ಬಡವರ ಮನೇಲಿ ಕುಮಾರಸ್ವಾಮಿ ಹೇಗೆ ನಿದ್ರೆ ಮಾಡುತ್ತಾರೆ ನೋಡಿ…ವಿಡಿಯೋ

Advertisement
ಸದ್ಯ ಜೆಡಿಎಸ್ನ (JDS) ಪಂಚರತ್ನ ರಥಯಾತ್ರೆ(Pancharatna Rath Yatra)ಯು ಎರಡು ದಾಖಲೆಗಳನ್ನು ನಿರ್ಮಿಸಿದ್ದಾಗಿದೆ. ಹೌದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ( H D Kumaraswamy) ಈ ಎರಡೂ ದಾಖಲೆಗಳನ್ನು ನಾಡಿನ ಜನ ಮತ್ತು ಕಾರ್ಯಕರ್ತರಿಗೆ ಅರ್ಪಿಸಿದ್ದು ಕಳೆದ ವರುಷ ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ.
ಹೌದು ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ (Asia Book Of Records) ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ (India Book Of Records) ದಾಖಲೆಗೆ ಪಾತ್ರರಾಗಿದ್ದಾರೆ
ಆ ಗ್ರಾಮಕ್ಕೆ ಆಗಮಿಸಿದ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ 4 ತೀರ್ಪುಗಾರರಾದ ಮೋಹಿತ್ ಕುಮಾರ್ ವತ್ಸ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ತೀರ್ಪುಗಾರರಾದ ಆರ್.ಹರೀಶ್ ರವರು ಮಾಜಿ ಮುಖ್ಯಮಂತ್ರಿ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಹಾಹೂ ಮೆಡಲ್ ಗಳನ್ನು ಕೂಡ ಹಸ್ತಾಂತರ ಮಾಡಿದರು.
Advertisement
ಈ ಸಂದರ್ಭದಲ್ಲಿ ಮಾತನಾಡಿದ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ತೀರ್ಪುಗಾರರಾದ ಮೋಹಿತ್ ಕುಮಾರ್ ರವರು ಇದೊಂದು ವಿಶೇಷವಾದ ದಾಖಲೆಯಾಗಿದ್ದು ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕಾರಣಿಯೊಬ್ಬರು ಗೌರವಕ್ಕೆ ಪಾತ್ರರಾಗಿರುವುದು ಹಾಗೂ ರೈತರೇ ಬೇಳೆಗಳನ್ನೇ ಬೃಹತ್ ಹಾರಗಳನ್ನಾಗಿ ತಯಾರಿಸಿ ಅವರಿಗೆ ಹಾಕಿ ಸ್ವಾಗತಿಸುತ್ತಿರುವುದು ಸೋಜಿಗ ಮೊದಲ ದಾಖಲೆ ಎಂದರು.
ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇದು ನನಗೆ ಅಚ್ಚರಿಯ ಗೌರವವಾಗಿದ್ದು ಈ ದಾಖಲೆಗಳನ್ನು ನನ್ನ ನಾಡಿನ ರೈತರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಮರ್ಪಣೆ ಮಾಡುತ್ತೇನೆ ಎಂದರು.
ನಾನು ರಥಯಾತ್ರೆ ಮಾಡುತ್ತಿರುವ ಎಲ್ಲಾ ಕಡೆ ಜನರು ನನ್ನನ್ನು ಪ್ರೀತಿಯಿಂದ ಸ್ವಾಗತ ಮಾಡುತ್ತಿದ್ದು ದೊಡ್ಡ ದೊಡ್ಡ ಹಾರಗಳನ್ನು ಹಾಕಿ ಸ್ವಾಗತ ಮಾಡುತ್ತಿದ್ದಾರೆ. ಆ ಜನರ ಪ್ರೀತಿಯಿಂದ ಮಾತ್ರ ಈ ದಾಖಲೆ ನಿರ್ಮಾಣವಾಗಲು ಸಾಧ್ಯವಾಗಿದೆ. ಹೀಗಾಗಿ ಈ ಎಲ್ಲಾ ದಾಖಲೆಯ ಹೆಗ್ಗಳಿಕೆ ಅವರಿಗೇ ಸಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅಪರೂಪದ ವಿಡಿಯೋ ವೈರಲ್ ಆಗುತ್ತಿದ್ದು ಈ ಹಿಂದೆ ಕುಮಾರಸ್ವಾಮಿ ಯವರು ಹಳ್ಳಿಗೆ ಭೇಟಿ ನೀಡಿದ್ದಾಗ ಅವರ ಸರಳತೆ ಹೇಗಿತ್ತು ನೀವೆ ನೋಡಿ.
Advertisement