು ಹಾಗೂ ಇತರೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ಗಳ ಖಾತೆಯಿಂದ 870 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯತಿಯಲ್ಲಿ ನೊಂದಣಿ:

ಅರ್ಹ ರೈತರಿಗೆ ಬರ ಪರಿಹಾರ (Drought Relief) ತಲುಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ಅರ್ಹ ಫಲಾನುಭವಿ ರೈತರ ಹೆಸರು ಬಿಟ್ಟು ಹೋಗಿದ್ದಲ್ಲಿ ಅಂತಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ ಭೇಟಿ ನೀಡಿ ಹೆಸರು ಸೇರ್ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಇಷ್ಟಕ್ಕೂ ನಿಮ್ಮ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರದಿಂದ ಹಣ ಇನ್ನು ಕೂಡ ಮೊದಲನೇ ಕಂತಿನ 2000 ಮತ್ತು ಎರಡನೇ ಕಂತಿನ ಹಣವು ಕೂಡ ಬಂದಿಲ್ಲ ಅಂದ್ರೆ ಈ ಕೂಡಲೇ ನಿಮ್ಮ ಆಧಾರ್ ಸಂಖ್ಯೆಯು ಯಾವ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿದೆ ಎಂದು ಪರಿಶೀಲಿಸಿಕೊಳ್ಳಿ. ಇಲ್ಲವಾದರೆ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ (Aadhaar Card) ನ ಲಿಂಕ್ ಮಾಡಿಸಿಕೊಳ್ಳಿ ಹಾಗೂ ಇ ಕೆವೈಸಿ ಮಾಡಿಸಿಕೊಳ್ಳಿ. ಮುಂದಿನ ಮೂರು ಕೆಲಸದ ದಿನಗಳಲ್ಲಿ ಹಣ ವರ್ಗಾವಣೆಯಾಗುತ್ತದೆ.

advertisement

Leave A Reply

Your email address will not be published.