Karnataka Times
Trending Stories, Viral News, Gossips & Everything in Kannada

Election Result: ತೆಲಂಗಾಣ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್! ಕಾರಣ ಬಹಿರಂಗ

advertisement

ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಕಾಂಗ್ರೆಸ್ ಪಕ್ಷದ ಶಾಸಕರನ್ನು ಇತರ ಪಕ್ಷದ ಶಾಸಕರು ಸೆಳೆಯದಂತೆ ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೆಂದಿಗೂ ಖ್ಯಾತರಾಗಿರುವ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಹೈದರಾಬಾದ್ ತಲುಪಿದ್ದಾರೆ. ಅವರ ಜತೆ ಕರ್ನಾಟಕದ ಕೆಲವು ಇತರ ಸಚಿವರೂ ಇದ್ದಾರೆ. ಹೈದರಾಬಾದ್‌ನ ತಾಜ್ ಕೃಷ್ಣ ಹೋಟೆಲ್‌ನ ಹೊರಗೆ ಬಸ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಕಾಂಗ್ರೆಸ್‌ನ ನೂತನ ಶಾಸಕರಾಗಿ ಆಯ್ಕೆಯಾಗುವವರನ್ನು ಆಯ್ಕೆ ಮಾಡಲು ಈ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಈ ಹಂತದಲ್ಲಿ ಕಾಂಗ್ರೆಸ್ ತನ್ನೆಲ್ಲ ಸಂಭಾವ್ಯ ಶಾಸಕರನ್ನು ಹೈದರಾಬಾದ್‌ಗೆ ಕರೆಸಿಕೊಳ್ಳಲಾಗಿದೆ. ಒಂದು ವೇಳೆ ಇನ್ನು ಫಲಿತಾಂಶದಲ್ಲಿ ಏನಾದರೂ ಏರುಪೇರು ಉಂಟಾದರೆ ಪರಿಸ್ಥಿತಿಯನ್ನು ಎದುರಿಸಲು ಈ ತಂತ್ರಗಾರಿಕೆ ಮಾಡಿದೆ. ಗೆಲುವು ಸನಿಹದಲ್ಲೇ ಇದ್ದರೂ ನಿರ್ಲಕ್ಷ್ಯ ಮಾಡುವುದು ಬೇಡ ಎಂಬ ಕಾರಣಕ್ಕಾಗಿ ಎಲ್ಲರನ್ನು ಒಂದೇ ಕಡೆ ಸೇರಿಸುವ ಪ್ಲ್ಯಾನ್‌ ಮಾಡಲಾಗಿದೆ.

ಅತಂತ್ರ ಪರಿಸ್ಥಿತಿ ಅಥವಾ ಸರಳ ಬಹುಮತ ಬಂದರೆ ಚೆಸ್ ಆಟಕ್ಕೆ ಕಳುಹಿಸಿಕೊಟ್ಟಿರುವ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಟೀಮ್ ಸಜ್ಜಾಗಿ ನಿಂತಿದೆ. ಒಂದು ವೇಳೆ ಅವಶ್ಯ ಬಿದ್ದರೆ ಕಾಂಗ್ರೆಸ್ ನ ಎಲ್ಲ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲು ಮೂರು ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

advertisement

ಇನ್ನು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ (Revanth Reddy) ಮನೆ ಬಳಿ ಕಾರ್ಯಕರ್ತರು ಜಮಾಯಿಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕಾಂಗ್ರೆಸ್ ಎಂಎಲ್‌ಎಗಳನ್ನು ಬೆಂಗಳೂರಿಗೆ ಶಿಫ್ಟ್ ಮಾಡಲು ಚಿಂತಿಸಲಾಗುತ್ತಿದೆ ಎನ್ನಲಾಗಿದೆ.

ತೆಲಂಗಾಣದಲ್ಲಿ ಮೊದಲ ಬಾರಿಗೆ ಸರ್ಕಾರ ರಚನೆ ಮಾಡುವ ಹೊಸ್ತಿಲಿನಲ್ಲಿ ಇರುವ ಕಾಂಗ್ರೆಸ್, ಯಾವುದೇ ತಪ್ಪಿಗೂ ಅವಕಾಶ ಕೊಡದಿರಲು ನಿರ್ಧರಿಸಿದೆ. ಅತ್ಯಧಿಕ ಅಂತರದಲ್ಲಿ ಕಾಂಗ್ರೆಸ್ ಗೆಲುವು ಕಂಡರೆ ಆಪರೇಷನ್ ಭೀತಿ ಇರುವುದಿಲ್ಲ, ಇಲ್ಲವಾದಲ್ಲಿ ಪಕ್ಷಾಂತರ ಆಗುವ ಸಾಧ್ಯತೆಗಳಿದ್ದು ಇದನ್ನು ತಪ್ಪಿಸಲು ನಾಯಕರು ಚಿಂತಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಒಂದು ವೇಳೆ ಕಾಂಗ್ರೆಸ್ ಏನಾದರೂ 70-80 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಆಪರೇಷನ್ ಭೀತಿ ಇಲ್ಲವಾಗಲಿದೆ. ಆಗ ಕಾಂಗ್ರೆಸ್ ಸರ್ಕಾರ ರಚನೆಯತ್ತ ಗಮನ ಹರಿಸಲಿದೆ. ರೇವಂತ್ ರೆಡ್ಡಿ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಹುತೇಕ ಅವರೇ ತೆಲಂಗಾಣ ಸಿಎಂ ಆಗುವ ಸಾಧ್ಯತೆ ಇದೆ.

ಡಿ.ಕೆ. ಶಿವಕುಮಾರ್ (DK Shivakumar) ಈಗಾಗಲೇ ತೆಲಂಗಾಣದ ಪರಿಸ್ಥಿತಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ನೋಡಿಕೊಂಡು ಶಾಸಕರನ್ನು ಶಿಫ್ಟ್ ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

advertisement

Leave A Reply

Your email address will not be published.