Karnataka Times
Trending Stories, Viral News, Gossips & Everything in Kannada

Agricultural Implements: ರೈತರಿಗೆ ಸಿಹಿ ಸುದ್ದಿ; ಶೇ.90 ರ ರಿಯಾಯಿತಿಯಲ್ಲಿ ಸಿಗುತ್ತಿವೆ ರೈತೋಪಕರಣಗಳು, ಕೂಡಲೇ ಖರೀದಿಸಿ!

advertisement

ತೋಟಗಾರಿಕೆ ಮಾಡುತ್ತಿರುವ ರೈತರಿಗ ಸಂತಸದ ಸುದ್ದಿ. 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ವಿತರಿಸಲು ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ Mini Tractor, Power Tiller, Rotovator, ಕಳೆ ಕೊಚ್ಚುವ ಯಂತ್ರಗಳು (ಪವರ್ ವೀಡರ್), ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್ ಮಿಲ್, ಮೊಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು (Agricultural Implements) ವಿತರಿಸಲಾಗುತ್ತಿದೆ.

 

advertisement

ರೈತರು ಏನು ಮಾಡಬೇಕು?

ಆಸಕ್ತ ತಾಲ್ಲೂಕು ವ್ಯಾಪ್ತಿಯ ರೈತರು ಪಹಣಿ (RTC), Aadhaar Card, Bank Pass Book Xerox, A Portrait Photo, ರೂ.20 ರ ಛಾಪಾ ಕಾಗದದೊಂದಿಗೆ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

advertisement

Leave A Reply

Your email address will not be published.