ರಾಜ್ಯ ವಿಧಾನಸಭಾ ಚುನಾವಣೆಗೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳು ಬೀದಿಗಳಿದು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಒಂದಾದ ಮೇಲೊಂದು ಪಕ್ಷಗಳು ವಿವಿಧ ಭರವಸೆಗಳನ್ನು ನೀಡುತ್ತಾ ಬಂದಿದೆ. ಈ ನಡುವೆ ರೈತರ ಪ್ರಣಾಳಿಕೆಯನ್ನು ಬಹಿರಂಗವಾಗಿ ಒಪ್ಪುವ ಪಕ್ಷಗಳಿಗೆ ರೈತರ ಬೆಂಬಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ (Kurubur Shanthakumar) ಹೇಳಿದ್ದಾರೆ.
ಈ ಕುರಿತಂತೆ ಬೆಳಗಾವಿಯಲ್ಲಿ ಚುನಾವಣೆಗೆ ರೈತರ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದಾರೆ. ರೈತರ ಮಕ್ಕಳ ಮದುವೆಯಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ಕೆಲಸ ನೀಡಬೇಕು ಎನ್ನುವ ಬೇಡಿಕೆ ಸೇರಿದಂತೆರ ವಿವಿಧ ಬೇಡಿಕೆಗಳನ್ನು ರಾಜ್ಯ ಪಕ್ಷಗಳ ಮುಂದಿಟ್ಟಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಅನೇಕ ಪಕ್ಷಗಳು ಜಾತಿ ಆಧಾರದ ಮೇಲೆ ಲೆಕ್ಕಾಚಾರ ಮಾಡುತ್ತಿವೆ. ಅದರೊಂದಿಗೆ ರೈತ ಸಮುದಾಯದ ಮತ ಸೆಳೆಯಲು ಹಲವಾರು ಕಾರ್ಯತಂತ್ರಗಳು ಕೂಡಾ ನಡೆಯುತ್ತಿದೆ.
ರೈತರ ಪ್ರಣಾಳಿಕೆಯ ಪ್ರಮುಖಾಂಶಗಳು:
1. ಪ್ರಾಣಿಗಳ ಹಾವಳಿಯಿಂದಾಗಿ ರೈತನ ಬದುಕು ಕಂಗಾಲಾಗಿದೆ. ಆದ ಕಾರಣ ಹಗಲು ವೇಳೆಯಲ್ಲಿ ಕೃಷಿ ಪಂಪಸೆಟ್ ಗಳಿಗೆ 12 ಗಂಟೆ ನಿರಂತರ ವಿದ್ಯುತ್ ನೀಡಬೇಕು.
2. ದಿನದಲ್ಲಿ ಕನಿಷ್ಠ 12 ಗಂಟೆ ದುಡಿಯುವ ರೈತರಿಗೆ ಕನಿಷ್ಠ ಆದಾಯ ಖಾತರಿ ಭದ್ರತೆ ಯೋಜನೆ ಜಾರಿಗೆ ತರಬೇಕು. ಸರ್ಕಾರಿ ನೌಕರರಿಗೆ, ಎಂಎಲ್ಎಗಳು ಮಂತ್ರಿಗಳಿಗೆ ಎಲ್ಲ ವರ್ಗದವರಿಗೂ ಪ್ರತಿ ತಿಂಗಳು ಸಂಬಳ ಸಿಗುತ್ತದೆ ಹಾಗೆ ರೈತರಿಗೆ ಆದಾಯ ಭದ್ರತೆ ಬೇಕು
3.ದೇಶದ ಉದ್ಯಮಿಗಳಿಗೆ 10 ಲಕ್ಷ ಕೋಟಿ ಸಾಲ ಮನ್ನ ಮಾಡಿದ ರೀತಿಯಲ್ಲಿಯೇ ಅತಿವೃಷ್ಟಿ ಹಾನಿ ಕರೋನ ಸಂಕಷ್ಟದಿಂದ ತತ್ತರಿಸಿರುವ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಆಗಬೇಕು.
4. ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಡ್ಡಿ ರಹಿತವಾಗಿ ಕೃಷಿ ಸಾಲ ನೀಡಬೇಕು. ಈ ಮೂಲಕ ದೇಶದ 135 ಕೋಟಿ ಜನರಿಗೆ ಆಹಾರ ಉತ್ಪಾದನೆ ಮಾಡುವ ರೈತನಿಗೆ ಮನ್ನಣೆ ಸಿಗಬೇಕು
5.ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ಕೈ ಬಿಡುವುದಾಗಿ ಭರವಸೆ ನೀಡಬೇಕು,
6. ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಶಾಸನ ಜಾರಿ ಮಾಡಬೇಕು
7.ಫಸಲ್ ಭೀಮಾ ಬೆಳೆ ವಿಮೆ ಯೋಜನೆ ತಿದ್ದುಪಡಿ ಮಾಡಬೇಕು, ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಅನ್ವಯ ಮಾಡಬೇಕು
8.ಅಭಿವೃದ್ಧಿ ಹೆಸರಿನಲ್ಲಿ ರೈತರ ಕೃಷಿ ಭೂಮಿ ಭೂಸ್ವಾದಿನ ಪ್ರಕ್ರಿಯೆ ನಿಲ್ಲಿಸಬೇಕು, ಅಗತ್ಯ ಸಂದರ್ಭಗಳಲ್ಲಿ ರೈತರ ಅನುಮತಿ ಪಡೆಯಬೇಕು ಆಂತಹ ರೈತರಿಗೆ ಜೀವನ ಭದ್ರತೆ ಒದಗಿಸಬೇಕು
9.ಗ್ರಾಮೀಣ ಯುವಕರ ವಲಸೆ ತಪ್ಪಿಸಿ ಕೃಷಿಯಲ್ಲಿ ತೊಡಗಿಸಿಕೊಳ್ಳಲು, ಗ್ರಾಮೀಣ ಭಾಗದಲ್ಲಿ ಕೃಷಿ ಪೂರಕ ಯೋಜನೆಗಳನ್ನು ಕೈಗೆತ್ತಿಕೊಳ್ಳ ಬೇಕು . ಕೃಷಿ ಉತ್ಪನ್ನ, ಹಾಗೂ ಕೃಷಿ ಉಪಕರಣಗಳ ಮೇಲೆ ವಿಧಿಸಿರುವ ಜಿಎಸ್‌ಟಿ ರದ್ದುಗೊಳಿಸಬೇಕು.
10.ವಿದೇಶಿ ಬಹುರಾಷ್ಟ್ರೀಯ FDI ಬಂಡವಾಳಶಾಹಿ ಕಂಪನಿಗಳು ಚಿಲ್ಲರೆ ಮಾರಾಟ ವ್ಯವಸ್ಥೆಗೆ ಕಡಿವಾಣ ಹಾಕಬೇಕು. ಆ ಮೂಲಕ ಸಣ್ಣ ಮಾರಟಗಾರರಿಗೆ ನೆರವಾಗಬೇಕು.
11.ರಾಜ್ಯದ ಕಬ್ಬು ಬೆಳೆಗಾರರಿಗೆ ವಂಚನೆ ಎಸೆಗುತ್ತಿರುವ ಕಾನೂನುಗಳನ್ನ ಉಲ್ಲಂಘನೆ ಮಾಡುತ್ತಿರುವ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಅವರ ಕುಟುಂಬಸ್ಥರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳಬಾರದು.
12.ರಾಜ್ಯದಲ್ಲಿ ಜಾರಿಗೆ ತಂದಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಬೇಕು
13.ಕಬ್ಬಿನ ಹೆಚ್ಚುವರಿ ದರ 150 ರೂ ನಿಗದಿ ಆದೇಶಕ್ಕೆ ಇರುವ ತಡೆಯಾಜ್ನೆಯನ್ನು ತೆರವುಗೊಳಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ,
14. ರಾಜ್ಯ ಸರ್ಕಾರ ಇಬ್ಬಗೆ ನೀತಿ ಅನುಸರಣೆ ಮಾಡದೆ ರೈತರಿಗೆ ಕಾರ್ಖಾನೆಗಳಿಂದ ಹೆಚ್ಚುವರಿ ಹಣ ಕೂಡಿಸಬೇಕು
ರಾಜ್ಯದ ರೈತರ ಪ್ರಣಾಳಿಕೆಗೆ ರಾಜ್ಯದ ಯಾವುದೆ ಪ್ರಬಲ ಪಕ್ಷ ಬಹಿರಂಗ ಒಪ್ಪಿಗೆ ಸೂಚಿಸಿದರೆ ,ಆಂತಹ ಪಕ್ಷಕ್ಕೆ ಬಹಿರಂಗವಾಗಿ ಬೆಂಬಲಿಸಲು ಕರೆ ನೀಡಲಾಗುವುದು ಎಂದು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ ಇದಾದ ನಂತರ ಈ ವಿಷಯಗಳ ಕುರಿತು ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸದೆ. ನಿರ್ಲಕ್ಷ್ಯ ಮಾಡಿದರೆ ಬಿಜೆಪಿ ಮಂತ್ರಿಗಳು ಹಳ್ಳಿಗಳಿಗೆ ಬಂದಾಗ ಘೇರಾವ್ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.