Karnataka Times
Trending Stories, Viral News, Gossips & Everything in Kannada

Covid-19: ಇಂತಹ ಜನರಿಗೆ ಕೋವಿಡ್ ಟೆಸ್ಟ್ ಕಡ್ಡಾಯ, ಸರ್ಕಾರದ ಹೊಸ ಆದೇಶ!

advertisement

ಕಳೆದ ಎರಡು ಮೂರು ವರ್ಷಗಳ ಹಿಂದೆ ಇಡೀ ದೇಶ ಹಾಗೂ ವಿಶ್ವವನ್ನೇ ಸಂಕಷ್ಟಕ್ಕೆ ದೂಡಿ ಜನರ ಜೀವದ ಜೊತೆಗೆ ಆಟವಾಡಿದ ಕೊರೋನ (Corona) ಇದೀಗ ಮತ್ತೆ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ. ಸದ್ಯಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಹಾಗಾದ್ರೆ ಆ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಸೋಂಕು ಕಾಣಿಸಿಕೊಂಡರೆ ಟೆಸ್ಟಿಂಗ್ ಕಡ್ಡಾಯ

advertisement

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಕೊರೋನ ಸೋಂಕು (Covid-19) ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಕೋವಿಡ್ ರೋಗಲಕ್ಷಣಗಳಿದ್ದರೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಬೇಕು. ಹೋಮ್ ಐಸೊಲೇಷನ್‌ನಲ್ಲಿರುವ 400 ಕೋವಿಡ್ ಸೋಂಕಿತರ ಮನೆಗಳಿಗೆ ವೈದ್ಯರು ಭೇಟಿ ನೀಡಿ ನಿಗಾ ವಹಿಸಲು ಸೂಚನೆ ನೀಡಬೇಕು.

ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಕೋವಿಡ್ ರೋಗಲಕ್ಷಣಗಳಿದ್ದರೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಬೇಕು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚಿಸಲಾಗಿದೆ. ಅದಲ್ಲದೇ ಇಂದಿನಿಂದ ಪ್ರತಿ ನಿತ್ಯ 5 ಸಾವಿರ ಕೋವಿಡ್ ಟೆಸ್ಟಿಂಗ್ ನಡೆಸಲು, ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು, 4 ಮೊಬೈಲ್ ಆಕ್ಸಿಜನ್ ಕಂಟೆಂಡರ್‌ಗಳ ಖರೀದಿಸಲು ಸಭೆಯಲ್ಲಿ ನಿರ್ಧರಿಸುವ ಮೂಲಕ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗಿದೆ.

advertisement

Leave A Reply

Your email address will not be published.