Karnataka Times
Trending Stories, Viral News, Gossips & Everything in Kannada

K.J George: ರೈತರಿಗೆ ಗುಡ್ ನ್ಯೂಸ್ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್

advertisement

ಬೇಸಿಗೆ ಬಂತೆಂದರೆ ಸಾಕು ಒಂದೆಡೆ ರಣ ಬಿಸಿಲು ಮತ್ತೊಂದೆಡೆ ಶುರುವಾಗುವ ಲೋಡ್ ಶಡ್ಡಿಂಗ್. ಹೌದು! ಬೇಸಿಗೆ ಕಾಲ ಎಂದರೆ ಕರ್ನಾಟಕದ ರೈತರು ಕಂಗೆಡುತ್ತಾರೆ. ಎಕೆಂದರೆ ಈ ಸಲ ತೀವ್ರ ಬರದ ನಡುವೆಯೂ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ರಾಜ್ಯ ಸರಕಾರ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಇನ್ನು ಶೀಘ್ರವಾಗಿ ರಾಜ್ಯದಲ್ಲಿ ನೀರಾವರಿ ಪಂಪ್ ಸೆಟ್ ಗಳಿಗೆ 7 ತಾಸು ವಿದ್ಯುತ್ ಸರಬರಾಜು ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಕೆ.ಜೆ.ಜಾರ್ಜ್ ಹೇಳಿರುವುದು ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಬೇಸಿಗೆ ಸಮಯದಲ್ಲಿ ರಾಜ್ಯದಲ್ಲಿ ವಿದ್ಯುತ್ ಕೊರತೆಯುಂಟಾಗದಂತೆ ಸಾಕಷ್ಟು ಕ್ರಮ ವಹಿಸಲಾಗುತ್ತಿದೆ. ಈ ನಡುವೆ ರಾಜ್ಯದ ರೈತರಿಗೆ ಅನುಕೂಲವಾಗುವಂತೆ ದಿನಕ್ಕೆ 7 ತಾಸು ವಿದ್ಯುತ್ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ ಎಂದಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ, ವಾಡಿಕೆಗಿಂತ ಮಳೆ ಕಡಿಮೆ ಇದೆ. ಗಣಿಗಾರಿಕೆ ಪ್ರದೇಶಗಳಲ್ಲಿ ಮಳೆಯಾದ ಹಿನ್ನೆಲೆ ಕಲ್ಲಿದ್ದಲು ಒದ್ದೆಯಾಗಿದೆ. ಇದರಿಂದ ಥರ್ಮಲ್ ಪ್ಲ್ಯಾಂಟ್ ಗೆ ಕಲ್ಲಿದ್ದಲು ಸಮಸ್ಯೆ ಎದುರಾಗಿದೆ. ಸೋಲಾರ್ ವಿದ್ಯುತ್ ಉತ್ಪತ್ತಿಯೂ ಕಡಿಮೆಯಾಗಿದೆ. ಕರ್ನಾಟಕ ಕತ್ತಲೆಗೆ ಹೋಗಿದೆ ಎಂಬ ಆರೋಪ ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೆ ಶಾಲೆಗಳಲ್ಲಿ ಸಹ 7 ತಾಸು ವಿದ್ಯುತ್ ಪೂರೈಸಲು ಕುಸುಮ್ ಯೋಜನೆಯನ್ನು ರೂಪಿಸುತ್ತಿದ್ದೇವೆ ಎಂದರು.

advertisement

ಸಪ್ಟೆಂಬರ್ 22 ಕ್ಕಿಂತ ಮೊದಲು ಅಕ್ರಮ ಸಕ್ರಮ ಮತ್ತು ಶೀಘ್ರ ವಿದ್ಯುತ್ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 4.30 ಲಕ್ಷ ಅರ್ಜಿ ಈಗಾಗಲೇ ಸಲ್ಲಿಕೆಯಾಗಿದೆ. ಅಲ್ಲದೆ ವಿಲೇವಾರಿಗೆ ಸುಮಾರು 6000 ಕೋಟಿ ರೂಪಾಯಿ . ನೀರಾವರಿ ಪಂಪ್ ಸೆಟ್ ಗಳಿಗೆ 4500 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆಯ 2.64 ಲಕ್ಷ ಫಲಾನುಭವಿಗಳು ಬಾಕಿ ಉಳಿಸಿಕೊಂಡಿದ್ದ ವಿದ್ಯುತ್ ಶುಲ್ಕ 389.66 ಕೋಟಿ ರೂ. ಮನ್ನಾ ಮಾಡಿ, ಗೃಹ ಜ್ಯೋತಿ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ.

ಜುಲೈ ತಿಂಗಳಿನಿಂದ ಅನ್ವಯವಾಗುವಂತೆ ಜಾರಿಗೊಳಿಸಿರುವ ಗೃಹ ಜ್ಯೋತಿಯ ಲಾಭ ಪಡೆಯಲು ಇದ್ದ ತೊಡಕನ್ನು ನಿವಾರಿಸಿ, 200 ಯೂನಿಟ್ ವರೆಗೆ ವಿದ್ಯುತ್ ಉಚಿತವಾಗಿ ಬಳಸಲು ಈ ಮೂಲಕ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆ.ಜೆ.ಜಾರ್ಜ್ (K.J. George) ತಿಳಿಸಿದ್ದಾರೆ.

advertisement

Leave A Reply

Your email address will not be published.