ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿ ಕಾರಣ ಐಪಿಎಲ್ನಿಂದ (IPL) ಬ್ಯಾನ್(Ban) ಆಗಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಎಸ್ ಶ್ರೀಶಾಂತ್(Sreesanth) ಸತತ 10 ವರ್ಷಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಂದು ಅವರು ಐಪಿಎಲ್ ನಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳುತ್ತಿಲ್ಲ. ಹೌದು 2023ರ ಐಪಿಎಲ್ ಆರಂಭಕ್ಕೆ ದಿನಗಣನೆ ಶುರುವಾಗಿದ್ದು ಇದೇ ಮಾರ್ಚ್ 31ರಂದು ಉದ್ಘಾಟನಾ ಪಂದ್ಯ ನಡೆಯಲಿದೆ.
ಹೌದು ಮಾರ್ಚ್ 31ಕ್ಕೆ ನಡೆಯುವ ಮೊದಲ ಪಂದ್ಯದಲ್ಲಿ ಐಪಿಎಲ್ ನ ಹಾಲಿ ಚಾಂಪಿಯನ್ ಆಗಿರುವ ಗುಜರಾತ್ ಟೈಟನ್ಸ್(Gujarath Titans) ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ. ತಂಡಗಳ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ(Narendra Modi) ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಸದ್ಯ ಸ್ಟಾರ್ ಸ್ಪೋರ್ಟ್ಸ್(Star Sports) ಪ್ಯಾನೆಲ್ ಡಿಸ್ಕಶನ್ ಸದಸ್ಯರ ಹೆಸರುಗಳನ್ನು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ಎಸ್. ಶ್ರೀಶಾಂತ್ ಹೆಸರು ಇದೆ.ಹೌದು, ಈ ಬಾರಿಯ ಐಪಿಎಲ್ನಲ್ಲಿ ಶ್ರೀಶಾಂತ್ ಸ್ಟಾರ್ ಸ್ಪೋರ್ಟ್ಸ್ ಮಲಯಾಳಂ ಚಾನೆಲ್ನಲ್ಲಿ ವೀಕ್ಷಕ ವಿಶ್ಲೇಷಣೆಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ.ಈ ಮೂಲಕ 10 ವರ್ಷಗಳ ಬಳಿಕ ಶ್ರೀಶಾಂತ್ ಐಪಿಎಲ್ ನಲ್ಲಿ ಭಾಗವಹಿಸುತ್ತಿದ್ದಾರೆ.
ಶ್ರೀಶಾಂತ್ ಪ್ರತಿಭಾನ್ವಿತ ಆಟಗಾರನಾಗಿದ್ದು ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್, ಕೊಚ್ಚಿ ಟಸ್ಕರ್ಸ್ ಕೇರಳ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ಪರ ಒಟ್ಟು 44 ಪಂದ್ಯಗಳನ್ನಾಡಿದ್ದರು.ಆದರೆ 2013 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುವಾಗ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದರಿಂದ ಐಪಿಎಲ್ ನಿಂದ ಅವರನ್ನ ಬ್ಯಾನ್ ಮಾಡಲಾಗಿತ್ತು. ಆದರೆ ಕಳೆದ ವರ್ಷ ಈ ಆರೋಪದಿಂದ ಹೊರ ಬಂದ ಶ್ರೀಶಾಂತ್, ಈ ಬಾರಿಯ ಐಪಿಎಲ್ ಹರಾಜಿನಲ್ಲಿ ತಮ್ಮ ಹೆಸರು ನೊಂದಾಯಿಸಿದ್ದರು.ವಿಪರ್ಯಾಸ ಎಂದರೆ ಅವರನ್ನು ಯಾವುದೇ ತಂಡ ಕೊಂಡುಕೊಳ್ಳಲು ಮುಂದೆ ಬರಲಿಲ್ಲ ಹಾಗಾಗಿ ಅವರು ವೀಕ್ಷಕ ವರದಿಗಾರನಾಗಿ ಮತ್ತೆ ಐಪಿಎಲ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.